Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜನತಾ...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜನತಾ ದರ್ಶನ; ಡಿ.ಐ.ಎಸ್ ತಂತ್ರಾಂಶ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ27 Nov 2023 12:00 PM IST
share
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜನತಾ ದರ್ಶನ; ಡಿ.ಐ.ಎಸ್ ತಂತ್ರಾಂಶ  ಲೋಕಾರ್ಪಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಸಿದರು.

ಅಹವಾಲು ಸ್ವೀಕರಿಸಲು ಒಟ್ಟು 20 ಕೌಂಟರ್ ಸ್ಥಾಪಿಸಿದ್ದು, ಅಂಗವಿಕಲರು ಮತ್ತು ಹಿರಿಯ ನಾಗರಿಕರಿಗೆ ಎರಡು ಪ್ರತ್ಯೇಕ ಕೌಂಟರ್ ಮೀಸಲಿರಿಸಲಾಗಿದೆ. ಆಗಮಿಸುವ ನಾಗರಿಕರಿಗೆ ಕುಡಿಯುವ ನೀರು, ಆಹಾರ ಹಾಗೂ ಶೌಚಗೃಹ ಮತ್ತು ಇತರ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್‌ 2.೦ ಹಾಗೂ ಜಿಲ್ಲೆಗಳ ಪ್ರಗತಿ ಪರಿಶೀಲನೆ ಕುರಿತಂತೆ ಡಿ.ಐ.ಎಸ್. ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಇ-ಆಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸಾರ್ವಜನಿಕ ಸಂಗ್ರಹಣೆ ಪೋರ್ಟಲ್ 2.0

ರಾಜ್ಯದ ಆಯವ್ಯಯದಲ್ಲಿ ಕೈಗೊಂಡ ಎಲ್ಲಾ ಇಲಾಖೆಗಳ ರೂ 1 ಕೋಟಿಗಿಂತ ಹೆಚ್ಚಿನ ಕಾಮಗಾರಿಗಳ ಪ್ರಗತಿಯನ್ನು ಸಮಯಬದ್ದವಾಗಿ ಮೇಲ್ವಿಚಾರಣೆ ಮಾಡಲು ಕಾಂಟ್ರಾಕ್ಟ್ ಮ್ಯಾನೇಜ್ ಮೆಂಟ್ ಮಾಡ್ಯೂಲ್ ನಲ್ಲಿ ಡ್ಯಾಷ್ ಬೋರ್ಡ್ ಅನ್ನು ಇ-ಆಡಳಿತ ಇಲಾಖೆಯ ವತಿಯಿಂದ ಸಿದ್ದಪಡಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಲಸಂಪನ್ಮೂಲ ಇಲಾಖೆ, ಲೋಕೋಪಯೋಗಿ ಇಲಾಖೆ ಮತ್ತು ಅದರ ವ್ಯಾಪ್ತಿಯಲ್ಲಿರುವ ಎಲ್ಲಾ ಮಂಡಳಿಗಳು ಮತ್ತು ನಿಗಮಗಳಡಿ ನೀಡಲಾದ ರೂ.50 ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಮೌಲ್ಯದ ಎಲ್ಲಾ ಟೆಂಡರ್ಗಳಿಗೆ ಮೂರು ತಿಂಗಳ ಅವಧಿಗೆ ಪ್ರಾಯೋಗಿಕ ಆಧಾರದ ( Pilot Basis) ಮೇಲೆ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್ನಲ್ಲಿ ಗುತ್ತಿಗೆ ನಿರ್ವಹಣಾ ಮಾಡ್ಯೂಲ್ನ್ನು ಹೆಚ್ಚಿನ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಅದರಂತೆ ಇ-ಪ್ರೊಕ್ಯೂರ್ಮೆಂಟ್ ವೇದಿಕೆಯಲ್ಲಿ ಒಟ್ಟು 40,000 ಟೆಂಡರ್ ಗಳು ಪ್ರಕಟಿಸಲಾಗಿದ್ದು ಈ ಪೈಕಿ ಆಯ್ಕೆಯಾದ 3 ಇಲಾಖೆಗಳ ರೂ 50 ಲಕ್ಷಕ್ಕಿಂತ ಹೆಚ್ಚು ಮೌಲ್ಯದ ಕೇವಲ 3165 ಟೆಂಡರ್ ಗಳನ್ನು ಈ ಯೋಜನೆಗಾಗಿ ಗುರುತಿಸಲಾಗಿದೆ. ಸದರಿ ಇಲಾಖೆಗಳಿಂದ ಕಾಂಟ್ರಾಕ್ಟ್ ಮ್ಯಾನೇಜ್ಮೆಂಟ್ ಸಿಸ್ಟಮ್ ದಲ್ಲಿ ಕಡ್ಡಾಯವಾಗಿ ತಂತ್ರಾಂಶದ ಮೂಲಕ ಮಾಹಿತಿಯನ್ನು ಡ್ಯಾಶ್ ಬೋರ್ಡ್ ದಲ್ಲಿ ಅಳವಡಿಸಲಾಗುವುದು.

ಡಿಐಎಸ್ ತಂತ್ರಾಂಶ

ಮುಖ್ಯಮಂತ್ರಿಗಳು ಸೆಪ್ಟಂಬರ್ 12 & 13 ರಂದು ನಡೆದ ‘ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಮ್ಮೇಳನ’ದಲ್ಲಿ ಜಿಲ್ಲೆಗಳಿಗೆ ಸಂಬಂಧಪಟ್ಟಂತೆ, 28 ವಿಷಯಗಳ ಬಗ್ಗೆ ಪರಿಶೀಲನೆ ನಡೆಸಿ ಪ್ರತಿ ತಿಂಗಳೂ ವರದಿಯನ್ನು ಸಲ್ಲಿಸಲು ಎಲ್ಲಾ ‘ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ’ಗಳಿಗೆ ಸೂಚಿಸಿರುತ್ತಾರೆ. ಹಾಗೂ ಅಭಿವೃದ್ಧಿ ಆಯುಕ್ತರಿಗೆ ಸದರಿ ವರದಿಗಳನ್ನು ವಿಶ್ಲೇಷಿಸಿ ಮಂಡಿಸುವಂತೆ ಸೂಚಿಸಲಾಗಿರುತ್ತದೆ.

ಅದರಂತೆ, ಕ್ರಮ ವಹಿಸಿ, ಇ-ಆಡಳಿತ ಇಲಾಖೆಯಿಂದ ‘ಡಿಐಎಸ್ ತಂತ್ರಾಂಶ’ವನ್ನು ಅಭಿವೃದ್ಧಿಪಡಿಸಲಾಗಿರುತ್ತದೆ.

https://districtincharge.karnataka.gov.in

(1) ಈ ತಂತ್ರಾಂಶದ ಮೂಲಕ ಎಲ್ಲಾ ಜಿಲ್ಲಾ ಉಸ್ತುವಾರಿ ಅಧಿಕಾರಿಗಳು ‘online’ ವರದಿಯನ್ನು ಸಲ್ಲಿಸಲು ಅನುವು ಮಾಡಿಕೊಡಲಾಗಿದೆ.

(2) ಈ ತಂತ್ರಾಂಶದ ಮೂಲಕ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಇತರೆ ಇಲಾಖಾ ಕಾರ್ಯದರ್ಶಿಗಳಿಗೆ ಹಾಗೂ ಜಿಲ್ಲಾಧಿಕಾರಿ /ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜಿಲ್ಲೆಯಲ್ಲಿರುವ ಸಮಸ್ಯೆ(issues)ಗಳ ಕುರಿತು ಮಾಹಿತಿ ದಾಖಲಿಸಬಹುದು.

(3) ಸದರಿ ಸಮಸ್ಯೆಗಳಿಗೆ (To Issues) ಇಲಾಖಾ ಕಾರ್ಯದರ್ಶಿ/ ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಈ ತಂತ್ರಾಂಶದ ಮೂಲಕವೇ ತೆಗೆದುಕೊಂಡ ಕ್ರಮದ ಕುರಿತು ವರದಿ ಸಲ್ಲಿಸಬಹುದಾಗಿರುತ್ತದೆ.

(4) ಸಲ್ಲಿಸಲಾಗಿರುವ ಜಿಲ್ಲಾ ವರದಿಗಳ ಕುರಿತ ಎಮ್ಐಎಸ್ ವರದಿಗಳನ್ನು ಮಾನ್ಯ ಮುಂತ್ರಿಗಳು ಈ ತಂತ್ರಾಂಶದಲ್ಲಿ ವೀಕ್ಷಿಸಬಹುದಾಗಿದೆ.

(5) ತಂತ್ರಾಂಶದ ಬಳಕೆ ಬಗ್ಗೆ ಎಲ್ಲಾ ಇಲಾಖಾ/ಜಿಲ್ಲಾ ಸಮಾಲೋಚಕರಿಗೆ ತರಬೇತಿಯನ್ನು ಸಹ ನೀಡಲಾಗಿದೆ.

(6) ತಂತ್ರಾಂಶದ ಲಿಂಕ್ ಅನ್ನು ಇ-ಕಛೇರಿ ಮುಖಪುಟದಲ್ಲಿ ನೀಡಲಾಗಿದ್ದು, ಅಲ್ಲಿಂದಲೇ ಬಳಕೆದಾರರು ತಂತ್ರಾಂಶ ಪ್ರವೇಶಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X