Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 500 ಕೋಟಿಗೆ ತಲುಪಿದ ‘ಶಕ್ತಿ ಯೋಜನೆ’:...

500 ಕೋಟಿಗೆ ತಲುಪಿದ ‘ಶಕ್ತಿ ಯೋಜನೆ’: ನಾಳೆ ವಿಶಿಷ್ಟ ಟಿಕೆಟ್ ವಿತರಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ13 July 2025 7:57 PM IST
share
500 ಕೋಟಿಗೆ ತಲುಪಿದ ‘ಶಕ್ತಿ ಯೋಜನೆ’: ನಾಳೆ ವಿಶಿಷ್ಟ ಟಿಕೆಟ್ ವಿತರಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕೆಎಸ್ಸಾರ್ಟಿಸಿ, ಬಿಸಿಎಂಟಿ ಸೇರಿದಂತೆ ಸಾರಿಗೆ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ‘ಶಕ್ತಿ ಯೋಜನೆ’ಯಡಿ ಪ್ರಮಾಣ ಮಾಡಿದ ಮಹಿಳೆಯರ ಸಂಖ್ಯೆ 500 ಕೋಟಿಗೆ ತಲುಪಿದೆ. ಹೀಗಾಗಿ ಇಲ್ಲಿನ ಕುಮಾರಪಾರ್ಕ್ ಈಸ್ಟ್‌ ಗೇಟ್ ಬಳಿ ಇರುವ ಸಿಎಂ ಗೃಹ ಕಚೇರಿ ನಾಳೆ (ಜು.14) ‘ಶಕ್ತಿ’ ಯೋಜನೆಯ ವಿಶಿಷ್ಟ ಟಿಕೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಣೆ ಮಾಡಲಿದ್ದಾರೆ.

ಕಾಂಗ್ರೆಸ್ ಸರಕಾರವು ರಾಜ್ಯದ ಎಲ್ಲ ಮಹಿಳೆಯರಿಗೆ ರಾಜ್ಯದೊಳಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸುವ ನಿಟ್ಟಿನಲ್ಲಿ ‘ಶಕ್ತಿ’ ಯೋಜನೆಯನ್ನು 2023ರ ಜೂನ್ 11ರಿಂದ ಜಾರಿ ಮಾಡಿದೆ. ಈ ಯೋಜನೆಯಡಿಯಲ್ಲಿ ಕೆಎಸ್ಸಾರ್ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಮತ್ತು ಎನ್‍ಡಬ್ಲ್ಯೂಆರ್‌ಟಿಸಿ ಸಾರಿಗೆ ಬಸ್‍ಗಳಲ್ಲಿ ಮಹಿಳೆಯರು ರಾಜ್ಯದೊಳಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ರಾಜ್ಯದ ಸಾರಿಗೆ ನಿಗಮಗಳ ಬಸ್‍ಗಳಲ್ಲಿ ಪ್ರತಿನಿತ್ಯ ಸುಮಾರು ಒಂದು ಕೋಟಿಗೂ ಅಧಿಕ ಮಂದಿ ಪ್ರಯಾಣಿಸುತ್ತಾರೆ. ಅದರಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ 80 ಲಕ್ಷದವರೆಗೆ ಇದ್ದು, ‘ಶಕ್ತಿ ಯೋಜನೆ’ಯಡಿ ಪ್ರತಿನಿತ್ಯ 20 ಕೋಟಿ ರೂ.ಗಳಷ್ಟು ಉಚಿತ ಟಿಕೆಟ್ ಅನ್ನು ಮಹಿಳೆಯರಿಗೆ ವಿತರಿಸಲಾಗುತ್ತಿದೆ.

‘ಶಕ್ತಿ ಯೋಜನೆ’-500 ಕೋಟಿ: ಶಕ್ತಿ ಯೋಜನೆಯಡಿ ಪ್ರಯಾಣಿಸಿದವರ ಮಹಿಳಾ ಪ್ರಯಾಣಿಕರ ಸಂಖ್ಯೆ ಈಗಾಗಲೇ 500 ಕೋಟಿಗೆ ತಲುಪಿದ್ದು, ನಾಳೆ ನಡೆಯುವ ವಿಶಿಷ್ಟ ಟಿಕೆಟ್ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ‘ಶಕ್ತಿ ಯೋಜನೆ’ಯ 500ಕೋಟಿಯ ವಿಶೇಷ ಟಿಕೆಟ್ ಅನ್ನು ಸಾಂಕೇತಿಕವಾಗಿ ಮಹಿಳಾ ಪ್ರಯಾಣಿಕರಿಗೆ ವಿತರಣೆ ಮಾಡಲಿದ್ದಾರೆ.

‘ಮಹಿಳಾ ಸಬಲೀಕರಣದ ಮಹತ್ವಾಕಾಂಕ್ಷೆಯೊಂದಿಗೆ ಪ್ರಾರಂಭಿಸಲಾದ ಸಾರಿಗೆ ಬಸ್‍ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ‘ಶಕ್ತಿ' ಯೋಜನೆಯ ಫಲಾನುಭವಿಗಳ ಸಂಖ್ಯೆ ಇಂದಿಗೆ 500ಕೋಟಿ ಗಡಿಯನ್ನು ದಾಟಿ ದಾಖಲೆ ಬರೆದಿದೆ. ಪ್ರಪಂಚಾದ್ಯಂತ ಹಾಗೂ ದೇಶದಾದ್ಯಂತ ಒಂದು ಸರಕಾರ ಹೆಣ್ಣುಮಕ್ಕಳಿಗೆ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಕಲ್ಪಿಸಿರುವ ಏಕೈಕ ಸರಕಾರ ನಮ್ಮ ಕರ್ನಾಟಕ ಕಾಂಗ್ರೆಸ್ ಸರಕಾರ ಎಂಬ ಹೆಮ್ಮೆ, ಸಾರ್ಥಕತೆ ನಮಗಿದೆ’

-ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X