Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ;...

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ; ಕಾಯ್ದೆ ರೂಪಿಸುವವರೆಗೆ ಎಸ್ಒಪಿ ಜಾರಿಗೆ ನಿರ್ದೇಶಿಸಿ ಪಿಐಎಲ್ ಇತ್ಯರ್ಥಪಡಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ23 Feb 2026 7:36 PM IST
share
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ; ಕಾಯ್ದೆ ರೂಪಿಸುವವರೆಗೆ ಎಸ್ಒಪಿ ಜಾರಿಗೆ ನಿರ್ದೇಶಿಸಿ ಪಿಐಎಲ್ ಇತ್ಯರ್ಥಪಡಿಸಿದ ಹೈಕೋರ್ಟ್

ಬೆಂಗಳೂರು: ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮ ಮತ್ತು ಗುಂಪುಗೂಡುವ ಸ್ಥಳಗಳಲ್ಲಿ ಜನಸಂದಣಿಯ ನಿಯಂತ್ರಣ) ಮಸೂದೆಯು ಕಾಯ್ದೆ ರೂಪ ಪಡೆಯಯವವರೆಗೆ ಜನಸಂದಣಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಬಿಡುಗಡೆ ಮಾಡಿರುವ ಪ್ರಮಾಣೀಕೃತ ಕಾರ್ಯವಿಧಾನ (ಎಸ್‌ಒಪಿ) ಜಾರಿಗೊಳಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು‌ ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿ, ಅರ್ಜಿ ವಿಲೇವಾರಿ ಮಾಡಿತು.

ವಿಚಾರಣೆ ವೇಳೆ ರಾಜ್ಯ ಸರಕಾರದ ಪರ ಹಾಜರಿದ್ದ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಅವರು, ಸಾಕಷ್ಟು ಸಮಯ ತೆಗೆದುಕೊಂಡು ಎಸ್‌ಒಪಿ ಸಿದ್ದಪಡಿಸಿದ್ದೇವೆ ಎಂದು ತಿಳಿಸಿ, ಜನವರಿ 13ರಂದು ರೂಪಿಸಿರುವ ಎಸ್‌ಒಪಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಅಮೈಕಸ್‌ ಕ್ಯೂರಿ ಎಸ್‌. ಸುಶೀಲಾ ಅವರು, ಏನು ನಡೆಯಿತು ಎಂಬ ವಿಚಾರಕ್ಕೆ ನಾವು ಹೋಗುತ್ತಿಲ್ಲ. ನ್ಯಾಯಾಲಯ ಕೆಲವು ನಿರ್ದೇಶನಗಳನ್ನು ನೀಡಬೇಕು. ಈ ಅರ್ಜಿ ದಾಖಲಿಸಿಕೊಳ್ಳುವಾಗ ಒಂಬತ್ತು ಪ್ರಶ್ನೆಗಳನ್ನು ಎತ್ತಲಾಗಿತ್ತು. ಈ ಅರ್ಜಿಯ ಕುರಿತಾದ ಮಿತಿ ನನಗೆ ಅರವಿದೆ. ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮ ಮತ್ತು ಗುಂಪುಗೂಡುವ ಸ್ಥಳಗಳಲ್ಲಿ ಜನಸಂದಣಿಯ ನಿಯಂತ್ರಣ) ಮಸೂದೆಯು ಕಾಯ್ದೆಯಾಗಿ ಜಾರಿಯಾಗುವವರೆಗೆ ಎಸ್‌ಒಪಿ ಜಾರಿಗೊಳಿಸಬೇಕು ಎಂದರು.

ಆಗ ನ್ಯಾಯಪೀಠ, ಈಗ ಎಸ್‌ಒಪಿ ಸಿದ್ಧವಾಗಿದ್ದು, ಕಾನೂನು ಸದನ ಸಮಿತಿಯ ಮುಂದಿದೆ. ಇನ್ನೇನು ಬಾಕಿ ಇದೆ. ಕಾನೂನು ಜಾರಿಯಾದ ಮೇಲೆ ಅದು ಅಸ್ತಿತ್ವಕ್ಕೆ ಬರಲಿದೆ. ಅಲ್ಲಿಯವರೆಗೆ ಎಸ್‌ಒಪಿ ಪಾಲಿಸಬೇಕು. ಕಾಯ್ದೆ ಜಾರಿಯಾದ ಮೇಲೆ ಅಹವಾಲುಗಳಿದ್ದರೆ ಈ ಅರ್ಜಿಯನ್ನು ಮತ್ತೆ ತೆರೆಯಬಹುದು ಎಂದು ಹೇಳಿತು.

ವಕೀಲ ಜಿ.ಆರ್‌. ಮೋಹನ್‌ ಅವರು, ಮುಂದಿನ ತಿಂಗಳು ಐಪಿಎಲ್‌ ನಡೆಸುವುದಕ್ಕೆ ಸಂಬಂಧಿಸಿದಂತೆ ಸಮಿತಿಯು ವರದಿ ಸಲ್ಲಿಸಿದೆ. ಇದನ್ನು ಆಧರಿಸಿ ಸಂಪುಟದಲ್ಲಿ ನಿರ್ಧರಿಸಲಾಗಿದ್ದು, ಗೃಹ ಇಲಾಖೆ ಕ್ರಮಕೈಗೊಳ್ಳಲಿದೆ ಎಂದು ಹೇಳಲಾಗಿದೆ. ಈ ವರದಿಯನ್ನು ನ್ಯಾಯಾಲಯದ ಮುಂದೆ ಇಡಲು ಆದೇಶಿಸಬೇಕು ಎಂದು ಕೋರಿದರು.

ಅಂತಿಮವಾಗಿ ನ್ಯಾಯಪೀಠ, ಅಡ್ವೊಕೇಟ್‌ ಜನರಲ್‌ ಅವರು ಜನವರಿ 13ರಂದು ಜನಸಂದಣಿ ಮತ್ತು ಜನಸಮೂಹ ನಿಯಂತ್ರಣ ವ್ಯವಸ್ಥೆಗೆ ಸಂಬಂಧಿಸಿದ ಎಸ್‌ಒಪಿ ಸಲ್ಲಿಸಿದ್ದಾರೆ. ಅಮೈಕಸ್‌ ಕ್ಯೂರಿ ಅವರು ಎಸ್‌ಒಪಿಯಲ್ಲಿನ ಗಂಭೀರ ಅಂತರದತ್ತ ಬೆರಳು ಮಾಡಿದ್ದು, ಅದನ್ನು ಪರಿಗಣಿಸಲಾಗಿದೆ. ಮಸೂದೆಯೂ ಸದನ ಸಮಿತಿಯ ಪರಿಗಣನೆಗೆ ಸಲ್ಲಿಕೆಯಾಗಿದೆ. ಅಮೈಕಸ್‌ ಕ್ಯೂರಿ ಸಲಹೆಯನ್ನು ಸದನ ಸಮಿತಿಗೆ ತಿಳಿಸಲಾಗುವುದು ಎಂದು ಈ ಸಂಬಂಧ ಸರ್ಕಾರ ಮೆಮೊ ಸಲ್ಲಿಸಿದೆ. ಇದನ್ನು ಪರಿಗಣಿಸಿ, ಮಸೂದೆ ಜಾರಿಯಾಗುವವರೆಗೆ ಎಸ್‌ಒಪಿ ಜಾರಿಗೊಳಿಸಬೇಕು ಎಂದು ನಿರ್ದೇಶಿಸಿ, ಅರ್ಜಿ ಇತ್ಯರ್ಥಪಡಿಸಿತು.

Tags

Chinnaswamy StadiumStampedeHigh Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X