Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕ್ವಾರಿ ದುರಂತ; ಅಧಿಕೃತ ವರದಿ ಬಂದ ಬಳಿಕ...

ಕ್ವಾರಿ ದುರಂತ; ಅಧಿಕೃತ ವರದಿ ಬಂದ ಬಳಿಕ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ2 July 2026 1:37 PM IST
share
ಕ್ವಾರಿ ದುರಂತ; ಅಧಿಕೃತ ವರದಿ ಬಂದ ಬಳಿಕ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಮಾಗಡಿ ರಸ್ತೆ ಬಳಿ ಎರಡು ಕ್ವಾರಿಯಲ್ಲಿ ಕುಸಿತವಾಗಿದ್ದು 7 ಮಂದಿ ಮೃತಪಟ್ಟಿರುವ ಪ್ರಕರಣದ ಬಗ್ಗೆ ಅಧಿಕೃತ ಮಾಹಿತಿ ಪಡೆದ ನಂತರ ಕೈಗೊಳ್ಳಬೇಕಾಗಿರುವ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

“ಪೊಲೀಸ್ ಅಧಿಕಾರಿಗಳು, ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದುರಂತ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಫೋಟದಿಂದಾಗಿ ಇದು ಸಂಭವಿಸಿಲ್ಲ ಎಂಬ ಮಾಹಿತಿ ಬಂದಿದ್ದು, ಈ ಕ್ವಾರಿ ಕಾನೂನುಬದ್ಧವಾಗಿ ನಡೆಸಲಾಗುತ್ತಿದೆಯೇ ಇಲ್ಲವೇ ಎಂಬ ವರದಿಯನ್ನು ಪಡೆದು ನಂತರ ಕ್ರಮ ಕೈಗೊಳ್ಳಲಾಗುವುದು. ಕ್ವಾರಿ ನಡೆಸುವಾಗ ಅದರದೇ ಆದ ನಿಯಮಗಳಿದ್ದು, ಅವುಗಳ ಪಾಲನೆಯಾಗುತ್ತಿವೆಯೇ ಇಲ್ಲವೇ ಎಂಬ ಪರಿಶೀಲನೆ ಮಾಡಲಾಗುವುದು” ಎಂದು ತಿಳಿಸಿದರು.

ಕಳೆದ ಬಾರಿ ಸ್ಫೋಟದ ವೇಳೆ ಚಿರತೆ ಸತ್ತಿತ್ತು. ಈ ಹಿಂದೆ ತನಿಖೆ ಮಾಡದೇ ಪ್ರಕರಣ ಮುಚ್ಚಿಹಾಕಲಾಗಿತ್ತು ಎಂಬ ಸ್ಥಳೀಯ ಶಾಸಕರ ಆರೋಪದ ಬಗ್ಗೆ ಕೇಳಿದಾಗ, “ಶಾಸಕರು ನಮಗೆ ಮಾಹಿತಿ ನೀಡಿದ್ದು, ಅಧಿಕೃತ ವರದಿ ತರಿಸಿಕೊಂಡು ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ” ಎಂದರು.

ಪರಿಹಾರದ ವಿಚಾರವಾಗಿ ಕೇಳಿದಾಗ, “ಮೊದಲು ಎಷ್ಟು ಜನ ಸತ್ತಿದ್ದಾರೆ ಎಂಬ ಮಾಹಿತಿಗಳು ಬರಲಿ, ಆನಂತರ ಪರಿಹಾರದ ಬಗ್ಗೆ ತೀರ್ಮಾನ ಮಾಡೋಣ. ತರಾತುರಿಯಲ್ಲಿ ಪರಿಹಾರ ಘೋಷಿಸಿದ ಮಾತ್ರಕ್ಕೆ ಸತ್ತವರು ಮರಳಿ ಬರುವುದಿಲ್ಲ. ಇದಕ್ಕೆಲ್ಲಾ ಅದರದೇ ಆದ ಪ್ರಕ್ರಿಯೆಗಳಿವೆ. ಖಂಡಿತವಾಗಿ ಸಂತ್ರಸ್ತರಿಗೆ ಪರಿಹಾರ ನೀಡಲಾಗುವುದು. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಎಚ್ಚರಿಕೆ ವಹಿಸುವುದು ಬಹಳ ಮುಖ್ಯ” ಎಂದು ತಿಳಿಸಿದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X