Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜನರ ಮನೆ ಬಾಗಿಲಿಗೆ ಸರಕಾರವನ್ನು...

ಜನರ ಮನೆ ಬಾಗಿಲಿಗೆ ಸರಕಾರವನ್ನು ತಲುಪಿಸುವ ಜವಾಬ್ದಾರಿ ನಮ್ಮದು : ಸಿಎಂ ಡಿ.ಕೆ.ಶಿವಕುಮಾರ್‌

ವಾರ್ತಾಭಾರತಿವಾರ್ತಾಭಾರತಿ9 July 2026 7:07 PM IST
share
ಜನರ ಮನೆ ಬಾಗಿಲಿಗೆ ಸರಕಾರವನ್ನು ತಲುಪಿಸುವ ಜವಾಬ್ದಾರಿ ನಮ್ಮದು : ಸಿಎಂ ಡಿ.ಕೆ.ಶಿವಕುಮಾರ್‌
ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ

ಬೆಳಗಾವಿ : ‘ಅಭಿವೃದ್ಧಿ, ಪಾರದರ್ಶಕತೆ ಮತ್ತು ಶಿಸ್ತು’ ಇವು ನಮ್ಮ ಸರಕಾರದ ಮೂರು ಮೂಲಮಂತ್ರಗಳು. ಜನರು ನಮ್ಮನ್ನು ಅಧಿಕಾರಕ್ಕೆ ತಂದಿದ್ದಾರೆ. ಈಗ ಜನರ ಮನೆ ಬಾಗಿಲಿಗೆ ಸರಕಾರವನ್ನು ತಲುಪಿಸುವ ಜವಾಬ್ದಾರಿ ನಮ್ಮದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ಸುರ್ವಣ ವಿಧಾನಸೌಧದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಡಳಿತದ ಕಾರ್ಯಕ್ಷಮತೆ, ಜನಸೇವೆ, ಅಭಿವೃದ್ಧಿ ಮತ್ತು ಅಧಿಕಾರಿಗಳ ಹೊಣೆಗಾರಿಕೆ ಕುರಿತು ಕಟ್ಟುನಿಟ್ಟಿನ ಸಂದೇಶ ನೀಡಿದ ಅವರು, ಅಧಿಕಾರಿಗಳು ಜನರ ಮಧ್ಯೆ ಇರಬೇಕು, ಕಚೇರಿಗಳ ಗೋಡೆಗಳ ನಡುವೆ ಅಲ್ಲ ಎಂದು ತಿಳಿಸಿದರು.

ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನರ ಮುಂದೆ ಹೋಗಿ ಜನಾದೇಶ ಕೇಳುತ್ತೇವೆ. ಆದರೆ ಅಧಿಕಾರಿಗಳು ಪ್ರತಿದಿನ ಜನರ ವಿಶ್ವಾಸಕ್ಕೆ ಉತ್ತರದಾಯಕರಾಗಿರಬೇಕು. ಕರ್ತವ್ಯ ನಿರ್ವಹಿಸದಿರುವುದು ಕೇವಲ ಆಡಳಿತ ವೈಫಲ್ಯವಲ್ಲ, ಅದು ಜನತೆಗೆ ಮಾಡುವ ದ್ರೋಹ ಎಂದು ಅವರು ಹೇಳಿದರು.

ಆಡಳಿತದಲ್ಲಿ ಶಿಸ್ತಿಗೆ ಯಾವುದೆ ರಾಜಿ ಇಲ್ಲ ಎಂದು ಎಚ್ಚರಿಸಿದ ಮುಖ್ಯಮಂತ್ರಿ, ಸಭೆಯ ಮಧ್ಯೆ ಯಾವುದೆ ಅಧಿಕಾರಿ ಮೊಬೈಲ್‍ನಲ್ಲಿ ಮಾತನಾಡುತ್ತಿರುವುದು ಕಂಡುಬಂದರೆ, ಸಭೆ ಮುಗಿಯುವ ವೇಳೆಗೆ ಅವರ ಅಮಾನತು ಆದೇಶ ಸಿದ್ಧವಾಗಿರುತ್ತದೆ. ಶಿಸ್ತು ಎನ್ನುವುದು ಆಡಳಿತದ ಮೊದಲ ನಿಯಮ ಎಂದು ಎಚ್ಚರಿಸಿದರು.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದಲ್ಲೆ ನೆಲೆಸಬೇಕು ಎಂದು ಸೂಚಿಸಿದ ಶಿವಕುಮಾರ್, ಜನರ ಸಮಸ್ಯೆಗಳನ್ನು ಕೇಳಲು ಅಧಿಕಾರಿಗಳು ಜನರ ಬಳಿಯೇ ಇರಬೇಕು. ಸಣ್ಣ ಕೆಲಸಗಳಿಗೂ ಜನರನ್ನು ಒಂದು ಕಚೇರಿಯಿಂದ ಮತ್ತೊಂದು ಕಚೇರಿಗೆ ಅಲೆದಾಡಿಸುವ ಸಂಸ್ಕೃತಿ ಕೊನೆಗಾಣಬೇಕು. ಸಾಧ್ಯವಾದಷ್ಟು ಸಮಸ್ಯೆಗಳು ಸ್ಥಳೀಯ ಮಟ್ಟದಲ್ಲೇ ಇತ್ಯರ್ಥವಾಗಬೇಕು ಎಂದು ತಿಳಿಸಿದರು.

ಪ್ರತಿ ಜಿಲ್ಲಾ ಮಟ್ಟದ ಅಧಿಕಾರಿಯೂ ತಮ್ಮ ಅಧೀನ ಅಧಿಕಾರಿಗಳ ಕಾರ್ಯಚಟುವಟಿಕೆಗಳ ಬಗ್ಗೆ ನಿತ್ಯ ಮಾಹಿತಿ ಹೊಂದಿರಬೇಕು ಎಂದು ಸೂಚಿಸಿದ ಮುಖ್ಯಮಂತ್ರಿ, ಯಾರು ಯಾವ ಗ್ರಾಮಕ್ಕೆ ಭೇಟಿ ನೀಡಿದರು, ಯಾವ ಸಮಸ್ಯೆ ಪರಿಹರಿಸಿದರು ಎಂಬುದರ ದಾಖಲೆ ಪ್ರತಿದಿನ ನವೀಕರಿಸಬೇಕು. ಫೀಲ್ಡ್ ಆಡಳಿತವೇ ಉತ್ತಮ ಆಡಳಿತದ ಅಳತೆ ಎಂದು ಹೇಳಿದರು.

ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸಲು ಸರಕಾರ ಸ್ಥಾಪಿಸಿರುವ ‘ಪ್ರಜಾಸೇವಾ ಇಲಾಖೆ’ಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸೂಚಿಸಿದ ಶಿವಕುಮಾರ್, ಶಾಸಕರು, ಸಚಿವರು ಮತ್ತು ಅಧಿಕಾರಿಗಳು ಜನರ ಬಳಿಗೆ ತೆರಳಬೇಕು. ನಾನು ನಡೆಸುತ್ತಿರುವ ಜನಸ್ಪಂದನ ಮಾದರಿಯನ್ನೆ ಆಡಳಿತದ ಎಲ್ಲ ಹಂತಗಳಲ್ಲೂ ಅಳವಡಿಸಬೇಕು. ಕಾನೂನಿನ ವ್ಯಾಪ್ತಿಯಲ್ಲಿ ಸಾಧ್ಯವಿರುವ ಯಾವುದೇ ಸಮಸ್ಯೆಯನ್ನು ವಿಳಂಬ ಮಾಡದೆ ಪರಿಹರಿಸಬೇಕು ಎಂದು ನಿರ್ದೇಶನ ನೀಡಿದರು.

ನಗರಾಭಿವೃದ್ಧಿಯಲ್ಲಿ ಯೋಜನಾಬದ್ಧತೆ ಅನಿವಾರ್ಯ ಎಂದು ಹೇಳಿದ ಮುಖ್ಯಮಂತ್ರಿ, ಅವೈಜ್ಞಾನಿಕ ಬಡಾವಣೆಗಳಿಗೆ ಅವಕಾಶವಿಲ್ಲ. ನಗರಗಳು ಮತ್ತು ಪಟ್ಟಣಗಳು ಮುಂದಿನ ತಲೆಮಾರಿನ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಯೋಜನಾಬದ್ಧವಾಗಿ ಬೆಳೆಯಬೇಕು. ಸರಕಾರದ ನೀತಿ ತೀರ್ಮಾನಗಳನ್ನು ಅಧಿಕಾರಿಗಳು ಅಕ್ಷರಶಃ ಜಾರಿಗೆ ತರಬೇಕು ಎಂದು ತಾಕೀತು ಮಾಡಿದರು.

ಒಂದು ರೂಪಾಯಿಯೂ ವೆಚ್ಚವಿಲ್ಲದೆ ಜನರ ಮನೆ ಬಾಗಿಲಿಗೆ ಇ-ಖಾತಾ ತಲುಪಿಸುವ ವ್ಯವಸ್ಥೆ ದೇಶದಲ್ಲೆ ಮಾದರಿಯಾಗಿದೆ. ಇದು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ಪ್ರತಿಯೊಂದು ಜಿಲ್ಲೆಗೆ ವಿಸ್ತರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಸಿಎಸ್‍ಆರ್ ಶಾಲೆಗಳು: ಕೆಪಿಎಸ್ ಶಾಲೆಗಳ ಯಶಸ್ವಿ ಮಾದರಿಯಂತೆ ಸಿಎಸ್‍ಆರ್ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಗ್ರಾಮೀಣ ಮಕ್ಕಳಿಗೂ ನಗರಮಟ್ಟದ ಶಿಕ್ಷಣ ದೊರೆಯಬೇಕು. ಪ್ರತಿಯೊಂದು ಕ್ಷೇತ್ರದಲ್ಲೂ 10 ರಿಂದ 20 ಗುಣಮಟ್ಟದ ಶಾಲೆಗಳನ್ನು ನಿರ್ಮಿಸುವ ಗುರಿಯೊಂದಿಗೆ ಸರಕಾರ ಮತ್ತು ಕೈಗಾರಿಕಾ ವಲಯ ಒಟ್ಟಾಗಿ ಕೆಲಸ ಮಾಡಲಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಒಬ್ಬ ಅರ್ಹ ಮತದಾರನ ಹಕ್ಕು ಕಳೆದು ಹೋಗಬಾರದು: ಮತದಾರರ ಪಟ್ಟಿ ಪರಿಷ್ಕರಣೆ (ಎಸ್‍ಐಆರ್) ಕುರಿತು ಮಾತನಾಡಿದ ಮುಖ್ಯಮಂತ್ರಿ, ಈ ವಿಷಯದಲ್ಲಿ ರಾಜಕಾರಣಕ್ಕೆ ಅವಕಾಶವಿಲ್ಲ. ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕು ರಕ್ಷಿಸುವುದು ನಮ್ಮ ಜವಾಬ್ದಾರಿ. ಬಿಎಲ್‍ಒಗಳು ಪ್ರತಿಯೊಂದು ಮನೆಗೆ ಕನಿಷ್ಠ ಮೂರು ಬಾರಿ ಭೇಟಿ ನೀಡಬೇಕು. ಅಗತ್ಯ ದಾಖಲೆಗಳನ್ನು ಸರಕಾರವೆ ಒದಗಿಸುತ್ತದೆ. ಒಬ್ಬ ಅರ್ಹ ಮತದಾರನ ಹಕ್ಕೂ ಕಳೆದುಹೋಗಬಾರದು ಎಂದು ಸೂಚಿಸಿದರು.

ಯುವ ಉದ್ಯೋಗ ಸೇತು: ಯುವಜನರ ಉದ್ಯೋಗಾವಕಾಶಗಳಿಗೆ ಹೊಸ ದಿಕ್ಕು ನೀಡುವ ಉದ್ದೇಶದಿಂದ ‘ಯುವ ಉದ್ಯೋಗ ಸೇತು' ಕಾರ್ಯಕ್ರಮವನ್ನು ಆರಂಭಿಸಲಾಗುತ್ತಿದೆ ಎಂದು ಘೋಷಿಸಿದ ಮುಖ್ಯಮಂತ್ರಿ, ಖಾಸಗಿ ಕ್ಷೇತ್ರದ ಉದ್ಯೋಗಾವಕಾಶಗಳನ್ನು ವಿದ್ಯಾರ್ಥಿಗಳು ಮತ್ತು ಯುವಕರಿಗೆ ಸಂಪರ್ಕಿಸುವ ವ್ಯವಸ್ಥೆಯನ್ನು ಸರಕಾರ ರೂಪಿಸುತ್ತಿದೆ ಎಂದು ಹೇಳಿದರು.

ಭಾರತ್ ಜೋಡೋ ಯುವ ಸಂಘಗಳು: ಸಾಮಾಜಿಕ ಸಾಮರಸ್ಯ ಮತ್ತು ಸಂವಿಧಾನ ಮೌಲ್ಯಗಳ ಪ್ರಸಾರಕ್ಕಾಗಿ ರಾಜ್ಯಾದ್ಯಂತ 10 ಸಾವಿರ ‘ಭಾರತ್ ಜೋಡೋ ಯುವ ಸಂಘ'ಗಳನ್ನು ಸ್ಥಾಪಿಸಲಾಗುವುದು. ಪ್ರತಿಯೊಂದು ಸಂಘಕ್ಕೂ ತಲಾ 10 ಲಕ್ಷ ರೂ. ಅನುದಾನ ನೀಡಲಾಗುವುದು. ಕುವೆಂಪು ಅವರ ವಿಶ್ವಮಾನವ ಸಂದೇಶ ಮತ್ತು ಸಂವಿಧಾನದ ಆದರ್ಶಗಳನ್ನು ಸಮಾಜದ ಮನೆಮನೆಗೆ ತಲುಪಿಸುವ ಸಾಂಸ್ಕೃತಿಕ ಚಳವಳಿಯಾಗಿ ಇದು ರೂಪುಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಕಂದಾಯ ಭೂಮಿಯ ಸಮಗ್ರ ಆಡಿಟ್‍ಗೆ ಸೂಚನೆ ನೀಡಿದ ಅವರು, ರಾಜ್ಯದ ಪ್ರತಿಯೊಂದು ಇಂಚು ಸರಕಾರಿ ಭೂಮಿಯ ನಿಖರ ಮಾಹಿತಿ ಸರಕಾರದ ಬಳಿ ಇರಬೇಕು. ನಿವೇಶನ ರಹಿತ ಬಡ ಕುಟುಂಬಗಳಿಗೆ ನಿವೇಶನ ಒದಗಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಶೀಘ್ರದಲ್ಲೆ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ಸತೀಶ್ ಜಾರಕಿಹೊಳಿ, ಯು.ಟಿ.ಖಾದರ್, ಈಶ್ವರ್ ಖಂಡ್ರೆ, ಮಾಜಿ ಸಚಿವ ಎಂ.ಬಿ.ಪಾಟೀಲ್, ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಸೇರಿದಂತೆ, ಮಾಜಿ ಸಚಿವರು, ಶಾಸಕರು ಭಾಗವಹಿಸಿದ್ದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X