Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಸ್‍ಐಆರ್ ಪ್ರಕ್ರಿಯೆ: ಮನೆ-ಮನೆಗೆ...

ಎಸ್‍ಐಆರ್ ಪ್ರಕ್ರಿಯೆ: ಮನೆ-ಮನೆಗೆ ಖುದ್ದು ಬಿಎಲ್‍ಒಗಳೇ ಹೋಗಬೇಕು : ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ2 July 2026 8:56 PM IST
share
ಎಸ್‍ಐಆರ್ ಪ್ರಕ್ರಿಯೆ: ಮನೆ-ಮನೆಗೆ ಖುದ್ದು ಬಿಎಲ್‍ಒಗಳೇ ಹೋಗಬೇಕು : ಸಿಎಂ ಡಿ.ಕೆ.ಶಿವಕುಮಾರ್
"ಎಸ್‍ಐಆರ್ ಪ್ರಕ್ರಿಯೆ ಮುಗಿದ ಬಳಿಕ ಮುಂಗಾರು ಅಧಿವೇಶನ"

ಬೆಂಗಳೂರು : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್‍ಐಆರ್) ಪ್ರಕ್ರಿಯೆ ಸಂಬಂಧ ಖುದ್ದು ಬಿಎಲ್‍ಒಗಳೇ ಮನೆ ಮನೆಗೆ ಹೋಗಿ ಗಣತಿ ನಮೂನೆ ವಿತರಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜು.29ರವರೆಗೆ ಎಸ್‍ಐಆರ್ ಪ್ರಕ್ರಿಯೆಗೆ ಕಾಲಾವಕಾಶವಿದೆ. ಹೀಗಾಗಿ, ಖುದ್ದು ಬಿಎಲ್‍ಒಗಳೇ ಮನೆಗೇ ಹೋಗಿ ಅರ್ಜಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸುತ್ತಿದ್ದೇನೆ ಎಂದರು.

ಕಲ್ಯಾಣ ಮಂಟಪಗಳಲ್ಲಿ ಗಣತಿ ನಮೂನೆ ವಿತರಣೆ ಮಾಡಲಾಗುತ್ತಿದೆ ಎಂಬ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರ ನನ್ನ ಗಮನಕ್ಕೂ ಬಂದಿದೆ. ಇದು ಕಾನೂನು ಬಾಹಿರ. ಇದನ್ನು ಯಾರೇ ಮಾಡಿದರೂ ಅದಕ್ಕೆ ಅವಕಾಶ ನೀಡುವುದಿಲ್ಲ. ನಮ್ಮ ಶಾಸಕರು ಮಾಡಿದರೂ ನಾವು ಅದಕ್ಕೆ ಅವಕಾಶ ನೀಡುವುದಿಲ್ಲ. ಆದರೆ, ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಬೇಕಾದರೆ ಬಿಎಎಲ್‍ಗಳು ಜನರಿಂದ ಸಂಗ್ರಹಿಸಿ ಬಿಎಲ್‍ಒಗಳಿಗೆ ನೀಡಲು ಅವಕಾಶವಿದೆ ಎಂದು ಅವರು ಹೇಳಿದರು.

ಎಸ್‍ಐಆರ್ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ನಾಗರಿಕರ ಮತದಾನದ ಹಕ್ಕನ್ನು ಕಾಪಾಡುವುದು ನಮ್ಮ ಸರಕಾರದ ಜವಾಬ್ದಾರಿ. ಹೀಗಾಗಿ ಪ್ರತಿ ವಾರ್ಡ್ ಹಾಗೂ ಬೂತ್ ನಲ್ಲಿ ಸಹಾಯ ಕೇಂದ್ರ ಸ್ಥಾಪಿಸಲು ಮುಂದಾಗಿದ್ದೇವೆ ಎಂದರು.

ಎಸ್‍ಐಆರ್ ಪ್ರಕ್ರಿಯೆ ಮುಗಿದ ಬಳಿಕ ಮುಂಗಾರು ಅಧಿವೇಶನ: ಈ ವರ್ಷ ಮುಂಗಾರು ಅಧಿವೇಶನ ಕರೆಯಬೇಕಾಗಿತ್ತು. ಆದರೆ, ಸದ್ಯ ರಾಜ್ಯದಲ್ಲಿ ಎಸ್‍ಐಆರ್ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ಮುಗಿಯುವವರೆಗೂ ಕಾಯಲು ತೀರ್ಮಾನಿಸಲಾಗಿದೆ. ಎಲ್ಲ ಶಾಸಕರು ತಮ್ಮ ಕ್ಷೇತ್ರದ ಮತದಾರರ ರಕ್ಷಣೆ ಮಾಡಿಕೊಳ್ಳಬೇಕಾಗಿದೆ. ಅವರಿಗೆ ತೊಂದರೆ ಆಗುವುದು ಬೇಡ ಎಂದು ತೀರ್ಮಾನಿಸಿದ್ದು, ಆ.5ರಂದು ಕರಡು ಮತದಾರರಪಟ್ಟಿ ಬಿಡುಗಡೆ ಮಾಡಲಿದ್ದು, ಅದಾದ ನಂತರ ಮೊದಲ ಅಥವಾ ಎರಡನೆ ವಾರದಲ್ಲಿ ಅಧಿವೇಶನದ ದಿನಾಂಕ ನಿಗದಿ ಮಾಡಲಾಗುವುದು ಎಂದು ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X