ಗುರುವಾರ ದಿಲ್ಲಿಗೆ ತೆರಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: 16ನೇ ಕೇಂದ್ರ ಹಣಕಾಸು ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸಂಜೆ 4 ಗಂಟೆಗೆ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊಸದಿಲ್ಲಿಗೆ ಪ್ರಯಾಣ ಬೆಳೆಸಲಿದ್ದು, ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಶುಕ್ರವಾರ ಬೆಳಗ್ಗೆ ಹಣಕಾಸು ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಲಿರುವ ಮುಖ್ಯಮಂತ್ರಿ, ರಾಜ್ಯದ ವಿವಿಧ ಯೋಜನೆಗಳಿಗೆ ಕೇಂದ್ರ ಸರಕಾರದಿಂದ ಬರಬೇಕಿರುವ ಅನುದಾನಗಳ ಕುರಿತು ಚರ್ಚೆ ನಡೆಸಿ, ಮನವಿ ಪತ್ರವನ್ನು ಸಲ್ಲಿಸಲಿದ್ದಾರೆ. ಅಲ್ಲದೇ, ಇದೇ ವೇಳೆ ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದಾರೆ.
Next Story





