Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬರ ಪರಿಸ್ಥಿತಿ ನಿರ್ವಹಣೆಯಲ್ಲಿ...

ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ7 July 2026 2:55 PM IST
share
ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ
ಕಲಬುರಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ

ಕಲಬುರಗಿ : ರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

ಕಲಬುರಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಗಳವಾರ ಪ್ರಸ್ತಾವಿಕ ಭಾಷಣ ಮಾಡಿದ ಸಿಎಂ ಅವರು, ಜನಪರ ಕೆಲಸ ಮಾಡದ ಅಧಿಕಾರಿಗಳನ್ನು ಸಹಿಸಿಕೊಳ್ಳುವುದಿಲ್ಲ ಎಂದರು.

ಉತ್ತರ ಕರ್ನಾಟಕದ ಮೊದಲ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಕಲಬುರಗಿಯಲ್ಲಿ ಆಯೋಜಿಸಲಾಗಿತ್ತು.

ಸರ್ವರನ್ನೂ ಒಳಗೊಂಡ ಪರಿಶುದ್ಧ ಆಡಳಿತ, ಅಭಿವೃದ್ಧಿ ಮತ್ತು ಕಟ್ಟಕಡೆಯ ವ್ಯಕ್ತಿಗೂ ಅವರ ನಾಗರಿಕ ಹಕ್ಕುಗಳನ್ನು ತಲುಪಿಸುವುದು ನನ್ನ ಸರ್ಕಾರದ ಪ್ರಮುಖ ಗುರಿ. ಈ ಗುರಿ ಸಾಧಿಸಲು ಅಧಿಕಾರಿ ವರ್ಗ ಅತ್ಯಂತ ಕ್ರಿಯಾಶೀಲ, ಜನಪರ ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು" ಎಂದು ತಿಳಿಸಿದರು.

ನಾನು ಬಸವಾದಿ ಶರಣರ ಸಮಾನತೆಯ ತತ್ವವನ್ನು ನಂಬುವವನು. ಆದ್ದರಿಂದಲೇ ನನ್ನ ಮೊದಲ ಉತ್ತರ ಕರ್ನಾಟಕ ಪ್ರವಾಸವನ್ನು ಬಸವಕಲ್ಯಾಣದಿಂದ ಆರಂಭಿಸಿದ್ದೇನೆ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿ ಒಂದೇ ವೇಗದಲ್ಲಿ ಸಾಗಬೇಕು" ಎಂದು ಹೇಳಿದರು.

ಬೀದರ್, ಕಲಬುರಗಿ ಜಿಲ್ಲೆಯ ಜನತೆ ನೀಡಿರುವ ಅಭೂತಪೂರ್ವ ಬೆಂಬಲ, ಪ್ರೀತಿ ಮತ್ತು ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, "ಜನತೆ ನಮ್ಮ ಮೇಲೆ ಇಟ್ಟಿರುವ ನಂಬಿಕೆಯೇ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ. ನಮ್ಮನ್ನು ಈ ಸ್ಥಾನದಲ್ಲಿ ಕೂರಿಸಿರುವ ಜನತೆಯ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವುದು ನಮ್ಮೆಲ್ಲರ ಕರ್ತವ್ಯ" ಎಂದರು.

ಆಡಳಿತದ ಅನುಭವವನ್ನು ಹಂಚಿಕೊಂಡ ಅವರು, "ನಾನು ತಾಲ್ಲೂಕು ಪಂಚಾಯಿತಿ ಅಧ್ಯಕ್ಷನಾಗಿ ಕೆಲಸ ಆರಂಭಿಸಿ ಮುಖ್ಯಮಂತ್ರಿ ಹುದ್ದೆಯವರೆಗೆ ಎಲ್ಲಾ ಹಂತಗಳನ್ನು ದಾಟಿಕೊಂಡು ಬಂದಿದ್ದೇನೆ. ಹೀಗಾಗಿ ಆಡಳಿತದ ಪ್ರತಿಯೊಂದು ಹಂತದಲ್ಲಿ ಏನು ನಡೆಯುತ್ತದೆ ಎಂಬುದು ನನಗೆ ಚೆನ್ನಾಗಿ ಗೊತ್ತಿದೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ನೆಪಗಳನ್ನು ಕೇಳಲು ನಾನು ಸಿದ್ಧನಿಲ್ಲ. ನನಗೆ ಫಲಿತಾಂಶವೇ ಮುಖ್ಯ" ಎಂದು ಅಧಿಕಾರಿಗಳಿಗೆ ಸ್ಪಷ್ಟ ಸಂದೇಶ ನೀಡಿದರು.

ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಮಾತನಾಡಿದ ಮುಖ್ಯಮಂತ್ರಿಯವರು, "ಒಬ್ಬನೇ ಒಬ್ಬ ಅರ್ಹ ಮತದಾರ ತನ್ನ ಮತದಾನದ ಹಕ್ಕು ಕಳೆದುಕೊಳ್ಳಬಾರದು. ಇಲ್ಲಿ ರಾಜಕಾರಣ ಮುಖ್ಯವಲ್ಲ, ಆದರೆ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕು ರಕ್ಷಿಸುವುದು ಸರಕಾರದ ಜವಾಬ್ದಾರಿ. ಬಿಎಲ್ಒಗಳು ಪ್ರತಿಯೊಂದು ಮನೆಗೆ ಕನಿಷ್ಠ ಮೂರು ಬಾರಿ ಭೇಟಿ ನೀಡಿ ಅರ್ಹ ಮತದಾರರ ಹೆಸರನ್ನು ಉಳಿಸುತ್ತಾರೆಯೇ ಎಂಬುದರ ಮೇಲೆ ನಿಗಾ ವಹಿಸಬೇಕು. ಈ ವಿಚಾರದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ" ಎಂದು ಸೂಚಿಸಿದರು.

ರಾಜ್ಯದ ಅಭಿವೃದ್ಧಿ ಮತ್ತು ನೀರಿನ ನಿರ್ವಹಣೆ ಕುರಿತು ಮಾತನಾಡಿದ ಅವರು, "ದೇಶಾದ್ಯಂತ ಮಳೆಯ ಅಭಾವದ ಬಗ್ಗೆ ಆತಂಕ ವ್ಯಕ್ತವಾಗುತ್ತಿದೆ. ರಾಜ್ಯದ ಪರಿಸ್ಥಿತಿ ಸಮಾಧಾನಕರವಾಗಿದೆ. ಅಂತರರಾಜ್ಯ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ತೆಲಂಗಾಣ ಮತ್ತು ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರೊಂದಿಗೆ ಐತಿಹಾಸಿಕ ಮಟ್ಟದ ಚರ್ಚೆ ನಡೆಸಿದ್ದೇವೆ. ಕೃಷ್ಣ, ಕಾವೇರಿ ಮತ್ತು ಗೋದಾವರಿ ನದಿಗಳ ಜೋಡಣೆ ಯೋಜನೆಯನ್ನು ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಮುಂದುವರಿಸುವ ಪ್ರಸ್ತಾವನೆಗೆ ಕೇಂದ್ರ ಸರಕಾರವೂ ಸಕಾರಾತ್ಮಕ ಸ್ಪಂದನೆ ನೀಡಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ರಾಜ್ಯದ ಜನರ ಹಿತಾಸಕ್ತಿ ರಕ್ಷಣೆ ಆದ್ಯತೆಯಾಗಿಸಿ ಒಟ್ಟಾಗಿ ಕೆಲಸ ಮಾಡಲು ತೀರ್ಮಾನಿಸಿದ್ದೇವೆ" ಎಂದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X