Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಚಿವ ಸ್ಥಾನಕ್ಕಾಗಿ ಯಾವುದೇ ಬೆಂಬಲಿಗರ...

ಸಚಿವ ಸ್ಥಾನಕ್ಕಾಗಿ ಯಾವುದೇ ಬೆಂಬಲಿಗರ ನಿಯೋಗ ಬರಬಾರದು : ಸಿಎಂ ಡಿ.ಕೆ.ಶಿವಕುಮಾರ್ ಮನವಿ

ವಾರ್ತಾಭಾರತಿವಾರ್ತಾಭಾರತಿ5 July 2026 3:20 PM IST
share
ಸಚಿವ ಸ್ಥಾನಕ್ಕಾಗಿ ಯಾವುದೇ ಬೆಂಬಲಿಗರ ನಿಯೋಗ ಬರಬಾರದು : ಸಿಎಂ ಡಿ.ಕೆ.ಶಿವಕುಮಾರ್ ಮನವಿ
"ವರಿಷ್ಠರ ತೀರ್ಮಾನವೇ ಅಂತಿಮ"

ಬೆಂಗಳೂರು: "ವಿಜಯಾನಂದ ಕಾಶಪ್ಪನವರ ಬೆಂಬಲಿಗರ, ಅಭಿಮಾನಿಗಳ ಭಾವನೆಯನ್ನು ವರಿಷ್ಠರಿಗೆ ತಿಳಿಸುತ್ತೇನೆ. ಯಾರೂ ಸಹ ಬೆಂಬಲಿಗರ ನಿಯೋಗ ಕರೆದುಕೊಂಡು ಬಂದು ಸಚಿವ ಸ್ಥಾನಕ್ಕೆ ಒತ್ತಡ ಹಾಕಬಾರದು ಎಂದು ಮನವಿ ಮಾಡಿದ್ದೇವೆ" ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಶಾಸಕ ವಿಜಯಾನಂದ ಕಾಶಪ್ಪನವರ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ರವಿವಾರ ಮನವಿ ಸಲ್ಲಿಸಿದರು. ಅವರ ಬೆಂಬಲಿಗರನ್ನು ಉದ್ದೇಶಿಸಿ ಮುಖ್ಯಮಂತ್ರಿಯವರು ಮಾತನಾಡಿದರು.

"ನನಗೂ ಯುವಕರಿಗೆ ಒಳ್ಳೆಯದಾಗಲಿ ಎನ್ನುವ ಅಭಿಲಾಷೆಯಿದೆ. ಪಕ್ಷದ ನಾಯಕರು ಯಾವ ರೀತಿ ನಿರ್ಧಾರ ಮಾಡುತ್ತಾರೆ ಎಂಬುದು ನಮಗೆ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತದೆ. ಮೊದಲ ಸಲ‌ ಗೆದ್ದವರಿಂದ ಹಿಡಿದು 8-9 ಸಲ ಗೆದ್ದವರಿಗೂ ಸಚಿವರಾಗಬೇಕು ಎನ್ನುವ ಅಭಿಲಾಷೆ ಇದ್ದೇ ಇರುತ್ತದೆ. ಆದರೆ ನಾವು ಪಕ್ಷದ ಚೌಕಟ್ಟಿನಲ್ಲಿ ಒಂದು ನಿಯಮಗಳನ್ನ ಪಾಲನೆ ಮಾಡಬೇಕಾಗುತ್ತದೆ" ಎಂದರು.

ಬೆಂಬಲಿಗರ ನಿಯೋಗ ಬರಬಾರದಾಗಿ ಮನವಿ

"ದಯವಿಟ್ಟು ಇನ್ನು ಯಾವ ಬೆಂಬಲಿಗರ ನಿಯೋಗವು ಸಚಿವ ಸ್ಥಾನ ಬೇಡಿಕೆಯೊಂದಿಗೆ ಬರಬಾರದು ಎಂದು ಮನವಿ ಮಾಡುತ್ತೇನೆ. 2028 ಕ್ಕೆ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮೆಲ್ಲರ ಗುರಿಯಾಗಬೇಕು. 140 ಜನ ಶಾಸಕರಿಗೂ ಮುಖ್ಯಮಂತ್ರಿಯಾಗಬೇಕು ಎನ್ನುವ ಆಸೆಯಿರುತ್ತದೆ. ಆದರೆ ಆಗುವುದು ಒಬ್ಬರೇ ಅಲ್ಲವೇ?" ಎಂದರು.

"33 ಸಚಿವ ಸ್ಥಾನಗಳಿವೆ ಅದರಲ್ಲಿ ಜಾತಿ, ಪ್ರದೇಶ ಎಲ್ಲವನ್ನೂ ನೋಡಬೇಕಲ್ಲವೇ? ಇದರ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ನಾನು ಸಹ ಚಿಕ್ಕವಯಸ್ಸಿನಲ್ಲೇ ಮಂತ್ರಿ ಪದವಿ ಪಡೆದವನು. ನನಗೂ ಯುವಕರಿಗೆ ನೀಡಬೇಕು ಎನ್ನುವ ಅಭಿಲಾಷೆಯಿದೆ. ಎಲ್ಲರೂ ತಾಳ್ಮೆಯಿಂದ ಇರಬೇಕು" ಎಂದರು‌.

"ವಿಜಯಾನಂದ ಕಾಶಪ್ಪನವರು ನನ್ನ ಆತ್ಮೀಯ ಸ್ನೇಹಿತರು, ಪರಿಚಯಸ್ಥರು. ಅವರ ಪರವಾಗಿ ಬೆಂಬಲಿಗರು ಬಂದಿರುವುದು ಸಂತೋಷದ ವಿಚಾರ. ಅವರ ತಂದೆಯವರೂ ಸಹ ನನ್ನ ಜೊತೆ ಶಾಸಕರಾಗಿ, ಸಚಿವರಾಗಿದ್ದರು. ಅವರ ತಾಯಿಯವರೂ ಶಾಸಕರಾಗಿದ್ದರು.‌ ಆ ಚುನಾವಣೆಗೆ ನಾನು ಬಂದು ಕೆಲಸ ಮಾಡಿದ್ದೆ" ಎಂದು ಹೇಳಿದರು.

ಕಾಶಪ್ಪನವರ ಸಮಾಜದ ಋಣ ತೀರಿಸುತ್ತಿದ್ದಾರೆ

"ವಿಜಯಾನಂದ ಕಾಶಪ್ಪನವರ ಹೋರಾಟ, ಸಂಘಟನೆ, ಪಾದಯಾತ್ರೆ ಎಲ್ಲದರ ಅರಿವು ನಮಗಿದೆ. ಲಿಂಗಾಯತ ಅಭಿವೃದ್ಧಿ ನಿಗಮದ ಜವಾಬ್ದಾರಿ ನೀಡಿ ಸಮಾಜದ ಋಣ ತೀರಿಸಲಿ ಎಂದು ಹೊಣೆ ನೀಡಲಾಯಿತು. ಅವರು ಸಮಾಜದ ಋಣ ತೀರಿಸುತ್ತಿದ್ದಾರೆ" ಎಂದರು‌.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X