ಹೊಸ ವರ್ಷದ ಸಂಭ್ರಮಾಚರಣೆ: ರಾಜ್ಯದ ಜನತೆಗೆ ಶುಭ ಕೋರಿದ ಸಿಎಂ, ರಾಜ್ಯಪಾಲ

ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಹೊಸ ವರ್ಷದ ಶುಭಾಶಯಗಳನ್ನು ಕೊರಿದ್ದಾರೆ.
ಬುಧವಾರ ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಸಿಎಂ ಸಿದ್ದರಾಮಯ್ಯ, ‘2026ರ ಹೊಸ ವರ್ಷವನ್ನು ಅತ್ಯಂತ ಸಂತೋಷ-ಸಂಭ್ರಮದಿಂದ ಬರಮಾಡಿಕೊಳ್ಳುವ ಜೊತೆಗೆ ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸೋಣ. ಸರ್ವರಿಗೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು’ ಎಂದು ತಿಳಿಸಿದ್ದಾರೆ.
ಕರ್ನಾಟಕದ ಜನತೆಗೆ ಹೊಸ ವರ್ಷ-2026ರ ಶುಭಾಶಯಗಳು. ಈ ಹೊಸ ವರ್ಷವೂ ನಮ್ಮ ದೇಶವನ್ನು ಶಾಂತಿ, ಸಮೃದ್ಧಿ ಮತ್ತು ಏಕತೆಯ ಮಾರ್ಗದಲ್ಲಿ ಮುನ್ನಡೆಸುವ ಅವಕಾಶ ಒದಗಿಸಲಿ ಹಾಗೂ ಎಲ್ಲರಿಗೂ ಸಂತೋಷ, ಸಮೃದ್ಧಿ ಮತ್ತು ಮಿತಿಯಿಲ್ಲದ ಅವಕಾಶಗಳನ್ನು ತರಲಿ. ದೇಶದ ಉಜ್ವಲ ಭವಿಷ್ಯದ ಕಡೆಗೆ ನಾವೆಲ್ಲರೂ ಒಟ್ಟಾಗಿ ಮುನ್ನಡೆಯೋಣ ಎಂದು ಗೆಹ್ಲೋಟ್ ಶುಭ ಕೋರಿದ್ದಾರೆ.
Next Story





