Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕುರ್ಚಿ ಕಿತ್ತಾಟದಲ್ಲಿ ರಾಜ್ಯದ...

ಕುರ್ಚಿ ಕಿತ್ತಾಟದಲ್ಲಿ ರಾಜ್ಯದ ಜನತೆಯನ್ನೇ ಮರೆತಿರುವ ಸಿಎಂ, ಡಿಸಿಎಂ : ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ8 July 2025 1:26 PM IST
share
ಕುರ್ಚಿ ಕಿತ್ತಾಟದಲ್ಲಿ  ರಾಜ್ಯದ ಜನತೆಯನ್ನೇ ಮರೆತಿರುವ ಸಿಎಂ, ಡಿಸಿಎಂ : ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಕುರ್ಚಿ ಕಿತ್ತಾಟದಲ್ಲಿ ಜನರನ್ನು ಮತ್ತು ರಾಜ್ಯವನ್ನು ಮರೆತಿದ್ದಾರೆ. ಕೇವಲ ತಮ್ಮ ಕುರ್ಚಿ ಉಳಿಸಿಕೊಳ್ಳಲು ಸಮಯ ಕಳೆಯುತ್ತಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸರ್ಕಾರವನ್ನು ಆರಿಸಿ ತಂದಿರುವುದಕ್ಕಾಗಿ ಜನರು ಪಶ್ಚಾತಾಪಪಡುತ್ತಿದ್ದು ಈ ಸರ್ಕಾರವನ್ನು ಕಿತ್ತು ಹಾಕಲು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಹೇಳಿದರು.

ರಾಜ್ಯ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ.ಪಡಿತರ ಆಹಾರ ವಿತರಣೆ ಮಾಡುವ ಲಾರಿಗಳಿಗೆ ಸುಮಾರು 250 ಕೋಟಿ ರೂ. ಬಾಕಿ ಇರುವುದು ಅಕ್ಷಮ್ಯ ಅಪರಾಧ. ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಯೋಜನೆಗಳಿಗೆ ಹಣ ಕೊಟ್ಟಿದ್ದೇವೆ. ಇವರು ಕೇವಲ ಸುಳ್ಳು ಹೇಳುತ್ತಿದ್ದಾರೆ. ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಅನೇಕ ಬಿಲ್ ಬಾಕಿ ಇತ್ತು, ಅದನ್ನು ನಮ್ಮ ಸರ್ಕಾರ ಬಂದು ತೀರಿಸಿತ್ತು. ಕೋವಿಡ್ ಸಂದರ್ಭದಲ್ಲಿಯೂ ಯಾವುದೇ ಹಣಕಾಸು ತೊಂದರೆಯಾಗದಂತೆ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದ್ದೇವೆ. ನನ್ನ ನೇತೃತ್ವದ ಸರ್ಕಾರದಲ್ಲಿಯೂ ಆರ್ಥಿಕವಾಗಿ ಸದೃಢವಾಗಿ ಕೆಲಸ ಮಾಡಿದ್ದರೂ ಕೂಡ ಈ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ವಿಫಲವಾಗಿ ಜನರಿಗೆ ದ್ರೋಹ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.

ಬಡವರಿಗೆ ಆಹಾರ ಕೊಡದಿದ್ದರೆ ಬಡವರ ಪರಿಸ್ಥಿತಿ ಏನು, ಇವರು ಹದಿನೈದು ಕೆಜಿ ಕೊಡುವುದು ಹೋಗಲಿ ಹತ್ತು ಕೆಜಿಯನ್ನೂ ಕೊಡುತ್ತಿಲ್ಲ. ಅಕ್ಕಿಯ ಬದಲು ಕೊಡುತ್ತೇವೆ ಹಣ ಎಂದರು ಅದನ್ನೂ ಕೊಡುತ್ತಿಲ್ಲ. ಬರಿ ಸುಳ್ಳಿನ ಕಂತೆ ಹೇಳುತ್ತ ಈ ಸರ್ಕಾರ ಕಾಲ ಕಳೆಯುತ್ತಿದೆ. ಜನರಿಗೆ ಆಹಾರ ಪದಾರ್ಥ ಸಿಗುತ್ತಿಲ್ಲ. ಆರೋಗ್ಯ ವ್ಯವಸ್ಥೆ ಸರಿ ಇಲ್ಲ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ತೇರ್ಗಡೆ ಪ್ರಮಾಣ ನೋಡಿದರೆ ಶಿಕ್ಷಣ ವ್ಯವಸ್ಥೆ ಸರಿ ಇಲ್ಲ. ಮೂಲ ಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರಿಗೂ ಹಣ ಬಿಡುಗಡೆಯಾಗುತ್ತಿಲ್ಲ ಎಂದರು.

ಹತ್ತು ಮಹಾನಗರ ಪಾಲಿಕೆಗಳ ಸಿಬ್ಬಂದಿ ಸಂಬಳ ನೀಡಿಲ್ಲ ಎಂದು ಪ್ರತಿಭಟನೆ ಮಾಡುತ್ತಿದ್ದಾರೆ. ನಗರಸಭೆ, ಪುರಸಭೆ ಉದ್ಯೋಗಿಗಳಿಗೆ ಸರ್ಕಾರ ಕೊಡಬೇಕಿರುವ ಹಣ ಕೊಡುತ್ತಿಲ್ಲ. ಪುರಸಭೆಯೇ ತನ್ನ ಹಣಕಾಸಿನ ವ್ಯವಸ್ಥೆಯಲ್ಲಿ ನೌಕರರ ಸಂಬಳ ನೀಡಬೇಕೆಂಬ ಆದೇಶ ಬಂದು ಒಂದು ವರ್ಷವಾಗಿದೆ. ಇದು ದುಸ್ಥಿತಿಯ ಸಂಕೇತ. ಮುಖ್ಯಮಂತ್ರಿಗಳು ಈ ಎಲ್ಲ ತಮ್ಮ ತಪ್ಪುಗಳನ್ನು ಒಪ್ಪಿಕೊಂಡು ತಕ್ಷಣ ಹಣ ಬಿಡುಗಡೆ ಮಾಡಬೇಕು' ಎಂದು ಆಗ್ರಹಿಸಿದರು.

ಸಿಎಂ ಮತ್ತು ಡಿಸಿಎಂ ನಡುವೆ ನಾನು ಸಿಎಂ ಸ್ಥಾನ ಬಿಡುವುದಿಲ್ಲ. ನಾನು ಸಿಎಂ ಆಗುತ್ತೇನೆ ಎಂಬ ಕುರ್ಚಿ ಕಚ್ಚಾಟದಲ್ಲಿ ಆಡಳಿತವನ್ನು ಸಂಪೂರ್ಣ ಮರೆತಿದ್ದಾರೆ. ಬಡವರು, ರೈತರು ಸಂಪೂರ್ಣ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ಕಡೆ ಪ್ರವಾಹ ಹೆಚ್ಚಾಗಿದೆ. ಹೃದಯಾಘಾತದಲ್ಲಿ ಮಡಿದವರ ಸಂಖ್ಯೆ ಹೆಚ್ಚಾಗಿದೆ. ಎಲ್ಲ ಇಲಾಖೆಯಲ್ಲಿ ಅವ್ಯವಸ್ಥೆಗಳು ಗೋಚರಿಸುತ್ತಿದ್ದು, ಈ ಸರ್ಕಾರ ಇದ್ದೂ ಸತ್ತಂತೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X