Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಾಣಿಜ್ಯ ತೆರಿಗೆ ಇಲಾಖೆಗೆ 1.20 ಲಕ್ಷ...

ವಾಣಿಜ್ಯ ತೆರಿಗೆ ಇಲಾಖೆಗೆ 1.20 ಲಕ್ಷ ಕೋಟಿ ರೂ.ಗುರಿ ನಿಗದಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ5 Dec 2025 10:38 PM IST
share
ವಾಣಿಜ್ಯ ತೆರಿಗೆ ಇಲಾಖೆಗೆ 1.20 ಲಕ್ಷ ಕೋಟಿ ರೂ.ಗುರಿ ನಿಗದಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ವಾಣಿಜ್ಯ ತೆರಿಗೆ ಇಲಾಖೆಗೆ 2025-26ನೆ ಹಣಕಾಸು ಸಾಲಿನಲ್ಲಿ 1.20 ಲಕ್ಷ ಕೋಟಿ ರೂ.ಗಳ ಗುರಿಯನ್ನು ನಿಗದಿಪಡಿಸಲಾಗಿದೆ. ನವೆಂಬರ್ ಅಂತ್ಯದವರೆಗೆ 80 ಸಾವಿರ ಕೋಟಿ ರೂ. ಗುರಿ ನಿಗದಿಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ತೆರಿಗೆ ಸಂಗ್ರಹ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಇದರಲ್ಲಿ ನಿವ್ವಳ ಸಂಗ್ರಹ 72,131 ಕೋಟಿ ರೂ. ಮಾಡಲಾಗಿದ್ದು, ಶೇ.90ರಷ್ಟು ಸಾಧನೆ ಮಾಡಲಾಗಿದೆ. ಇದರಲ್ಲಿ ಜಿಎಸ್ಟಿ 53,522 ಕೋಟಿ ರೂ., ಕೆಎಸ್ಟಿ 17,595 ಕೋಟಿ ರೂ.ಮತ್ತು ವೃತಿ ತೆರಿಗೆ 1014 ಕೋಟಿ ರೂ.ಸಂಗ್ರಹಿಸಲಾಗಿದೆ ಎಂದು ಹೇಳಿದರು.

ಆರಂಭದ ಐದು ತಿಂಗಳಲ್ಲಿ ಎಪ್ರಿಲ್‍ನಿಂದ ಆಗಸ್ಟ್ ವರೆಗೆ ಶೇ.12ರಷ್ಟು ಬೆಳವಣಿಗೆ ದರ ಸಾಧಿಸಲಾಗಿದೆ. ಆದರೆ ಜಿಎಸ್ಟಿ ದರಗಳಲ್ಲಿ ಬದಲಾವಣೆ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹದಲ್ಲಿ ಕಳೆದ ಮೂರು ತಿಂಗಳಲ್ಲಿ ಕೇವಲ ಶೇ.3ರಷ್ಟು ಬೆಳವಣಿಗೆ ದರವನ್ನು ಸಾಧ್ಯವಾಗಿದೆ. ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಶೇ.100ರಷ್ಟು ನಿಗದಿತ ಗುರಿಯನ್ನು ಸಾಧಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ನವೆಂಬರ್ ಅಂತ್ಯದವರೆಗೆ ಸುಮಾರು 13 ಸಾವಿರ ತಪಾಸಣೆಗಳನ್ನು ಮಾಡಿದ್ದು, ತಪಾಸಣೆಯಿಂದ 3183 ಕೋಟಿ ರೂ.ತೆರಿಗೆ ಸಂಗ್ರಹಿಸಲಾಗಿದೆ. ವಾಣಿಜ್ಯ ತೆರಿಗೆ ವಿಚಕ್ಷಣಾ ದಳ ತೆರಿಗೆ ಕಳ್ಳತನವನ್ನು ತಪ್ಪಿಸಲು ನಿರಂತರ ತಪಾಸಣೆಗಳನ್ನು ಕೈಗೊಳ್ಳಬೇಕು. ತೆರಿಗೆ ತಪ್ಪಿಸಲು ಯಾವುದೇ ಅವಕಾಶ ಇಲ್ಲದಂತೆ ಕಟ್ಟೆಚ್ಚರದಿಂದ ಕಾರ್ಯ ನಿರ್ವಹಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಹಿಂದಿನ ವರ್ಷಗಳ ಅಂಕಿ ಅಂಶಗಳನ್ನು ಬಳಸಿಕೊಂಡು, ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಿ, ಅನಾಲಿಸಿಸ್ ವಿಭಾಗವನ್ನು ಬಲಪಡಿಸಬೇಕು. ನಕಲಿ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ ಪ್ರಕರಣಗಳ ಮೇಲೆ ನಿಗಾ ಇರಿಸಿ ಅಂತಹ ಪ್ರಕರಣಗಳಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸಲು ಮುಖ್ಯಮಂತ್ರಿ ಸೂಚನೆ ನೀಡಿದರು.

ಅಬಕಾರಿ ತೆರಿಗೆ: 2025-26ನೆ ಹಣಕಾಸು ಸಾಲಿನಲ್ಲಿ 43 ಸಾವಿರ ಕೋಟಿ ರೂ. ಅಬಕಾರಿ ತೆರಿಗೆ ಗುರಿಯನ್ನು ನಿಗದಿಪಡಿಸಲಾಗಿದ್ದು, ನವೆಂಬರ್ ಅಂತ್ಯದವರೆಗೆ 26,215 ಕೋಟಿ ರೂ. ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಅಬಕಾರಿ ತೆರಿಗೆ ಸಂಗ್ರಹದಲ್ಲಿ ಶೇ.10.46ರಷ್ಟು ಬೆಳವಣಿಗೆ ದರವನ್ನು ಸಾಧಿಸಲಾಗಿದೆ. ನಿಗದಿತ ಗುರಿಯನ್ನು ಸಾಧಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದರು.

ಸಭೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ತೆರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X