Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ...

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ʼಕಲಾಲೋಕ ಮಳಿಗೆಗೆʼ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ವಾರ್ತಾಭಾರತಿವಾರ್ತಾಭಾರತಿ11 Nov 2025 3:36 PM IST
share
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ʼಕಲಾಲೋಕ ಮಳಿಗೆಗೆʼ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ ಇಲಾಖೆಯ ಮೂಲಕ ನಿರ್ಮಿಸಿರುವ ಆಕರ್ಷಕ ಮತ್ತು ಸುಸಜ್ಜಿತ ಕಲಾಲೋಕ ಮಳಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರಕಲಾ ರಚನೆ ಮತ್ತು ಘಂಟಾನಾದದ ಮೂಲಕ ಮಂಗಳವಾರ ಉದ್ಘಾಟಿಸಿದರು.

ಜೊತೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ್‌, ಕೆ.ಜೆ.ಜಾರ್ಜ್, ಕೆ.ಎಚ್.ಮುನಿಯಪ್ಪ, ಶರಣಬಸಪ್ಪ ದರ್ಶನಾಪುರ, ಪ್ರಿಯಾಂಕ್ ಖರ್ಗೆ ಇದ್ದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ಕರ್ನಾಟಕದ ಕೈಗಾರಿಕಾ ಭೂಪಟದಲ್ಲಿ ಇದೊಂದು ಸಂತಸದ ಕ್ಷಣವಾಗಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನವು ಜನನಿಬಿಡತೆಯಲ್ಲಿ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಪ್ರತೀದಿನವೂ ಇಲ್ಲಿ ಹತ್ತಾರು ಸಾವಿರ ಪ್ರಯಾಣಿಕರು ಬರುತ್ತಿರುತ್ತಾರೆ. ಇಂಥವರಿಗೆ ಇಲ್ಲಿಗೆ ಬಂದ ತಕ್ಷಣವೇ ಕರ್ನಾಟಕದ ಅಭಿಮಾನದ ಪಯಣ ಅರ್ಥವಾಗಬೇಕು ಎನ್ನುವ ಉದ್ದೇಶದಿಂದ ಕಲಾಲೋಕ ಮಳಿಗೆ ನಿರ್ಮಿಸಲಾಗಿದೆ. ಇದರ ಮೂಲಕ ಕರ್ನಾಟಕದ ಹೆಮ್ಮಯ ಉತ್ಪನ್ನಗಳಿಗೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಪ್ರಚಾರ, ಬ್ರ್ಯಾಂಡಿಂಗ್ ಮತ್ತು ಮಾರಾಟ ಸಾಧಿಸಲಾಗುವುದು ಎಂದಿದ್ದಾರೆ.

ಸಚಿವ ಎಂ ಬಿ ಪಾಟೀಲ ಮಾತನಾಡಿ, ಟರ್ಮಿನಲ್-2ರ ಸಮೀಪ ನಿರ್ಮಿತವಾಗಿರುವ ಕಲಾಲೋಕ ಮಳಿಗೆಯಲ್ಲಿ ರಾಜ್ಯದ ಪಾರಂಪರಿಕ ಉತ್ಪನ್ನಗಳಾದ ಮೈಸೂರು ಸ್ಯಾಂಡಲ್ ಸೋಪ್, ಗಂಧದ ಎಣ್ಣೆ, ಅಗರಬತ್ತಿ, ಮೈಸೂರು ಸಿಲ್ಕ್, ಚನ್ನಪಟ್ಟಣದ ಬೊಂಬೆ, ಲಿಡ್ಕರ್ ಉತ್ಪನ್ನಗಳು, ಬಗೆಬಗೆಯ ಪರಿಮಳವಿರುವ ಕಾಫಿಪುಡಿ ಮತ್ತು ಪಾನೀಯ, ಕೈಮಗ್ಗದ ಉತ್ಪನ್ನಗಳು, ಇಳಕಲ್ ಸೀರೆ, ಲಂಬಾಣಿ ಉಡುಪು, ಗಂಧದ ಕಲಾಕೃತಿ, ಬಿದರಿ ಕಲಾಕೃತಿ, ಮೈಸೂರು ಶೈಲಿಯ ಕಲಾಕೃತಿಗಳು, ಮುಂತಾದವು ಸಿಗಲಿವೆ. ಒಟ್ಟಾರೆಯಾಗಿ ಜಿ.ಐ. ಮಾನ್ಯತೆ ಹೊಂದಿರುವ ರಾಜ್ಯದ 45 ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಎರಡೂ ಈ ಮಳಿಗೆಯಲ್ಲಿ ನಡೆಯಲಿದೆ ಎಂದಿದ್ದಾರೆ.

ರಾಜ್ಯವೇ ಹೆಮ್ಮೆಪಡುವಂತಹ ಪಾರಂಪರಿಕ ಮತ್ತು ಭೌಗೋಳಿಕ ವಿಶಿಷ್ಟತೆಯ ಮನ್ನಣೆ ಹೊಂದಿರುವ ಉತ್ಪನ್ನಗಳನ್ನು ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ಜಾಗತಿಕ ಮಟ್ಟದಲ್ಲಿ ಪರಿಚಯಿಸುವುದು ಈ ಮಳಿಗೆ ಆರಂಭದ ಆಶಯವಾಗಿದೆ. ಇದಕ್ಕೆ ಸರಕಾರಿ ಸ್ವಾಮ್ಯದ ಕೆ.ಎಸ್.ಡಿ.ಎಲ್, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಯಮಿತ, ಕೆಎಸ್ಐಸಿ, ಕಾಫಿ ಬೋರ್ಡ್ ಮತ್ತು ಲಿಡ್ಕರ್ ಮುಂತಾದ ಉದ್ದಿಮೆಗಳು ಕೈಜೋಡಿಸಿವೆ. ವಿಮಾನ ನಿಲ್ದಾಣಕ್ಕೆ ಬರುವವರಿಗೆ ಮತ್ತು ಇಲ್ಲಿಂದ ಹೋಗುವವರಿಗೆ ಒಂದೇ ತಾಣದಲ್ಲಿ ಕರ್ನಾಟಕದ ಅಸ್ಮಿತೆ ಇಲ್ಲಿ ಅನುಭವಕ್ಕೆ ಸಿಗಲಿದೆ ಎಂದು ಅವರು ಬಣ್ಣಿಸಿದ್ದಾರೆ.

ವಿಮಾನ ನಿಲ್ದಾಣದ ಆಡಳಿತ ಮಂಡಳಿಯು ಕಲಾಲೋಕ ಮಳಿಗೆಗೆ ಟರ್ಮಿನಲ್ -2ರ ಡೊಮೆಸ್ಟಿಕ್ ಬೇನಲ್ಲಿ 132 ಚ.ಮೀ. ಜಾಗವನ್ನು ಬಾಡಿಗೆಗೆ ಒದಗಿಸಿದೆ. ಟರ್ಮಿನಲ್-2ರಲ್ಲೇ ಅಂತಾರಾಷ್ಟ್ರೀಯ ಪ್ರಯಾಣಿಕರ ನಿರ್ಗಮನ ವಲಯದಲ್ಲಿ 140 ಚ.ಮೀ. ಜಾಗದಲ್ಲಿ ಇಂತಹುದೇ ಮತ್ತೊಂದು ಮಳಿಗೆ ಆರಂಭಿಸಲಾಗುವುದು. ಮಳಿಗೆಯನ್ನು ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಪಡಿಯಚ್ಚಿನಂತೆ ಮೋಹಕವಾಗಿ ವಿನ್ಯಾಸಗೊಳಿಸಲಾಗಿದೆ. ಇದರ ಹಿಂದೆ ದೂರದೃಷ್ಟಿ ಇದೆ ಎಂದು ಅವರು ನುಡಿದಿದ್ದಾರೆ.

ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಎಸ್ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ, ಜವಳಿ ಆಯುಕ್ತರಾದ ಜ್ಯೋತಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಪಿ.ಬಸವರಾಜು ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X