Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹೊಸ ವರ್ಷಾಚರಣೆ | ಅಹಿತಕರ ಘಟನೆಗಳಿಗೆ...

ಹೊಸ ವರ್ಷಾಚರಣೆ | ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ; ಪೊಲೀಸರಿಗೆ ಸಿಎಂ ತಾಕೀತು

ವಾರ್ತಾಭಾರತಿವಾರ್ತಾಭಾರತಿ29 Dec 2025 6:43 PM IST
share
ಹೊಸ ವರ್ಷಾಚರಣೆ | ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ; ಪೊಲೀಸರಿಗೆ ಸಿಎಂ ತಾಕೀತು

ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಗೃಹ ಇಲಾಖೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಸುರಕ್ಷತೆಗೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಹೊಸ ವರ್ಷಾಚರಣೆ ಬಳಿಕ ಬೆಂಗಳೂರಿನಲ್ಲಿ ಸುಲಭವಾಗಿ ಜನರು ತಮ್ಮ ಮನೆಗಳಿಗೆ ಹಿಂತಿರುಗಲು ಅನುಕೂಲವಾಗುವಂತೆ ಹೆಚ್ಚಿನ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್‍ಗಳ ವ್ಯವಸ್ಥೆ ಮಾಡಬೇಕು. ಅದರಲ್ಲೂ, ಮಹಾತ್ಮಾ ಗಾಂಧಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಕೋರಮಂಗಲ, ಇಂದಿರಾನಗರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಜನದಟ್ಟಣೆಗಳಿಂದ ಯಾವುದೇ ಅನಾಹುತವಾಗದಂತೆ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಬೇಕು ಎಂದು ಅವರು ಹೇಳಿದರು.

20 ಸಾವಿರ ಪೊಲೀಸರು: ಭದ್ರತೆಗಾಗಿ 20 ಸಾವಿರ ಪೊಲೀಸರನ್ನು ಬೆಂಗಳೂರು ನಗರದಲ್ಲಿ ನಿಯೋಜಿಸಲಾಗುತ್ತಿದ್ದು, ಬೇರೆ ಜಿಲ್ಲೆಗಳಿಂದ 1200 ಪೊಲೀಸರನ್ನು ಈ ಬಾರಿ ನಿಯೋಜಿಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು. ಆಗ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿ, ಮಹಿಳಾ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಬೇಕು. ಚೆನ್ನಮ್ಮ ಪಡೆಗಳನ್ನು ಸಕ್ರಿಯವಾಗಿ ನಿಯೋಜಿಸಬೇಕು ಎಂದು ಸೂಚನೆ ನೀಡಿದರು.

ನಗರದಲ್ಲಿ ಹೊಸ ವರ್ಷಾಚರಣೆ ಸುಗಮವಾಗಿ ನಡೆಯಲು ಸಾಧ್ಯವಾಗುವಂತೆ 4 ನಿಯಂತ್ರಣ ಕೊಠಡಿ, 78 ಕಾವಲು ಗೋಪುರ, 164 ಮಹಿಳಾ ಸಹಾಯ ವಾಣಿ ವ್ಯವಸ್ಥೆ ಮಾಡಲಾಗಿದೆ. ಕಳೆದ ಮೂರು ದಿನಗಳಲ್ಲಿ ವಾಹನ ಚಾಲನೆ ಸಂದರ್ಭದಲ್ಲಿ ಮದ್ಯ ಸೇವನೆ ಆರೋಪದಡಿ 3,500 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಬಳಿಕ ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಗರದಲ್ಲಿರುವ 50 ಮೇಲ್ಸುತುವೆಗಳಲ್ಲಿ ದ್ವಿಚಕ್ರ ವಾಹನಗಳ ಸಂಚಾರ ತಾತ್ಕಲಿಕವಾಗಿ ಬಂದ್ ಮಾಡುವಂತೆ ಸೂಚಿಸಿದರು.

ದುಷ್ಕರ್ಮಿಗಳ ಮೇಲೆ ನಿರಂತರ ನಿಗಾ ಇರಿಸಬೇಕು. ಬೈಕ್ ಸವಾರರಿಗೆ ವ್ಹೀಲಿಂಗ್ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಮಾದಕ ವಸ್ತು ಚಟುವಟಿಕೆಗಳ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಒಂದು ವೇಳೆ ಪ್ರಕರಣಗಳು ಬೆಳಕಿಗೆ ಬಂದರೆ ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್, ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X