Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ...

ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪಕ್ಷಾತೀತ ಬೆಂಬಲ : ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ18 Jun 2026 9:03 PM IST
share
ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪಕ್ಷಾತೀತ ಬೆಂಬಲ : ಸಿಎಂ ಡಿ.ಕೆ.ಶಿವಕುಮಾರ್
"ಬೇರೆ ಪಕ್ಷದವರು ತೋರಿರುವ ವಿಶ್ವಾಸ ಉಳಿಸಿಕೊಳ್ಳುತ್ತೇವೆ"

ಬೆಂಗಳೂರು: "ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಸರಕಾರಕ್ಕೆ ಶಾಸಕರ ಬೆಂಬಲ ನೋಡಿ ನನಗೆ ಆಶ್ಚರ್ಯವಾಗಿದೆ. ಇದು ನಮ್ಮ ಸರಕಾರಕ್ಕೆ ಮಾತ್ರ ನೀಡಿರುವ ಬೆಂಬಲವಲ್ಲ. ರಾಜ್ಯದ ಜನತೆಯ ಹಿತಕ್ಕಾಗಿ ನಿಮ್ಮ ಜೊತೆ ಇದ್ದೇವೆ ಎಂದು ನೀಡಿರುವ ಬೆಂಬಲ" ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಗುರುವಾರ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಪಕ್ಷದ ಬಿ.ಕೆ.ಹರಿಪ್ರಸಾದ್, ಮಳವಳ್ಳಿ ಶಿವಣ್ಣ, ಪಿ.ವಿ.ಮೋಹನ್, ವಿನಯ್ ಕಾರ್ತಿಕ್, ತಿಪ್ಪಣ್ಣಪ್ಪ ಕಮಕನೂರು ಅವರನ್ನು ವಿಧಾನಸೌಧದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಅಭಿನಂದಿಸಿದ ನಂತರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಇದ್ದರು.

"ನಾವು ಯಾವ ಹೆಜ್ಜೆಯನ್ನಿಟ್ಟು ಮುಂದುವರೆಯುತ್ತಿದ್ದೆವೆಯೋ ಅದಕ್ಕೆ ನಾವೂ ಜೊತೆಗಿದ್ದೇವೆ ಎಂದು ಪಕ್ಷಾತೀತವಾಗಿ ಬೆಂಬಲ ನೀಡಿದ್ದಾರೆ. ನಮ್ಮ ಪಕ್ಷದ ಶಾಸಕರೂ ಒಗ್ಗಟ್ಟಾಗಿ ಬೆಂಬಲಿಸಿದ್ದಾರೆ. ನಮಗೆ ಹೆಚ್ಚಿನ ಮತ ನೀಡಿದ ಬೇರೆ, ಬೇರೆ ಪಕ್ಷದ ವಿಶ್ವಾಸವನ್ನು ನಾವು ಉಳಿಸಿಕೊಳ್ಳುತ್ತೇವೆ.‌ ನಿಮ್ಮ ಭಾವನೆಯನ್ನು ಅರಿತುಕೊಂಡು ನಿಮ್ಮ ಸೇವೆಯಲ್ಲಿ ಮುಂದುವರೆಯುತ್ತೇವೆ. ನೀವು ನಮಗೆ ನೀಡಿದ ವಿಶ್ವಾಸ ಜನರಿಗೆ ನೀಡಿದ ಶಕ್ತಿ" ಎಂದು ಬಣ್ಣಿಸಿದರು.

"ನಮ್ಮ ಪಕ್ಷದ ಶಾಸಕರ ಒಂದು ಮತವೂ ತಿರಸ್ಕೃತವಾಗಬಾರದು ಎಂದು ತರಬೇತಿ ನೀಡಲಾಗಿತ್ತು.‌ ಇದಕ್ಕೆ ಸಹಕರಿಸಿದ ಎಲ್ಲಾ ಪದಾಧಿಕಾರಿಗಳಿಗೆ ನಾನು ವಿಶೇಷವಾಗಿ ಧನ್ಯವಾದ ಹೇಳುತ್ತೇನೆ. ಇದಕ್ಕೆ ದುಡಿದಂತಹ ಪಕ್ಷದ ಎಲ್ಲಾ ಶಾಸಕರು, ನಾಯಕರು, ಎಐಸಿಸಿ ಪ್ರಧಾನ ಕಾರ್ಯದರ್ಶಿಯವರಾದ ರಣದೀಪ್ ಸುರ್ಜೇವಾಲ ಅವರು ಹಾಗೂ ಇತರೇ ಕಾರ್ಯದರ್ಶಿಗಳನ್ನು ನಾನು ಅಭಿನಂಧಿಸುತ್ತೇನೆ" ಎಂದರು‌.

ಇದು ಗುಪ್ತ ಮತದಾನ; ಬೇರೆ ಪಕ್ಷದ ಆಂತರಿಕ ವಿಚಾರ ಗೊತ್ತಿಲ್ಲ :

ಅಡ್ಡ ಮತದಾನಕ್ಕಾಗಿ ಕುದುರೆ ವ್ಯಾಪಾರ ನಡೆದಿದೆಯೇ ಎಂದು ಕೇಳಿದಾಗ, "ಇದರ ಬಗ್ಗೆ ನನಗೆ ಗೊತ್ತಿಲ್ಲ. ಮತ ಯಾರು ಹಾಕಿದ್ದಾರೆ ಎಂಬುದೂ ನನಗೆ ಗೊತ್ತಿಲ್ಲ. ಇಲ್ಲಿ ನಡೆದಿರುವುದು ಗುಪ್ತ ಮತದಾನ. ಯಾರು ಮತ ಹಾಕಿದ್ದಾರೆ ಎಂದು ಯಾರಿಗೆ ಗೊತ್ತು. ಆತ್ಮವಿಶ್ವಾಸದ ಮತ ಹಾಕಿದ್ದಾರೆ. ನಾನು ಯಾರ ಬಳಿಯೂ ಮಾತನಾಡಲು ಹೋಗಿಲ್ಲ, ಮತ ಕೇಳಲೂ ಹೋಗಿಲ್ಲ. ನಮ್ಮ‌ಪಕ್ಷದಿಂದ ಐದು ಅಭ್ಯರ್ಥಿಗಳು ನಿಂತಿದ್ದರು. ನಮ್ಮ ಶಾಸಕರ ಸಂಖ್ಯಾಬಲ ಎಷ್ಟಿತ್ತು ಎಂಬುದು ಮಾಧ್ಯಮಗಳಿಗೆ ತಿಳಿದಿತ್ತು. ಐದು ಜನ ಗೆಲ್ಲುತ್ತಾರೆ ಎನ್ನುವ ವಿಶ್ವಾಸವಿತ್ತು. ಅವರು ಗೆದ್ದಿದ್ದಾರೆ" ಎಂದರು.

ನೀವು ಸಹಕಾರ ಕೋರಿದ್ದೀರಿ ಎಂದು ಎಸ್.ಟಿ. ಸೋಮಶೇಖರ್ ‌ಹೇಳಿದ್ದಾರೆ ಎಂದಾಗ, "ಅವರನ್ನು ಉಚ್ಚಾಟನೆ ಮಾಡಿ ಕಳಿಸಿದ್ದಾರಲ್ಲವೇ? ನಮ್ಮ ಹತ್ತಿರ ಇರಬೇಡಿ ಎಂದು ಕಳಿಸಿದ್ದರು. ಹೀಗೆ ಕಳಿಸಿದವರನ್ನು ದಾರಿಯಲ್ಲಿಯೇ ಬಿಡಲು ಆಗುತ್ತದೆಯೇ? ನಾವು ದಾರಿ ಇಲ್ಲದವರಿಗೆ ದಾರಿ ತೋರಿಸುವ ಕೆಲಸ ಮಾಡಿದ್ದೇವೆ" ಎಂದರು.

Tags

DCM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X