Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತಮಿಳುನಾಡಿಗೆ ಕಾವೇರಿ ನೀರು ಹರಿಸುವ...

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಮೇಲ್ಮನವಿಗೆ ತೀರ್ಮಾನ : ಸಿಎಂ ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ29 July 2026 5:53 PM IST
share
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಮೇಲ್ಮನವಿಗೆ ತೀರ್ಮಾನ : ಸಿಎಂ ಡಿ.ಕೆ. ಶಿವಕುಮಾರ್
"ಕಾವೇರಿ ಭಾಗದ ಪರಿಸ್ಥಿತಿ ವೀಕ್ಷಿಸಲು ತಮಿಳುನಾಡು ಸಿಎಂ ವಿಜಯ್ ಗೆ ಮನವಿ"

ಹೊಸದಿಲ್ಲಿ: “ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ಅಡ್ವೊಕೇಟ್ ಜನರಲ್, ಕಾನೂನು ತಜ್ಞರು ಹಾಗೂ ಅಧಿಕಾರಿಗಳ ಜೊತೆ ಸಭೆ ಮಾಡಲಾಗಿದ್ದು, ಮೇಲ್ಮನವಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.

ತಮಿಳುನಾಡಿಗೆ ನೀರು ಹರಿಸುವ ಬಗ್ಗೆ CWRC ನೀಡಿರುವ ಆದೇಶದ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಸಭೆ ಮಾಡಿದ್ದೇವೆ. ಈ ಬಾರಿ ವರುಣ ಕೃಪೆ ತೋರಿಲ್ಲ. ಈ ಹಿಂದೆ ಸಮಿತಿಯು ಕಾವೇರಿ ನೀರು ಹರಿಸಬೇಕು ಎಂಬ ತಮಿಳುನಾಡಿನ ಮನವಿಯನ್ನು ಎರಡು ಬಾರಿ ತಿರಸ್ಕರಿಸಿತ್ತು. ಈ ಬಾರಿ ನೀರು ಹರಿಸಲು ಸೂಚಿಸಿದೆ. ಈ ಆದೇಶದ ವಿರುದ್ಧ ಮೇಲ್ಮನವಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ” ಎಂದರು.

“ಬೆಂಗಳೂರಿಗೆ ಮರಳಿದ ನಂತರ ವಿರೋಧ ಪಕ್ಷದ ನಾಯಕರ ಜೊತೆಯೂ ಈ ಬಗ್ಗೆ ಚರ್ಚೆ ಮಾಡಲಾಗುವುದು. ಈ ಮಧ್ಯೆ ತಮಿಳುನಾಡು ಸಿಎಂ ನನ್ನ ಜೊತೆ ಚರ್ಚೆ ಮಾಡಲು ಇಂಗಿತ ವ್ಯಕ್ತಪಡಿಸಿ ಮುಖ್ಯಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ನನ್ನ ಜತೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ನಾವು ಅವರಿಗೆ ಕೊಡಬೇಕಾದ ಗೌರವ ನೀಡಿ, ಸಭೆಗೆ ಬನ್ನಿ ಎಂದು ಹೇಳಿದ್ದೇನೆ. ನಮ್ಮ ರಾಜ್ಯಕ್ಕೆ ಬರುತ್ತೇವೆ ಎನ್ನುವ ಅತಿಥಿಗಳನ್ನು ಗೌರವದಿಂದ ಸ್ವೀಕಾರ ಮಾಡುವುದು ನಮ್ಮ ಕರ್ತವ್ಯ. ಹೀಗಾಗಿ ಬನ್ನಿ ಎಂದು ಹೇಳಿದ್ದು, ಅದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ” ಎಂದು ತಿಳಿಸಿದರು.

ಕಾವೇರಿ ಭಾಗದ ಪರಿಸ್ಥಿತಿ ವೀಕ್ಷಿಸಲು ಸಿಎಂ ವಿಜಯ್ ಗೆ ಮನವಿ :

“ನಮ್ಮ ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿ ನೋಡಿ ಎಂದು ಸಿಎಂ ವಿಜಯ್ ಅವರಿಗೆ ನಾವು ಮನವಿ ಮಾಡಿದ್ದೇವೆ. ಅದಕ್ಕೆ ಅಗತ್ಯವಿರುವ ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಲಾಗುವುದು ಎಂದೂ ಹೇಳಿದ್ದೇನೆ. ಅವರಿಗೂ ವಾಸ್ತವ ಪರಿಸ್ಥಿತಿ ಅನುಭವ ಆಗಬೇಕು. ಅವರ ತೀರ್ಮಾನ ಏನು ಎಂದು ನೋಡೋಣ” ಎಂದು ತಿಳಿಸಿದರು.

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಪ್ರಯೋಗ, ನನ್ನ ರಾಜಕೀಯದಲ್ಲೇ ಮೊದಲ ಬಾರಿಗೆ ಕಂಡಿದ್ದೇನೆ :

ಸಂಸತ್ತಿನಲ್ಲಿ ರಾಹುಲ್ ಗಾಂಧಿ ಅವರು ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪೊಲೀಸರ ದಾಳಿಗೆ ಗೃಹ ಸಚಿವ ಅಮಿತ್ ಶಾ ಅವರೇ ಹೊಣೆ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ಇದು ಕೇವಲ ರಾಹುಲ್ ಗಾಂಧಿ ಅವರ ಹೇಳಿಕೆ ಮಾತ್ರವಲ್ಲ. ಇದು ದೇಶದ ಪ್ರಶ್ನೆ. ಇದು ದೊಡ್ಡ ವಿಚಾರವಾದರೂ, ರಾಹುಲ್ ಗಾಂಧಿ ಅವರು ಕೇಳಿರುವುದು ಸಣ್ಣ ಪ್ರಶ್ನೆ ಅಷ್ಟೆ. ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಪ್ರಯೋಗಕ್ಕೆ ಅನುಮತಿ ಕೊಟ್ಟವರು ಯಾರು? ದೆಹಲಿ ಪೊಲೀಸರು ಕೇಂದ್ರ ಸರ್ಕಾರದ ಅಧೀನದಲ್ಲಿರುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಮೂಲಭೂತ ಪ್ರಶ್ನೆ ಕೇಳುವುದು ವಿರೋಧ ಪಕ್ಷದ ನಾಯಕರು ಹಾಗೂ ಪ್ರತಿಯೊಬ್ಬರ ಕರ್ತವ್ಯವಾಗಿದೆ. ನನ್ನ ರಾಜಕೀಯ ಇತಿಹಾಸದಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಪ್ರಯೋಗವಾಗಿರುವುದನ್ನು ನೋಡುತ್ತಿರುವುದು ಇದೇ ಮೊದಲು. ಈ ಬಗ್ಗೆ ವಿವರಣೆ ನೀಡುವುದು ಗೃಹ ಸಚಿವರ ಕರ್ತವ್ಯವಾಗಿದೆ” ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದಾಗ, “ಚರ್ಚೆಗಳು ಆಗಿವೆ. ಹೈಕಮಾಂಡ್ ನಾಯಕರ ಜೊತೆ ಅಂತಿಮವಾಗಿ ಮಾತನಾಡುವುದು ಬಾಕಿ ಇದೆ. ನಮ್ಮ ನಾಯಕರು ಚರ್ಚೆ ಮಾಡಲು ಕರೆಯುವುದಾಗಿ ಹೇಳಿದ್ದಾರೆ” ಎಂದು ತಿಳಿಸಿದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X