Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ...

ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ22 Nov 2023 10:29 PM IST
share
ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿಯ ನಾಲ್ಕು ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹ ಜ್ಯೋತಿ, ಗೃಹ ಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತು ಸಂಬಂಧಪಟ್ಟ ಇಲಾಖೆಗಳ ಸಚಿವರು, ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸರಣಿ ಸಭೆಗಳನ್ನು ನಡೆಸಿದರು.

ಶಕ್ತಿ ಯೋಜನೆ: ಶಕ್ತಿ ಯೋಜನೆ ಜಾರಿಯಾದಾಗಿನಿಂದ ನ.21ರ ವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿದ್ದು, ಇನ್ನೆರಡು ದಿನಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ನೂರು ಕೋಟಿ ದಾಟಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಪ್ರತಿ ತಿಂಗಳ ಪ್ರಯಾಣಿಕರ ಸಂಖ್ಯೆ ಪ್ರಸಕ್ತ ಸಾಲಿನ ಎಪ್ರಿಲ್ ನಲ್ಲಿ 84.17 ಲಕ್ಷ ಇದ್ದು, ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ 1.15 ಕೋಟಿ ವರೆಗೆ ಹೆಚ್ಚಳ ವಾಗಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಒಟ್ಟು 828 ಸಾಮಾನ್ಯ ಹಾಗೂ 145 ವಿದ್ಯುತ್ ಚಾಲಿತ ಬಸ್ ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ. ಬಸ್ ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.

ಅನ್ನಭಾಗ್ಯ: ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್ ತಿಂಗಳಲ್ಲಿ 1,10,96,413 ಕಾರ್ಡುದಾರರಿಗೆ ಡಿಬಿಟಿ ಮಾಡಲಾಗಿದೆ. ಈ ವರೆಗೆ ಒಟ್ಟು 2,444.11 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. 12.95 ಲಕ್ಷ ಚೀಟಿದಾರರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಮೂಲಕ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. 2.60 ಲಕ್ಷ ಹೊಸ ಖಾತೆಗಳನ್ನು ಅಂಚೆ ಕಚೇರಿಗಳಲ್ಲಿ ತೆರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

7.67 ಲಕ್ಷ ಅನರ್ಹ ಪಡಿತರ ಚೀಟಿಗಳ ವಿಷಯದಲ್ಲಿ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಪ್ರಕರಣಗಳಲ್ಲಿ ಯಜಮಾನರು ಊರಿನಲ್ಲಿ ಇಲ್ಲದ ಕಾರಣ ತಾಂತ್ರಿಕ ಸಮಸ್ಯೆ ಆಗಿರುವುದರಿಂದ, ಎರಡನೇ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸುವ ಕುರಿತಂತೆ ಸಚಿವ ಸಂಪುಟದ ಮುಂದೆ ಮಂಡಿಸಿ. ಡಿ.31 ರೊಳಗೆ ಎಲ್ಲ ಅರ್ಹರಿಗೆ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದರು.

ಗೃಹ ಜ್ಯೋತಿ: ಗೃಹಜ್ಯೋತಿ ಯೋಜನೆಯಡಿ ಈವರೆಗೆ 1.62 ಕೋಟಿ ಜನ ನೋಂದಾಯಿಸಿಕೊಂಡಿದ್ದು, 1.50 ಕೋಟಿ ಕುಟುಂಬಗಳಿಗೆ ಈ ಯೋಜನೆಯ ಸೌಲಭ್ಯ ದೊರೆಯುತ್ತಿದೆ. ಆಗಸ್ಟ್ ನಿಂದ ಈವರೆಗೆ 2900 ಕೋಟಿ ರೂ. ಭರಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳು ಇಲಾಖೆಯ ದತ್ತಾಂಶದಲ್ಲಿಯೇ ಗೃಹಜ್ಯೋತಿ ಯೋಜನೆಯಡಿ ಸೇರ್ಪಡೆಗೊಳಿಸಲಾಗಿದೆ. ಈ ಫಲಾನುಭವಿಗಳು ಯಾರೂ ಗೃಹಜ್ಯೋತಿಯಿಂದ ಬಿಟ್ಟು ಹೋಗಬಾರದು ಎಂದು ಸಿದ್ದರಾಮಯ್ಯ ತಿಳಿಸಿದರು.

ಗೃಹಲಕ್ಷ್ಮಿ ಯೋಜನೆ: ನವೆಂಬರ್ ತನಕ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1.10 ಕೋಟಿ ಫಲಾನುಭವಿಗಳಿಗೆ ನೆರವು ವರ್ಗಾವಣೆ ಮಾಡಲಾಗಿದೆ. 2 ಲಕ್ಷ ಫಲಾನುಭವಿಗಳಿಗೆ ಸಂಬಂಧಿಸಿದ ತೊಡಕು ನಿವಾರಿಸಲಾಗುತ್ತಿದೆ. ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್ ಲಿಂಕ್ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳನ್ನು ಬ್ಯಾಂಕಿಗೆ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ಕ್ರಮ ಕೈಗೊಳ್ಳಬೇಕು. ಡಿಸೆಂಬರ್ ಒಳಗೆ ಎಲ್ಲ ಅರ್ಹ ಫಲಾನುಭವಿಗಳಿಗೆ ನಗದು ವರ್ಗಾವಣೆಯನ್ನು ಖಾತರಿ ಪಡಿಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.

ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್ ಖಾತೆ ಆಧಾರ್ ಲಿಂಕ್ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದರು.

ಇಲಾಖಾ ವಾರು ನಡೆದ ಸಭೆಗಳಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್, ಸಾರಿಗೆ ಸಚಿವ ರಾಂಲಿಂಗಾರೆಡ್ಡಿ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X