Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ Fact Check ಘಟಕ ರಚನೆಗೆ...

ರಾಜ್ಯದಲ್ಲಿ Fact Check ಘಟಕ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ

ಸುಳ್ಳು ಸುದ್ದಿ ಪತ್ತೆ-ನಿಯಂತ್ರಣ-ಕಠಿಣ ಶಿಕ್ಷೆಗೆ ತುರ್ತು ಕ್ರಮ

ವಾರ್ತಾಭಾರತಿವಾರ್ತಾಭಾರತಿ21 Aug 2023 7:42 PM IST
share
ರಾಜ್ಯದಲ್ಲಿ Fact Check ಘಟಕ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ

ಬೆಂಗಳೂರು, ಆ.21: ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಹಸಿರು ನಿಶಾನೆ ತೋರಿದರು.

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದ ಸಭೆಯಲ್ಲಿ, ಸುಳ್ಳು ಸುದ್ದಿಗಳು ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್ ಗಳ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಅನುಮೋದನೆ ನೀಡಿದರು.

ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ರಚನೆ: ಫ್ಯಾಕ್ಟ್ ಚೆಕ್ ಘಟಕವು ಮೇಲುಸ್ತುವಾರಿ ಸಮಿತಿ, ಎಸ್‍ಒಪಿಸಿ ಪರಿಶೀಲನೆ, ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಸತ್ಯ ತಪಾಸಣೆ ತಂಡ ವಿಶ್ಲೇಷಣ ತಂಡವನ್ನು ಒಳಗೊಳ್ಳಲಿದೆ ಹಾಗೂ ಸಾಮಥ್ರ್ಯ ವರ್ಧನೆ ತಂಡ ರಚನೆ ಮಾಡಿ ವ್ಯವಸ್ಥಿತವಾಗಿ ತಂತ್ರಜ್ಞಾನ ಬಳಕೆ ಮಾಡಬಹುದು ಎಂದು ಸಭೆಯಲ್ಲಿ ವಿವರಿಸಲಾಯಿತು.

ಬೆಂಗಳೂರು ಪೊಲೀಸ್ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಿದ್ದರೂ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಅಗತ್ಯವಿದೆ. ಎಐ(ಕೃತಕ ಬುದ್ಧಿಮತ್ತೆ) ಬಳಕೆ ಮಾಡಿ ಡೀಪ್ ಫೇಕ್ ಕೂಡ ಉಪಯೋಗ ಮಾಡಲಾಗುತ್ತಿದೆ. ಇದು ಸುಳ್ಳು ಸುದ್ದಿ ಹರಡುವವರಿಗೆ ಅನುಕೂಲ ವಾಗುತ್ತದೆ ಎಂದು ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಫೇಕ್(ಸುಳ್ಳು) ಸುದ್ದಿ ಜಾಲ ಜಾಗತಿಕವಾಗಿ ಬಾಲ್ಯಾವಸ್ಥೆಯಲ್ಲಿದ್ದರೂ ಕಾಲಾಂತರದಲ್ಲಿ ವ್ಯಾಪಕವಾಗಿ ಬಳಕೆಯಾಗುವ ಸಾಧ್ಯತೆಯೂ ಇದೆ. ಸುಳ್ಳು ಸುದ್ದಿ ಬಳಕೆ ಮಾಡುವವರಿಗೆ ಶಿಕ್ಷೆ ಕೂಡ ಆಗಬೇಕು. ಈ ಸಮಿತಿ ಕೂಡಲೆ ರಚಿಸಿ ಸಾಮಥ್ರ್ಯ ಹೆಚ್ಚಿಸುವ ಕೆಲಸ ಆಗಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟರು.

ಸುಳ್ಳು ಸುದ್ದಿ ಗುರುತಿಸುವುದು, ಕಾನೂನು ಸುವ್ಯವಸ್ಥೆ ಕಾಪಾಡಲು ಇದು ಅತ್ಯಗತ್ಯ. ಆರಂಭಿಕ ಹಂತದಲ್ಲಿ ಐಟಿ, ಬಿಟಿ ಇಲಾಖೆ ಸಹಕರಿಸುತ್ತದೆ. ಕಾನೂನಿನ ವ್ಯಾಪ್ತಿಯಲ್ಲಿ ತರಲು ಕ್ರಮ ವಹಿಸಬೇಕು ನಂತರ ಘಟಕವು ಗೃಹ ಇಲಾಖೆಯ ವ್ಯಾಪ್ತಿಯಲ್ಲಿಯೆ ಇರುವುದು ಸೂಕ್ತ ಎಂದು ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.

ಕಂದಾಯ ಸಚಿವ ಕೃಷ್ಣಬೈರೇಗೌಡ ಮಾತನಾಡಿ, ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಯಿಂದ ಸುಳ್ಳುಸುದ್ದಿ ಹರಡುವುದನ್ನು ನಿಯಂತ್ರಿಸಿ ಇದು ಶಿಕ್ಷಾರ್ಹ ಅಪರಾಧ ಎಂದು ಜನರಿಗೆ ಮನವರಿಕೆಯಾಗಬೇಕು ಎಂದರು.

ಸಭೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಪೆÇಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X