Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬರ ಪರಿಸ್ಥಿತಿ; ಅಣೆಕಟ್ಟು ನೀರು ನಂಬಿ...

ಬರ ಪರಿಸ್ಥಿತಿ; ಅಣೆಕಟ್ಟು ನೀರು ನಂಬಿ ಬೆಳೆ ಹಾಕಬೇಡಿ: ರೈತರಿಗೆ ಸಿಎಂ ಡಿ.ಕೆ.ಶಿವಕುಮಾರ್ ಕರೆ

ವಾರ್ತಾಭಾರತಿವಾರ್ತಾಭಾರತಿ2 July 2026 7:35 PM IST
share
ಬರ ಪರಿಸ್ಥಿತಿ; ಅಣೆಕಟ್ಟು ನೀರು ನಂಬಿ ಬೆಳೆ ಹಾಕಬೇಡಿ: ರೈತರಿಗೆ ಸಿಎಂ ಡಿ.ಕೆ.ಶಿವಕುಮಾರ್ ಕರೆ
"ಮೇವು, ಕುಡಿಯುವ ನೀರಿನ ಪೂರೈಕೆಗೆ ಸಕಲ ಸಿದ್ಧತೆ"

ಬೆಂಗಳೂರು : ದೇಶ ವ್ಯಾಪಿ ಈ ವರ್ಷ ಭೀಕರ ಸ್ವರೂಪದ ಬರಗಾಲ ಎದುರಾಗುವ ಮುನ್ಸೂಚನೆ ಹಿನ್ನೆಲೆ ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬಾರದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರ ಇದ್ದು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ತುಂಗಭದ್ರಾ, ಘಟ್ಟಪ್ರಭಾ, ಮಲಪ್ರಭಾ, ನಾರಾಯಣಪುರ, ವಾಣಿವಿಲಾಸ ಅಣೆಕಟ್ಟುಗಳ ಒಳಹರಿವಿನ ಪ್ರಮಾಣ ಶೂನ್ಯವಾಗಿದೆ. ಕಾವೇರಿ ಪಾತ್ರದಲ್ಲಿ ಮಳೆ ಪ್ರಮಾಣ ಕುಸಿದಿದೆ. ಕಳೆದ ವರ್ಷ ಈ ಸಮಯದಲ್ಲಿ ಹೇಮಾವತಿಯಲ್ಲಿ 80 ಅಡಿ ಇತ್ತು, ಈ ವರ್ಷ 40 ಅಡಿಗೆ ಕುಸಿದಿದೆ. ಕೆಆರ್‌ ಎಸ್‍ನಲ್ಲಿ 100 ಅಡಿ ಇದ್ದ ನೀರಿನ ಪ್ರಮಾಣ ಈಗ 22 ಅಡಿಯಷ್ಟಿದೆ. ಇತ್ತ ಕಬಿನಿಯಲ್ಲಿ 79 ಅಡಿ ಇತ್ತು, ಈಗ 26 ಅಡಿಯಷ್ಟಿದೆ. ಈ ಅಣೆಕಟ್ಟುಗಳಲ್ಲಿ ಒಳಹರಿವಿನ ಪ್ರಮಾಣ ಶೇ.20ರಷ್ಟಿಗೆ ಕುಸಿದಿದೆ. ಹೀಗಾಗಿ ಸಮಸ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಡಿಸಿದರು.

ಮುಂದಿನ ದಿನಗಳಲ್ಲಿ ಮಳೆ ಗಮನದಲ್ಲಿಟ್ಟುಕೊಂಡು ಬೆಳೆ ಹಾಕಿ. ಮಳೆ ಬಂದರೆ ನಾವು ನೀರನ್ನು ಒದಗಿಸಿಕೊಡುತ್ತೇವೆ. ಸಚಿವರಿಗೆ 2ರಿಂದ3 ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದ್ದು, ನಾನು ನಾಲ್ಕು ವಿಭಾಗಗಳಿಗೆ ತೆರಳಿ ಪರಿಶೀಲನೆ ಮಾಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ನೀರು ಹಾಗೂ ವಿದ್ಯುತ್ ವಿಚಾರವಾಗಿ ಎಚ್ಚರಿಕೆ ನೀಡಿದ್ದಾರೆ. ದೇಶದಲ್ಲೇ ಭೀಕರ ಬರಗಾಲ ಬರಲಿದೆ ಎಂದು ಕೇಂದ್ರ ಸರಕಾರ ಸಂದೇಶ ನೀಡಿದೆ ಎಂದು ಅವರು ಹೇಳಿದರು.

ವಿದ್ಯುತ್ ವಿಚಾರವಾಗಿ ಇಂಧನ ಇಲಾಖೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ನಾವು ಈ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಬೇಕು. ಮೇವು ಹಾಗೂ ಕುಡಿಯುವ ನೀರಿನ ವಿಚಾರವಾಗಿ ಜಿಲ್ಲಾ ಸಚಿವರಿಗೆ ಪ್ರವಾಸ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ತುರ್ತಾಗಿ ಕೊಳವೆ ಬಾವಿ ಕೊರೆಯಲು ಸೂಚಿಸಲಾಗಿದೆ. ನಾನು ಕೂಡ ನಾಲ್ಕು ವಿಭಾಗಕ್ಕೆ ಪ್ರವಾಸ ಮಾಡಲಿದ್ದು, ನಂತರ ಜಿಲ್ಲಾ ಕೇಂದ್ರಗಳಿಗೆ ತೆರಳುತ್ತೇನೆ ಎಂದು ಅವರು ತಿಳಿಸಿದರು.

3,806 ಕೋಟಿ ಹೊರೆ: ಕೇಂದ್ರ ಸರಕಾರದ ವಿಬಿ ಜಿ ರಾಮ್ ಜಿ ಯೋಜನೆ ವಿರುದ್ಧ ನಾವು ಹೋರಾಟ ಮಾಡಿದ್ದು, ನ್ಯಾಯಾಲಯದ ಮೆಟ್ಟಿಲು ಏರಿದ್ದೇವೆ. ಯೋಜನೆಯಲ್ಲಿ ಶೇ.40ರಷ್ಟು ವೆಚ್ಚ ಭರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದು, ನಾವು ಷರತ್ತಿನ ಆಧಾರದ ಮೇಲೆ ಯೋಜನೆ ಜಾರಿ ಮಾಡಬೇಕಾಗಿದೆ. ನಮ್ಮ ರಾಜ್ಯಕ್ಕೆ ಇದರಿಂದ ವಾರ್ಷಿಕ 3,806ಕೋಟಿ ರೂ.ವೆಚ್ಚದ ಹೊರೆ ಬೀಳಲಿದೆ. ಎಲ್ಲೆಲ್ಲಿ ಈ ಕೆಲಸ ಕೈಗೊಳ್ಳಬೇಕು ಎಂದು ಇವತ್ತಿನಿಂದ ಅಧಿಸೂಚನೆ ಹೊರಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಪಂಚಾಯಿತಿಗಳಲ್ಲೂ ದಾಖಲೆ ಶುದ್ಧೀಕರಣಕ್ಕೆ ಭೂ ಗ್ಯಾರೆಂಟಿ ಯೋಜನೆ ನೀಡಲಾಗುತ್ತಿದೆ. ಹೀಗಾಗಿ ಎಲ್ಲ ರಸ್ತೆಗಳನ್ನು ಸರಕಾರಿ ರಸ್ತೆಗಳಾಗಿ ಘೋಷಿಸಲು ತೀರ್ಮಾನ ಮಾಡಲಾಗಿದೆ. ಇದಕ್ಕಾಗಿ ಕಾನೂನು ಅವಕಾಶ ಮಾಡಿಕೊಡುತ್ತೇವೆ ಎಂದೂ ಶಿವಕುಮಾರ್ ಹೇಳಿದರು.

ಸಂಪುಟದಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು

-ರಾಷ್ಟ್ರೀಯ ಅಂಧತ್ವ ನಿಯಂತ್ರಣದಿಂದ ಸಣ್ಣ ಮಕ್ಕಳಲ್ಲಿ ದೃಷ್ಟಿ ಆರೈಕೆ ಬಲಪಡಿಸಲು 26 ಕೋಟಿ ರೂ. ಅನುದಾನಕ್ಕೆ ಅನುಮೋದನೆ.

-ಬಾಗಲಕೋಟೆಯ ಬಿಳಗಿ ತಾಲೂಕಿನಲ್ಲಿ ಕೃಷ್ಣಾ ನದಿಯಿಂದ 7 ಸಾವಿರ ಎಕರೆ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸಲು ಬಿಳಗಿ ಏತ ನೀರಾವರಿ ಯೋಜನೆಗೆ 98.50 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ.

-ಕಲಬುರ್ಗಿಯಲ್ಲಿ ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆಯಿಂದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜಂಟಿ ಸಹಕಾರದಲ್ಲಿ ಜವಳಿ ಪಾರ್ಕ್ ನಿರ್ಮಾಣಕ್ಕೆ ಕೆಐಎಡಿಬಿ ವತಿಯಿಂದ 700 ಕೋಟಿ ವೆಚ್ಚದ ಯೋಜನೆಗೆ ಮೊದಲ ಹಂತಕ್ಕೆ 320 ಕೋಟಿಗೆ ಅನುಮೋದನೆ.

-ಎನ್‍ಜಿಎಫ್ ನಲ್ಲಿ 60 ಎಕರೆ ಜಾಗದಲ್ಲಿ ಟ್ರೀ ಪಾರ್ಕ್ ನಿರ್ಮಾಣಕ್ಕೆ 26 ಕೋಟಿ ರೂ.ಅನುದಾನ ಮೀಸಲಿಡಲು ತೀರ್ಮಾನ.

-ಅಲ್ಪಸಂಖ್ಯಾತರ ಇಲಾಖೆಯಿಂದ ಕ್ರೀಡಾ ಉಡುಪು, ವಿದ್ಯಾರ್ಥಿ ಸಾಮಾಗ್ರಿ ವಿತರಣೆಗೆ 33 ಕೋಟಿ ರೂ. ಅನುದಾನಕ್ಕೆ ಅನುಮೋದನೆ.

-ವಾಣಿಜ್ಯ ಹಾಗೂ ಕೈಗಾರಿಕ ಇಲಾಖೆ ದೇವನಹಳ್ಳಿಯಲ್ಲಿ ಏರೋಸ್ಪೇಸ್ ಪಾರ್ಕ್ ನಲ್ಲಿ ಕಾಮನ್ ಫೆಸಿಲಿಟ್ ಸೆಂಟರ್ ಮಾಡಲು 30 ಕೋಟಿ ರೂ.ಅನುದಾನ ನೀಡಲು ಕೆಐಎಡಿಬಿಗೆ ಅನುಮತಿ.

-ವಿಕಲಚೇತನ ಹಕ್ಕು ಕಾಯ್ದೆ ಅನ್ವಯ ಕೆಐಎಡಿಬಿಯಲ್ಲಿ ಶೇ.5ರಷ್ಟು ಭೂ ಮೀಸಲಾತಿ ರಿಯಾಯಿತಿ ಬಗ್ಗೆ ಕಾನೂನು ತರಲಾಗಿತ್ತು. ಈಗ ಅವರಿಗೆ ಎರಡು ಆಯ್ಕೆ ನೀಡಿದ್ದು, ಭೂಮಿ ಮೌಲ್ಯದ ಶೇ.10ರಷ್ಟು ಅಥವಾ ಗರಿಷ್ಠ 20 ಲಕ್ಷ ರೂ.ಗಳ ವರೆಗೆ ರಿಯಾಯಿತಿ ನೀಡಲು ಮಿತಿ ಹಾಕಲಾಗಿದೆ.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X