ನಟ ವಿಜಯ ರಾಘವೇಂದ್ರ ಅವರ ಪತ್ನಿ ನಿಧನಕ್ಕೆ ಸಿಎಂ, ಡಿಸಿಎಂ ಸೇರಿ ಗಣ್ಯರ ಸಂತಾಪ

Photo- twitter@DKShivakumar
ಬೆಂಗಳೂರು: ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ʼʼಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳುʼʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿ, ʼʼಕನ್ನಡದ ಖ್ಯಾತ ನಟ ಶ್ರೀ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಶ್ರೀಮತಿ ಸ್ಪಂದನಾ ರಾಘವೇಂದ್ರ ಅವರು ಬ್ಯಾಂಕಾಕ್ ನಲ್ಲಿ ದಿಢೀರ್ ಸಾವಿಗೀಡಾಗಿರುವ ಸಂಗತಿ ತಿಳಿದು ಅಪಾರ ನೋವುಂಟಾಯಿತು. ಇತ್ತೀಚೆಗಷ್ಟೇ ಅವರು ನನ್ನನ್ನು ಭೇಟಿಯಾಗಿ ಶುಭ ಹಾರೈಸಿದ್ದರು. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ವರ್ಗದವರು ಹಾಗೂ ಸ್ನೇಹಿತ ವರ್ಗಕ್ಕೆ ನನ್ನ ಸಾಂತ್ವನಗಳುʼʼ ಎಂದು ತಿಳಿಸಿದ್ದಾರೆ.
''ಕನ್ನಡ ಚಿತ್ರರಂಗದ ಖ್ಯಾತ ಕಲಾವಿದ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಅಕಾಲಿಕ ನಿಧನ ಹೊಂದಿದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ. ದೇವರು ಅವರ ಕುಟುಂಬ ಹಾಗೂ ಆಪ್ತೇಷ್ಟರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ'' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.
''ಕನ್ನಡ ಚಿತ್ರರಂಗದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಶ್ರೀಮತಿ ಸ್ಪಂದನಾ ಅವರು ಹೃದಯಾಘಾತದಿಂದ ವಿಧಿವಶರಾದ ಸುದ್ದಿ ತಿಳಿದು ಬೇಸರವಾಯಿತು. ಭಗವಂತ ವಿಜಯರಾಘವೇಂದ್ರ ಅವರ ಕುಟುಂಬಕ್ಕೆ ಈ ಆಘಾತದಿಂದ ಚೇತರಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸೋಣ'' ಎಂದು ಸಚಿವ ಸಂತೋಷ್ ಲಾಡ್ ಟ್ವೀಟ್ ಮಾಡಿದ್ಧಾರೆ.
''ಕನ್ನಡದ ಜನಪ್ರಿಯ ಕಲಾವಿದ ವಿಜಯ ರಾಘವೇಂದ್ರ ಅವರ ಪತ್ನಿ ಶ್ರೀಮತಿ ಸ್ಪಂದನಾ ಅವರ ನಿಧನ ಬಹಳ ಆಘಾತ ಹಾಗೂ ದುಃಖ ತಂದಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ. ವಿಜಯ ರಾಘವೇಂದ್ರ ಹಾಗೂ ಅವರ ಕುಟುಂಬ ಸದಸ್ಯರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ''
- ಝಮೀರ್ ಅಹ್ಮದ್ ಖಾನ್, ಸಚಿವರು
ಕನ್ನಡ ಚಿತ್ರರಂಗದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಶ್ರೀಮತಿ ಸ್ಪಂದನಾ ಅವರ ಅಕಾಲಿಕ ನಿಧನದ ಸುದ್ಧಿ ಕೇಳಿ, ಆಘಾತವಾಯಿತು. ನೂರಾರು ಕಾಲ ಬಾಳಿ ಬದುಕಬೇಕಾಗಿದ್ದ ಸ್ಪಂದನಾ ಸಣ್ಣ ವಯಸ್ಸಿನಲ್ಲಿ ಮೃತರಾಗಿರುವುದು ನೋವೆನಿಸಿದೆ.
— Laxmi Hebbalkar (@laxmi_hebbalkar) August 7, 2023
ಈ ಸಮಯದಲ್ಲಿ ಭಗವಂತ ಮೃತರ ಆತ್ಮಕ್ಕೆ ಶಾಂತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಸ್ಪಂದನಾ ಅವರ… pic.twitter.com/pUDMS64El6







