Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪೊಲೀಸರ ಸಂಕಷ್ಟ ಭತ್ಯೆ ಶೇ.50 ರಷ್ಟು...

ಪೊಲೀಸರ ಸಂಕಷ್ಟ ಭತ್ಯೆ ಶೇ.50 ರಷ್ಟು ಹೆಚ್ಚಳ : ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ28 Aug 2026 4:42 PM IST
share
ಪೊಲೀಸರ ಸಂಕಷ್ಟ ಭತ್ಯೆ ಶೇ.50 ರಷ್ಟು ಹೆಚ್ಚಳ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: "ನಾಡಿನ ಜನರ ರಕ್ಷಣೆ ಮಾಡುವ ಪೊಲೀಸರು ಉತ್ತಮ ಬದುಕನ್ನು ನಡೆಸಬೇಕು. ಆದ ಕಾರಣ ಅವರ ಸಂಕಷ್ಟ ಭತ್ಯೆಯ ಪ್ರಮಾಣವನ್ನು ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮಾದರಿಯಲ್ಲಿ ಶೇ.50ರಷ್ಟು ಹೆಚ್ಚಳಕ್ಕೆ ಸರ್ಕಾರದ ಸಮ್ಮತಿ ಇದೆ" ಎಂದು ಸಿಎಂ ಡಿ.ಕೆ.ಶಿವಕುಮಾರ್ ‌ಅವರು ಹೇಳಿದರು.

ಕರ್ನಾಟಕ ರಾಜ್ಯ ಪೊಲೀಸರಿಗಾಗಿ ಸಮಗ್ರ ಸಾಮರ್ಥ್ಯ ವೃದ್ದಿ ತರಬೇತಿಗೆ ಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

"ಪೊಲೀಸರ ಆರ್ಥಿಕ ಅಗತ್ಯಗಳಿಗೆ ಮೊದಲು ಪ್ರಾಶಸ್ತ್ಯ ನೀಡಲಾಗುವುದು. ಗೃಹ ಇಲಾಖೆಯು ಪೊಲೀಸರಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತದೆ" ಎಂದು ಭರವಸೆ ನೀಡಿದರು.

"ನಮ್ಮನ್ನು ರಕ್ಷಿಸಲು ನಮ್ಮ ಆರಕ್ಷಕರನ್ನು ಸಜ್ಜುಗೊಳಿಸುವ ಎನ್ಎಸ್ ಜಿ ಗೆ ಧನ್ಯವಾದಗಳು. ಸಜ್ಜನರನ್ನು ರಕ್ಷಿಸುವುದು, ದುರ್ಜನರನ್ನು ಶಿಕ್ಷಿಸುವುದೂ ಕೂಡ ಧರ್ಮ. ನೀವೆಲ್ಲರೂ ಧರ್ಮದ ಕಾರ್ಯವನ್ನು ಬಹಳ ನಿಷ್ಠೆಯಿಂದ ಮಾಡುತ್ತಿದ್ದೀರಿ. ಸಮಾಜದಲ್ಲಿ ಅಶಾಂತಿ, ಕಾನೂನು ಸುವ್ಯವಸ್ಥೆ ಹದಗೆಟ್ಟಾಗ ನೀವು ಶಿಷ್ಟರ ರಕ್ಷಣೆಗೆ ಬರುತ್ತೀರಿ. ರಾಷ್ಟ್ರೀಯ ಭದ್ರತಾ ಪಡೆ ತಮ್ಮ ಶಕ್ತಿಯನ್ನು ನಮ್ಮ ರಾಜ್ಯ ಪೊಲೀಸರಿಗೆ ಧಾರೆ ಎರೆಯುತ್ತಿದೆ. ಎನ್ ಎಸ್‌ಜಿಯಿಂದ ಪಡೆದ ತರಬೇತಿ ಸಾರ್ಥಕವಾಗಬೇಕು. ಅದನ್ನು ನಾಡಿನ, ಜನರ ರಕ್ಷಣೆಗೆ ಬಳಸಬೇಕು. ಎನ್ ಎಸ್ ಜಿ ತರಬೇತಿ ನಮ್ಮ ಪೊಲೀಸರ ಸಾಮರ್ಥ್ಯ ಹೆಚ್ಚಿಸುತ್ತದೆ ಕೌಶಲ್ಯವಂತರನ್ನಾಗಿ ಮಾಡುತ್ತದೆ" ಎಂದರು.

"ಕರ್ನಾಟಕ ಪೊಲೀಸ್ ದೇಶದ ಹೆಮ್ಮೆ. ನಮ್ಮ ಪೊಲೀಸರು ದಕ್ಷತೆಗೆ, ಕಾರ್ಯಪರತೆಗೆ, ಕರ್ತವ್ಯ ನಿಷ್ಠೆಗೆ ಹೆಸರಾದವರು. ನಾವು ಹುಟ್ಟಿದ ಈ ಸಮಾಜಕ್ಕೆ ಋಣ ತೀರಿಸುವುದೇ ನಿಜವಾದ ಸೇವೆ. ಆ ಕೆಲಸವನ್ನು ನೀವು ಬಹಳ ಚೆನ್ನಾಗಿ ಮಾಡುತ್ತಿದ್ದೀರಿ. ಕಷ್ಟದ ಸಂದರ್ಭದಲ್ಲಿ ನೀವು ನಿಮ್ಮ ಪ್ರಾಣ ಪಣಕ್ಕಿಟ್ಟು ಹೋರಾಟ ಮಾಡಿ ನಾಡನ್ನು ರಕ್ಷಣೆ ಮಾಡುತ್ತಿದ್ದೀರಿ. ನಮ್ಮ ಆರಕ್ಷಕರು, ಕಾನೂನಿನ ಪಾಲಕರು, ಕಾನೂನಿನ ರಕ್ಷಕರು" ಎಂದು ಶ್ಲಾಘಿಸಿದರು.

"ನಾನು 35 ವರ್ಷಗಳ ಹಿಂದೆ ಗೃಹ ಇಲಾಖೆಗೆ ಸಂಬಂಧಿಸಿದ ಬಂಧಿಖಾನೆ ಸಚಿವನಾಗಿದ್ದಾಗ ಸಾಕಷ್ಟು ಮಾಹಿತಿ ಪಡೆದಿದ್ದೆ. ಹಗಲು ರಾತ್ರಿ ನೀವು ಶ್ರಮಿಸುತ್ತೀರಿ. ಕೆಲವು ದುರ್ಘಟನೆ ಸಂದರ್ಭದಲ್ಲಿ ನಾವು ರಾಜಕಾರಣಿಗಳು ನಿಮ್ಮನ್ನೇ ದೂಷಿಸಿರುವ ಉದಾಹರಣೆಗಳಿವೆ. ನೀವು ನಿಮ್ಮ ನಿಷ್ಠೆ, ಪ್ರಾಮಾಣಿಕತೆಯಲ್ಲಿ ದೇಶದ ಸಮಗ್ರತೆ, ಐಕ್ಯತೆ, ಶಾಂತಿ ಕಾಪಾಡುವುದು ಮುಖ್ಯ" ಎಂದರು.

"ಗಡಿಯಲ್ಲಿ ಸೈನಿಕ. ಗಡಿಯ ಒಳಗೆ ಆರಕ್ಷಕ. ನೀವಿದ್ದರೆ ಸಮಾಜ ನೆಮ್ಮದಿ, ಸುಖವಾಗಿರುತ್ತದೆ. ನೀವು ನಿಮ್ಮ ಕರ್ತವ್ಯವನ್ನು ಪ್ರೀತಿಯಿಂದ ಒಪ್ಪಿ ಈ ಇಲಾಖೆ ಸೇರಿದ್ದೀರಿ. ಕೆಲವರು ಪೊಲೀಸ್ ಕೆಲಸವನ್ನು ಹೆಣ ಕಾಯುವ ಕೆಲಸ ಎಂದು ಟೀಕಿಸುತ್ತಾರೆ. ಆದರೆ ನೀವು ದೇಶ ಸೇವೆ ಮಾಡುತ್ತಿದ್ದೀರಿ. ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ" ಎಂದರು.

ಗಗನಚುಂಬಿ ಕಟ್ಟಡಗಳ ಮೇಲೆ ಹೆಲಿಪ್ಯಾಡ್ ನಿರ್ಮಾಣ

"ಬೆಂಗಳೂರು ನಗರದಲ್ಲಿ ಗಗನಚುಂಬಿ ಕಟ್ಟಡಗಳು ನಿರ್ಮಾಣ ಹೆಚ್ಚಾಗುತ್ತಿವೆ. ಬೆಂಕಿ ಅನಾಹುತ, ಭಯೋತ್ಪಾದನೆ ದಾಳಿಗಳು ಸಂಭವಿಸಿದರೆ ನಾಗರಿಕ ರಕ್ಷಣೆ ನಮ್ಮ ಕರ್ತವ್ಯ. ಇಂಥ ತುರ್ತು ಸಂದರ್ಭಗಲ್ಲಿ ಜೀವ ಉಳಿಸಲು ಹೆಲಿಪ್ಯಾಡ್ ಗಳ ಬಳಸಿಕೊಳ್ಳುವ ವಿಚಾರವಾಗಿ ನಮ್ಮ ಸರ್ಕಾರ ಮಿಲಿಟರಿ, ವಾಯು ಸೇನಾ ಅಧಿಕಾರಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವ ಮಾತುಕತೆಯನ್ನು ಗೃಹಚಿವರು ನಡೆಸಲಿದ್ದಾರೆ" ಎಂದರು.

"ಬೆಂಗಳೂರು ವಿಶ್ವಮಾನ್ಯ ನಗರ. ನಗರದಲ್ಲಿರುವ ಗಗನ ಚುಂಬಿ ಕಟ್ಟಡಗಳ ಮೇಲೆ ಹೆಲಿಪ್ಯಾಡ್ ನಿರ್ಮಾಣಕ್ಕೆ ಅಗತ್ಯ ಸ್ಥಳವನ್ನು ಒದಗಿಸಬೇಕು. ಕಾನೂನು ಚೌಕಟ್ಟಿನಲ್ಲಿ ಅನುಮತಿಯನ್ನು ನೀಡುವ ಕೆಲಸ ನಮ್ಮ ಸರ್ಕಾರ ಮಾಡಲಿದೆ ಎಂದು ಬಿಲ್ಡರ್ ಗಳು, ಡೆವಲಪರ್ ಗಳಿಗೆ ಮನವಿ ಮಾಡುತ್ತೇನೆ" ಎಂದರು.

ಪ್ರತ್ಯೇಕ ರೌಡಿ ನಿಗ್ರಹ ಪಡೆ

"ಪೊಲೀಸರಿಗ ಹೆಚ್ಚಿನ ವಸತಿ ವ್ಯವಸ್ಥೆ ಹಾಗೂ ಅವರ ಮೇಲಿರುವ ಒತ್ತಡ ಕಡಿಮೆ ಮಾಡುವುದು ನಮ್ಮ ಕರ್ತವ್ಯ. ಆ ಕೆಲಸವನ್ನು ಶೀಘ್ರದಲ್ಲೇ ಮಾಡುತ್ತೇವೆ. ಬೆಂಗಳೂರು ನಗರ ಒಳಗೊಂಡಂತೆ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ರೌಡಿಗಳನ್ನು ನಿಗ್ರಹಕ್ಕೆ ಪ್ರತ್ಯೇಕ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ರೌಡಿ ನಿಗ್ರಹ ಪಡೆ ರಚಿಸುವ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಿದ್ದೇವೆ. ಈ ತಂಡ ಯಾವ ರಾಜಕೀಯ ಒತ್ತಡಕ್ಕೂ ಮಣಿಯದೇ ಜನರಿಗೆ ಭದ್ರತೆ, ಸಮಾಜದಲ್ಲಿ ಸ್ವಾಸ್ಥ್ಯ ಕಾಪಾಡುವ ಕೆಲಸ ಮಾಡಲಿದೆ" ಎಂದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X