Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚಿಕ್ಕಮಗಳೂರು: ಕಾಡಾನೆಗಳ ದಾಳಿಯಿಂದ...

ಚಿಕ್ಕಮಗಳೂರು: ಕಾಡಾನೆಗಳ ದಾಳಿಯಿಂದ ಕಾಫಿ, ಅಡಿಕೆ ತೋಟಗಳನ್ನು ರಕ್ಷಿಸಿಕೊಳ್ಳಲು ಬಾಳೆ ತೋಟ ನಾಶ ಮಾಡಿದ ರೈತರು

ವಾರ್ತಾಭಾರತಿವಾರ್ತಾಭಾರತಿ9 Sep 2023 4:36 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಚಿಕ್ಕಮಗಳೂರು: ಕಾಡಾನೆಗಳ ದಾಳಿಯಿಂದ ಕಾಫಿ, ಅಡಿಕೆ ತೋಟಗಳನ್ನು ರಕ್ಷಿಸಿಕೊಳ್ಳಲು ಬಾಳೆ ತೋಟ ನಾಶ ಮಾಡಿದ ರೈತರು

ಚಿಕ್ಕಮಗಳೂರು, ಸೆ.8: ಕಾಫಿನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಶುಕ್ರವಾರ ರಾತ್ರಿ ತಾಲೂಕಿನ ಆಲ್ದೂರು ಹೋಬಳಿ ವ್ಯಾಪ್ತಿಯ ಅರೇನೂರು ಗ್ರಾಮದಲ್ಲಿ ರೈತರಿಬ್ಬರ ಜಮೀನುಗಳುಗೆ ನುಗ್ಗಿದ ಕಾಡಾನೆಗಳು ಕಾಫಿ, ಅಡಿಕೆ, ತೆಂಗಿನಮರ, ಬಾಳೆ ತೋಟಗಳನ್ನು ನಾಶ ಮಾಡಿವೆ. ಕಾಡಾನೆಗಳ ಗುಂಪು ಬಾಳೆ ಹಣ್ಣಿಗಾಗಿ ಕಾಫಿ, ಅಡಿಕೆ ತೋಟಗಳಿಗೆ ಹೆಚ್ಚಾಗಿ ದಾಳಿ ಮಾಡುತ್ತಿದ್ದು, ಇದರಿಂದ ಬೇಸತ್ತ ರೈತರು ಕಾಡಾನೆಗಳ ದಾಳಿಯಿಂದ ಕಾಫಿ, ಅಡಿಕೆ ತೋಟಗಳನ್ನು ರಕ್ಷಿಸಿಕೊಳ್ಳಲು ಬಾಳೆ ತೋಟಗಳನ್ನೇ ನಾಶ ಮಾಡುತ್ತಿದ್ದಾರೆ.

ತಾಲೂಕಿನ ಆಲ್ದೂರು ಹೋಬಳಿ ವ್ಯಾಪ್ತಿಯ ಕಂಚಿಕಲ್ಲು ದುರ್ಗಾ ಗ್ರಾಮದಲ್ಲಿ ಇತ್ತೀಚೆಗೆ ಕಾಡಾನೆಯೊಂದು ಕೂಲಿ ಕಾರ್ಮಿಕನ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಈ ಘಟನೆ ಬಳಿಕ ಕಾಡಾನೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಕಾಡುಗಳಿಗೆ ಓಡಿಸಿದ್ದರು. ಆದರೆ ಇದೇ ಗ್ರಾಮದ ಸಮೀಪದಲ್ಲಿರುವ ಆರೇನೂರು ಗ್ರಾಮದ ಹಲವು ತೋಟಗಳಿಗೆ ಶುಕ್ರವಾರ ರಾತ್ರಿ ದಾಳಿ ಮಾಡಿರುವ ಕಾಡಾನೆಗಳು ಅಪಾರ ಪ್ರಮಾಣದಲ್ಲಿ ಕಾಫಿ, ಅಡಿಕೆ, ಬಾಳೆ, ತೆಂಗು ಬೆಳೆಯನ್ನು ನಾಶ ಮಾಡಿವೆ. ಗ್ರಾಮದ ಮಲ್ಲೇಶ್‍ಗೌಡ, ಮಹೇಂದ್ರ ಎಂಬವರ ತೋಟಗಳಿಗೆ ನುಗ್ಗಿರುವ ಕಾಡಾನೆಗಳು 30 ತೆಂಗಿನ ಮರಗಳನ್ನು ಉರುಳಿಸಿ ನಾಶ ಮಾಡಿದ್ದು, ನೂರಾರು ಅಡಿಕೆ, ಕಾಫಿ ಗಿಡಗಳನ್ನು ಮುರಿದು ಹಾಕಿವೆ. ಅಲ್ಲದೇ ಬಾಳೆ ತೋಟಗಳನ್ನೂ ನಾಶ ಮಾಡಿವೆ.

ಅರೇನೂರು ಗ್ರಾಮದ ಸಮೀಪದಲ್ಲಿರುವ ಕಾಡುಗಳಲ್ಲಿ ಸುಮಾರು 8 ಕಾಡಾನೆಗಳು ಬೀಡು ಬಿಟ್ಟಿದ್ದು, ಹಗಲಿನ ವೇಳೆ ನಾಪತ್ತೆಯಾಗುವ ಕಾಡಾನೆಗಳು, ರಾತ್ರಿ ವೇಳೆ ಕಾಡಂಚಿನ ಗ್ರಾಮಗಳಿಗೆ ದಾಳಿ ಮಾಡಿ ಬೆಳೆ ನಾಶ ಮಾಡುತ್ತಿವೆ. ಕಾಡಾನೆಗಳ ಹಾವಳಿಯಿಂದ ಗ್ರಾಮಸ್ಥರು ನೆಮ್ಮದಿ ಕಳೆದುಕೊಂಡಿದ್ದು, ಪ್ರಾಣಭೀತಿಯಲ್ಲಿ ಬದುಕುವಂತಾಗಿದೆ. ರಾತ್ರಿ ವೇಳೆ ಹಾಗೂ ಹಗಲಿನಲ್ಲಿ ಎಲ್ಲೆಂದರಲ್ಲಿ ತಿರುಗಲು ಸಾಧ್ಯವಾಗದಂತಾಗಿದ್ದು, ತೋಟಗಳಿಗೆ ಹೋಗಿ ನಿರ್ವಹಣೆ ಮಾಡಲು ಅಂಜುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮೀಣ ಭಾಗದ ಶಾಲಾ ಕಾಲೇಜು ಮಕ್ಕಳು ಕಾಡು ದಾರಿಯಲ್ಲಿ ನಡೆದುಕೊಂಡು ಬರಲೂ ಸಾಧ್ಯವಾಗದಂತಾಗಿದೆ. ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಗಳ ಹಾವಳಿ ಎಷ್ಟೇ ಪ್ರಯತ್ನಪಟ್ಟರೂ ಕಾಡಾನೆಗಳ ಹಾವಳಿ ಮಾತ್ರ ನಿಯಂತ್ರಣಕ್ಕೆ ಬಾರದಂತಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಬಾಳೆ ತೋಟ ನಾಶ ಮಾಡುತ್ತಿರುವ ರೈತರು: ಆಲ್ದೂರು, ಮೂಡಿಗೆರೆ ಭಾಗದಲ್ಲಿ ಕಾಫಿ, ಅಡಿಕೆ ತೋಟಗಳ ಮಧ್ಯೆ ಉಪಬೆಳೆಯಾಗಿ ಬಾಳೆ ಕೃಷಿಯನ್ನು ರೈತರು ಹೆಚ್ಚಾಗಿ ಮಾಡುತ್ತಿದ್ದು, ಬಾಳೆಕಾಯಿ, ಹಣ್ಣುಗಳನ್ನು ತಿನ್ನಲು ಕಾಡಾನೆಗಳು ತೋಟಗಳಿಗೆ ರಾತ್ರಿ ವೇಳೆ ದಾಳಿ ಮಾಡುತ್ತಿವೆ. ಬಾಳೆ ಗಿಡಗಳನ್ನ ತಿನ್ನಲು ಬರುವ ಕಾಡಾನೆಗಳು ಕಾಫಿ, ಅಡಿಕೆ ಗಿಡ, ಮರಗಳನ್ನು ತುಳಿದು ನಾಶ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಕಾಫಿ, ಅಡಿಕೆ ತೋಟಗಳ ಮಧ್ಯೆ ಬಾಳೆ ಬೆಳೆದ ರೈತರು ಬಾಳೆ ಗಿಡಗಳನ್ನು ಕಡಿದು ಹಾಕಿ ಕಾಫಿ, ಅಡಿಕೆ ತೋಟಗಳನ್ನು ಕಾಡಾನೆಗಳಿಂದ ರಕ್ಷಣೆ ಮಾಡಲು ಮುಂದಾಗಿದ್ದಾರೆ.

ಶನಿವಾರ ಅರೆನೂರು ಗ್ರಾಮ ಸಮೀಪದ ಹಕ್ಕಿಮಕ್ಕಿ ಗ್ರಾಮದ ರೈತ ಸಾಗರ್ ಎಂಬವರು ತನ್ನ ಕಾಫಿ ತೋಟದಲ್ಲಿ ಬೆಳೆದಿದ್ದ ನೂರಾರು ಬಾಳೆ ಗಿಡಗಳನ್ನು ಕಡಿದು ನಾಶ ಮಾಡಿದ ಘಟನೆ ನಡೆದಿದೆ. ಕಾಡಾನೆಗಳ ನಿರಂತರ ದಾಳಿಗೆ ಬೇಸತ್ತಿರುವ ಈ ಭಾಗದ ಹಲವು ರೈತರು ತಮ್ಮ ತೋಟಗಳನ್ನು ರಕ್ಷಣೆ ಮಾಡಿಕೊಳ್ಳುವ ಉದ್ದೇಶದಿಂದ ಬಾಳೆ ತೋಟಗಳನ್ನೇ ನಾಶ ಮಾಡಲಾರಂಭಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಈ ಭಾಗದಲ್ಲಿರುವ ಕಾಡಾನೆಗಳನ್ನು ಸೆರೆ ಹಿಡಿದು ಸ್ಥಳಾಂತರ ಮಾಡಬೇಕೆಂದು ರೈತ ಸಾಗರ್ ಮನವಿ ಮಾಡಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X