Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರ್ನಾಟಕ ಪ್ರತಿಭಾನ್ವಿತ ಮಾನವ ಸಂಪನ್ಮೂಲ...

ಕರ್ನಾಟಕ ಪ್ರತಿಭಾನ್ವಿತ ಮಾನವ ಸಂಪನ್ಮೂಲ ತಯಾರಿಕಾ ಕೇಂದ್ರ : ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ23 July 2026 7:01 PM IST
share
ಕರ್ನಾಟಕ ಪ್ರತಿಭಾನ್ವಿತ ಮಾನವ ಸಂಪನ್ಮೂಲ ತಯಾರಿಕಾ ಕೇಂದ್ರ : ಸಿಎಂ ಡಿ.ಕೆ.ಶಿವಕುಮಾರ್
15ನೇ ಸ್ಟ್ರಾಟೆಜಿಕ್ ಎಲೆಕ್ಟ್ರಾನಿಕ್ ಸಮ್ಮಿಟ್

ಬೆಂಗಳೂರು : ಕರ್ನಾಟಕ ಪ್ರತಿಭಾನ್ವಿತ ಮಾನವ ಸಂಪನ್ಮೂಲ ತಯಾರಿಕಾ ಕೇಂದ್ರವಾಗಿದ್ದು, ಇಲ್ಲಿರುವ ಮಾನವ ಸಂಪನ್ಮೂಲ, ಹವಾಮಾನ ಹಾಗೂ ಸಂಸ್ಕೃತಿಗೆ ದೇಶದ ಬೇರೆ ಯಾವುದೇ ನಗರಗಳೂ ಸಾಟಿಯಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಗುರುವಾರ ನಗರದ ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತರ್ ರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಎಲೆಕ್ಟ್ರಾನಿಕ್ ಇಂಡಸ್ಟ್ರೀಸ್ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಆಯೋಜಿಸಲಾಗಿದ್ದ ರಕ್ಷಣೆ ಹಾಗೂ ಏರೋಸ್ಪೇಸ್ ಕ್ಷೇತ್ರದ 15ನೇ ಸ್ಟ್ರಾಟೆಜಿಕ್ ಎಲೆಕ್ಟ್ರಾನಿಕ್ ಸಮ್ಮಿಟ್ ‌ ನಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಎಲೆಕ್ಟ್ರಾನಿಕ್ಸ್ ಕೇವಲ ನಗರಗಳಿಗೆ ಸೀಮಿತವಾಗಿಲ್ಲ. ಪ್ರತಿ ಮಗುವಿನ ಕೈಯಲ್ಲಿ ಈಗ ಮೊಬೈಲ್ ಫೋನ್ ಗಳು ಬಂದಿವೆ. ಕರ್ನಾಟಕದಲ್ಲಿ 250 ಇಂಜಿನಿಯರಿಂಗ್ ಕಾಲೇಜುಗಳಿಂದ್ದು, ಪ್ರತಿ ವರ್ಷ 1 ಲಕ್ಷಕ್ಕೂ ಹೆಚ್ಚು ಇಂಜಿನಿಯರ್ ಗಳನ್ನು ತಯಾರು ಮಾಡಲಾಗುತ್ತಿದೆ. ಕರ್ನಾಟಕ ಮಾನವ ಸಂಪನ್ಮೂಲದ ತಯಾರಿಕಾ ಕೇಂದ್ರವಾಗಿದೆ ಎಂದು ಅವರು ಹೇಳಿದರು.

ಇದೇ ಕಾರಣಕ್ಕೆ ನೆಹರೂ ಅವರು ಬೆಂಗಳೂರಿನಲ್ಲಿ ರಕ್ಷಣಾ ಕ್ಷೇತ್ರದ ಉತ್ಪಾದನೆ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್, ಇಸ್ರೋ, ಐಐಟಿ, ಬಿಎಚ್‍ಇಎಲ್ ಸೇರಿದಂತೆ ಪ್ರಮುಖ ಸಾರ್ವಜನಿಕ ಉದ್ಯಮಗಳನ್ನು ಸ್ಥಾಪಿಸಿದ್ದರು ಎಂದು ಹೇಳಿದ ಮುಖ್ಯಮಂತ್ರಿ, ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ, ದಿಲ್ಲಿಯಿಂದ ವಿದ್ಯಾರ್ಥಿಗಳು ಇಲ್ಲಿಗೆ ಬಂದು ವಿದ್ಯಾಭ್ಯಾಸ ಪಡೆದಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು ಎಲೆಕ್ಟ್ರಾನಿಕ್ಸ್, ಏರೋಸ್ಪೇಸ್, ರಕ್ಷಣಾ ವಲಯದ ಕ್ಷೇತ್ರಗಳಿಗೆ ಹೆಸರುವಾಸಿಯಾಗಿದೆ. ಕೆಲವರು ಬೆಂಗಳೂರು ಹೊರತಾಗಿ ಮೈಸೂರು, ಬೆಳಗಾವಿಯಲ್ಲೂ ಘಟಕ ಆರಂಭಿಸಿದ್ದೀರಿ. ದೇಶದ ಭದ್ರತೆ ವಿಚಾರದಲ್ಲಿ ಎಲೆಕ್ಟ್ರಾನಿಕ್ಸ್ ಬಹಳ ಪ್ರಮುಖವಾಗಿದೆ. ನೀವು ದೇಶದ ಭದ್ರತೆಗಾಗಿ ಕೆಲಸ ಮಾಡುತ್ತಿದ್ದೀರಿ. ನಾವೆಲ್ಲರೂ ಒಂದು ತಂಡವಾಗಿ ಕೆಲಸ ಮಾಡಬೇಕಿದೆ ಎಂದು ಅವರು ಕರೆ ನೀಡಿದರು.

ತಂತ್ರಜ್ಞಾನ, ಸಂಶೋಧನೆ ಹಾಗೂ ನಾವಿನ್ಯತೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ರಕ್ಷಣಾ ವಲಯದಲ್ಲಿ ಕಾರ್ಯನಿರ್ವಹಿಸುವ ಉದ್ಯಮಿಗಳಿಗೆ 25 ಕೋಟಿಯಷ್ಟು ಸಬ್ಸಿಡಿ ನೀಡಲು ಮುಂದಾಗಿರುವ ವಿಚಾರ ರಕ್ಷಣಾ ಇಲಾಖೆ ಕೈಪಿಡಿಯಿಂದ ತಿಳಿಯಿತು. ಕೇಂದ್ರ ಸರಕಾರದ ಈ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಶಿವಕುಮಾರ್ ಹೇಳಿದರು.

ಭಾರತದಲ್ಲಿ ಏರೋಸ್ಪೇಸ್ ಕ್ಷೇತ್ರ ವ್ಯಾಪಕವಾಗಿ ಬೆಳೆಯುತ್ತಿದೆ. ನಾವು ದೇಶದ ಭವಿಷ್ಯ ಹಾಗೂ ಜಾಗತಿಕ ತಂತ್ರಜ್ಞಾನದ ವಿನ್ಯಾಸಕರಾಗಿದ್ದೇವೆ. ನಾವು ಆಟೋಮೊಬೈಲ್, ಆರೋಗ್ಯ ಕ್ಷೇತ್ರ, ಏರೋಸ್ಪೇಸ್, ರಕ್ಷಣೆ ಹಾಗೂ ಬೃಹತ್ ಯಂತ್ರಗಳ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದೇವೆ. ನಮ್ಮಲ್ಲಿ ಅತಿ ದೊಡ್ಡ ಸಂಶೋಧನೆ ಹಾಗೂ ಅಭಿವೃದ್ಧಿಯ ಸೌಲಭ್ಯವಿದ್ದು, ನೈಪುಣ್ಯತೆ ಕೇಂದ್ರವಾಗಿದೆ ಎಂದು ಅವರು ತಿಳಿಸಿದರು.

ಜಾಗತಿಕ ಸಾಮಥ್ರ್ಯ ಕೇಂದ್ರಗಳ ತಾಣವಾಗಿ ಕರ್ನಾಟಕ ರೂಪುಗೊಳ್ಳುತ್ತಿದ್ದು, 900ಕ್ಕೂ ಹೆಚ್ಚು ಜಿಸಿಸಿ ಕೇಂದ್ರಗಳಿವೆ. ಅಮೆರಿಕದಿಂದ ಹೊರಗೆ ಗೂಗಲ್ ಸಂಸ್ಥೆಯ ಅತಿ ದೊಡ್ಡ ಕ್ಯಾಂಪಸ್ ಇರುವುದು ಬೆಂಗಳೂರಿನಲ್ಲಿ. ನಾವು ಎಐ ಕ್ಷೇತ್ರಗಳಲ್ಲೂ ಮುಂಚೂಣಿ ಸಾಧಿಸುತ್ತಿದ್ದು, ಶಿಕ್ಷಣದಲ್ಲಿ ಎಐ ಬಳಕೆಗೆ ಮುಂದಾಗಿದ್ದೇವೆ. ನೀವು ಪ್ರಗತಿ ಸಾಧಿಸಿ ರಾಜ್ಯ ಹಾಗೂ ದೇಶವನ್ನು ಪ್ರಗತಿ ಸಾಧಿಸುವಂತೆ ಮಾಡಬೇಕು. ಕಂಪನಿಗಳು ಬಲಿಷ್ಠವಾದರೆ, ನಾವುಗಳು ಶಕ್ತಿಶಾಲಿಯಾಗುತ್ತೇವೆ. ಇಡೀ ದೇಶ ಒಂದಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಕರೆ ನೀಡಿದರು.

ಉದ್ಯಮಿಗಳು, ಸರಕಾರ ಎಲ್ಲರೂ ಒಂದಾಗಿ ಇತಿಹಾಸ ಸೃಷ್ಟಿಸಬೇಕು. ನನಗೆ ಇತಿಹಾಸ ಓದುವುದಕ್ಕಿಂತ ಇತಿಹಾಸ ಸೃಷ್ಟಿಸುವುದರಲ್ಲಿ ಹೆಚ್ಚಿನ ಆಸಕ್ತಿ ಇದೆ. ಕರ್ನಾಟಕ ಇತಿಹಾಸ ನಿರ್ಮಿಸುತ್ತದೆ. ನಿಮ್ಮ ಸಲಹೆ ಏನೇ ಇದ್ದರೂ ನಮಗೆ ನೀಡಿ ನಮ್ಮ ಸರಕಾರ ನಿಮ್ಮ ಸಲಹೆಗಳಿಗೆ ಮುಕ್ತವಾಗಿದೆ. ನಿಮ್ಮ ಜೊತೆ ಕೆಲಸ ಮಾಡಲು ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಇಎಲ್‍ಸಿಐಎನ್‍ಎ ಅಧ್ಯಕ್ಷ ಡಾ.ಶಶಿಕುಮಾರ್ ಗೆಂಧಮ್, ಬೋಯಿಂಗ್ ಕಂಪನಿಯ ಅಶ್ವನಿ ಭಾರ್ಗವ, ನಿವೃತ್ತ ವಿಂಗ್ ಕಮಾಂಡರ್ ಪಿ.ಮಧುಸೂಧನನ್, ಕರ್ನಲ್ ಸಂಜಯ್ ಸಿಂಗ್, ಸಫ್ರನ್ ಇಂಡಿಯಾ ಸಿಇಒ ಜೇತೇಂದ್ರ ಎಸ್.ಗವಾಂಕರ್ ಹಾಗೂ ಕರ್ನಾಟಕ ನಾವಿನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಉಪಸ್ಥಿತರಿದ್ದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X