Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರೌಡಿಗಳ ನಿಯಂತ್ರಣಕ್ಕೆ ತಾಲ್ಲೂಕು...

ರೌಡಿಗಳ ನಿಯಂತ್ರಣಕ್ಕೆ ತಾಲ್ಲೂಕು ಮಟ್ಟದಲ್ಲಿ ಪ್ರತ್ಯೇಕ ಪಡೆ ರಚಿಸಲು ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ವಾರ್ತಾಭಾರತಿವಾರ್ತಾಭಾರತಿ4 Jun 2026 5:56 PM IST
share
ರೌಡಿಗಳ ನಿಯಂತ್ರಣಕ್ಕೆ ತಾಲ್ಲೂಕು ಮಟ್ಟದಲ್ಲಿ ಪ್ರತ್ಯೇಕ ಪಡೆ ರಚಿಸಲು ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು : “ಪೊಲೀಸರು ಪ್ರತಿ ತಾಲ್ಲೂಕಿನಲ್ಲಿ ರೌಡಿಗಳ ನಿಗ್ರಹಕ್ಕೆ ಪ್ರತ್ಯೇಕ ಪಡೆ ರಚಿಸಬೇಕು. ಇವರು ಕ್ರಿಮಿನಲ್ ಚಟುವಟಿಕೆಯಲ್ಲಿ ಭಾಗಿಯಾಗದಂತೆ ನೋಡಿಕೊಳ್ಳಬೇಕು. ಹಳೇ ರೌಡಿಗಳು ಹಾಗೂ ಹೊಸದಾಗಿ ಹುಟ್ಟಿಕೊಳ್ಳುವ ರೌಡಿಗಳ ಮೇಲೆ ನಿಗಾ ಇಡಬೇಕು ಎಂದು ಸೂಚಿಸಿರುವೆ” ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸರಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಮೇಲ್ಪಟ್ಟ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಅಪರ ಮುಖ್ಯ ಪ್ರಧಾನ ಸಂರಕ್ಷಣಾಧಿಕಾರಿಗಳು ಮತ್ತು ಮೇಲ್ಪಟ್ಟ ಅರಣ್ಯ ಅಧಿಕಾರಿಗಳ ಸಭೆ ನಡೆಸಿದರು. ನಂತರ ಮಾಧ್ಯಮಗೋಷ್ಠಿ ನಡೆಸಿ ಸಭೆಯ ನಿರ್ಣಯಗಳ ಬಗ್ಗೆ ಮಾಹಿತಿ ನೀಡಿದರು.

ಒತ್ತಡಕ್ಕೆ ಮಣಿಯದೇ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ :

“ರಾಜ್ಯದ ಅಧಿಕಾರಿಗಳನ್ನು ಕರೆಸಿ ಹೊಸ ಸರಕಾರ ಯಾವ ದಿಕ್ಕಿನಲ್ಲಿ ಆಲೋಚನೆ ಮಾಡುತ್ತಿದೆ ಎಂದು ಸಂದೇಶ ನೀಡಿದ್ದೇವೆ. ಮೊದಲ ದಿನ ನಾವು ಅವರಿಂದ ಏನು ನಿರೀಕ್ಷೆ ಮಾಡಿದ್ದೇವೆ, ನಮ್ಮಿಂದ ಅವರ ನಿರೀಕ್ಷೆಗಳೇನು ಎಂದು ಚರ್ಚೆ ಮಾಡಲಾಗಿದೆ. ನಮ್ಮ ಸರಕಾರ ಜಾತಿ, ಧರ್ಮ, ಪ್ರಭಾವಕ್ಕೆ ಮಣಿಯುವುದಿಲ್ಲ. ಯಾವ ಅಧಿಕಾರಿಗಳು ಇದಕ್ಕೆ ಮಣಿಯಬಾರದು. ಪಾರದರ್ಶಕ, ಮುಕ್ತ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡಬೇಕು. ಇದಕ್ಕೆ ನಿಮ್ಮ ಸಹಕಾರ ಬೇಕು ಎಂದು ಕೇಳಿದ್ದೇವೆ. ಪಾರದರ್ಶಕತೆ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಿ. ಜನರ ಭಾವನಗೆ ತಕ್ಕಂತೆ, ಜನರ ಸಮಸ್ಯೆ ಬಗೆಹರಿಸಬೇಕು ಎಂದು ನಿರ್ದೇಶನ ನೀಡಲಾಗಿದೆ. 15 ದಿನಗಳಲ್ಲಿ ಎಲ್ಲಾ ಇಲಾಖೆಗಳಲ್ಲಿನ ಕಾರ್ಯಯೋಜನೆ ಸಿದ್ಧಪಡಿಸಬೇಕು ಎಂದು ಸೂಚಿಸಿದ್ದೇನೆ. ಎಲ್ಲರೂ ಹೊಣೆಗಾರಿಕೆಯಾಗಿರಬೇಕು. ದೇಶದಲ್ಲಿ ವಿದ್ಯಾವಂತರು, ಬುದ್ಧಿವಂತರು ಇಲ್ಲದಿದ್ದರೂ ಪ್ರಜ್ಞಾವಂತರು ಇರಬೇಕು. ನಮ್ಮಲ್ಲಿ ಸಾಮಾನ್ಯ ಪ್ರಜ್ಞೆ ಇರಬೇಕು. ಎಲ್ಲಾ ಸಮಸ್ಯೆಗಳಿಗೆ ಒಂದು ಪರಿಹಾರ ಇರುತ್ತದೆ, ಸಕಾರಾತ್ಮಕ ಮನೋಭಾವ ಇರಬೇಕು” ಎಂದು ತಿಳಿಸಿದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X