Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ...

ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

► ಬೆರಳತುದಿಯಲ್ಲಿ 30 ಇಲಾಖೆಗಳ 150 ಸೇವೆ ಲಭ್ಯ ► ತಮ್ಮ ಇಷ್ಟದ ಭಾಷೆಯಲ್ಲೇ ಮಾಹಿತಿ ಕೊಡುವ ಎಐ ಚಾಟ್ ಬಾಟ್

ವಾರ್ತಾಭಾರತಿವಾರ್ತಾಭಾರತಿ11 Feb 2025 10:12 PM IST
share
ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಿದರು.

ಮೈಕ್ರೋಸಾಫ್ಟ್ ಕಂಪನಿಯ ನೆರವಿನೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ರೂಪಿಸಿರುವ ಈ ವ್ಯವಸ್ಥೆಯು ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಅನುಮೋದನೆ, ನವೀಕರಣ, ತಿದ್ದುಪಡಿ, ಕುಂದುಕೊರತೆಗಳಿಗೆ ಪರಿಹಾರಗಳನ್ನು ಸರಳಗೊಳಿಸಲಿದ್ದು, ಕ್ಷಿಪ್ರಗತಿಯಲ್ಲಿ ಹೂಡಿಕೆ ನನಸಾಗುವಂತೆ ಮಾಡಲಿದೆ. ಜತೆಗೆ ಹೂಡಿಕೆದಾರರಿಗೆ ಕೇಂದ್ರ ಸರಕಾರದ ಮಟ್ಟದಲ್ಲಿ ಸಿಗಬೇಕಾದ ಸೇವೆಗಳನ್ನು ಕೂಡ ಇದರ ಮೂಲಕ, ಅಧಿಕಾರಿಶಾಹಿಯ ಅಡೆತಡೆಯಿಲ್ಲದೆ ಪಡೆದುಕೊಳ್ಳಬಹುದು.

ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಇದುವರೆಗೂ ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಸೇವೆಗಳು ಬೇರೆಬೇರೆ ಇಲಾಖೆಗಳಲ್ಲಿ ಚದುರಿ ಹೋಗಿದ್ದವು. ಇದರಿಂದ ಎಲ್ಲವೂ ಮಂದಗತಿಗೆ ಸಿಲುಕಿ ಸ್ತಬ್ಧವಾಗುತ್ತಿದ್ದವು. ಈಗ ರಾಜ್ಯ ಸರಕಾರದ 30 ಇಲಾಖೆಗಳ ಎಲ್ಲ ಸೇವೆಗಳನ್ನೂ ಒಂದೆಡೆ ತರಲಾಗಿದೆ. ಕೃತಕ ಬುದ್ಧಿಮತ್ತೆಯನ್ನು ಆಧರಿಸಿ ವಿನ್ಯಾಸಗೊಳಿಸಿರುವ ಚಾಟ್-ಬಾಟ್ ಸೌಲಭ್ಯದಲ್ಲಿ ಉದ್ಯಮಿಗಳು ತಮಗೆ ಬೇಕಾದ ಸೇವೆ, ಮಾಹಿತಿಗಳನ್ನು ತಮ್ಮ ಇಷ್ಟದ ಭಾಷೆಯಲ್ಲಿ ಬೆರಳತುದಿಯಲ್ಲೇ ಪಡೆದುಕೊಳ್ಳಬಹುದು. ಈ ಸೇವೆಗಳು ಮೊಬೈಲಿನಲ್ಲಿ ಕೂಡ ಸಿಗಲಿವೆ ಎಂದು ವಿವರಿಸಿದರು.

ಈ ಏಕಗವಾಕ್ಷಿ ವ್ಯವಸ್ಥೆಯಡಿ `ಕರ್ನಾಟಕ ಉದ್ಯೋಗ ಮಿತ್ರ’ದ ಮೂಲಕ ಹೂಡಿಕೆದಾರರಿಗೆ ಪ್ರಮಾಣಪತ್ರ ಆಧರಿತ ಅನುಮೋದನೆ (ಎಬಿಸಿ) ನೀಡಲಾಗುವುದು. ಹೀಗಾಗಿ ಉದ್ಯಮಿಗಳು ಅನುಮೋದನೆಗಳಿಗೆ ಕಾಯದೆ, ತಕ್ಷಣವೇ ಕಟ್ಟಡ ಕಾಮಗಾರಿ ಮತ್ತು ಇತರೆ ಸಿದ್ಧತೆ ಆರಂಭಿಸಬಹುದು. ಈ ವ್ಯವಸ್ಥೆಯನ್ನು ರಾಷ್ಟ್ರ ಮಟ್ಟದ ಏಕಗವಾಕ್ಷಿ ವ್ಯವಸ್ಥೆಯೊಂದಿಗೆ ಬೆಸೆಯಲಾಗಿದೆ. ಈ ಪೋರ್ಟರ್‌ನಲ್ಲಿ ಕೈಗಾರಿಕೆಗೆ ಬೇಕಾದ ಭೂಮಿಯ ಹುಡುಕಾಟ, ಮಂಜೂರಾತಿ, ಕಟ್ಟಡ ನಕಾಶೆಗೆ ಅನುಮೋದನೆ ಮುಂತಾದ ಕೆಐಎಡಿಬಿ ಸೇವೆಗಳೂ ಸಿಗಲಿವೆ ಎಂದು ಅವರು ಮಾಹಿತಿ ನೀಡಿದರು.

ಹೊಸ ವ್ಯವಸ್ಥೆಯಲ್ಲಿ ಜಿಐಎಸ್ ಆಧರಿತ ಕೈಗಾರಿಕಾ ಮಾಹಿತಿಯನ್ನೂ ಒದಗಿಸಲಾಗುವುದು. ಹೀಗಾಗಿ ಕೈಗಾರಿಕೆಗೆ ತಮ್ಮ ಸ್ವಂತ ಅಥವಾ ಕಂದಾಯ ಭೂಮಿಯನ್ನು ಉಪಯೋಗಿಸಿಕೊಳ್ಳುವವರಿಗೆ ಅನುಕೂಲವಾಗಲಿದೆ. ನಿರಾಕ್ಷೇಪಣಾ ಪತ್ರ ಇತ್ಯಾದಿಗಳಿಗೆ ವಿಝರ್ಡ್ ತಂತ್ರಜ್ಞಾನವನ್ನುಳ್ಳ ಸಾಧನ ಇದರಲ್ಲಿದೆ. ಹಾಗೆಯೇ, ಉದ್ಯಮಿಗಳು ತಮಗೆ ಸಿಗಲಿರುವ ಪ್ರೋತ್ಸಾಹನಾ ಭತ್ತೆ, ರಿಯಾಯಿತಿ ಮತ್ತು ವಿನಾಯಿತಿಗಳನ್ನು `ವಿಝರ್ಡ್ ಮತ್ತು ಕ್ಯಾಲ್ಕ್ಯುಲೇಟರ್’ ಮೂಲಕ ತಿಳಿದುಕೊಳ್ಳಬಹುದು ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

ಹೂಡಿಕೆಯ ವಿಚಾರದಲ್ಲಿ ನೆರೆಹೊರೆ ರಾಜ್ಯಗಳಿಂದ ತೀವ್ರ ಸ್ಪರ್ಧೆ ಇದೆ. ಹೀಗಾಗಿ ಕೈಗಾರಿಕಾ ಯೋಜನೆಗಳ ವಿಚಾರದಲ್ಲಿ ಉಳಿದ ಪ್ರಕ್ರಿಯೆಗಳು ಸುಲಭವೂ ತ್ವರಿತವೂ ಆಗಿರಲೇಬೇಕು. ಇಲ್ಲದಿದ್ದರೆ, ಅವಕಾಶಗಳು ಬೇರೆಯವರ ಪಾಲಾಗುತ್ತವೆ. ಏಕಗವಾಕ್ಷಿ ವ್ಯವಸ್ಥೆ ತರುತ್ತೇವೆಂದು ಮಾತು ಕೊಟ್ಟಿದ್ದೆವು. ಅದು ಈಗ ಈಡೇರಿದೆ. ಇದು ಸುಲಲಿತ ವಾಣಿಜ್ಯ ಸಂಸ್ಕೃತಿಯಲ್ಲಿ ದಾಪುಗಾಲು.

ಎಂ.ಬಿ.ಪಾಟೀಲ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X