Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಾನೂ ರೈತನ ಮಗ; ನಿಮ್ಮ ನೋವನ್ನು ಕಡಿಮೆ...

ನಾನೂ ರೈತನ ಮಗ; ನಿಮ್ಮ ನೋವನ್ನು ಕಡಿಮೆ ಮಾಡುತ್ತೇನೆ : ಸಿಎಂ ಡಿ.ಕೆ.ಶಿವಕುಮಾರ್

► "ವಾಲ್ ಆಫ್ ಗ್ರಾಟಿಟ್ಯೂಡ್; 3200 ರೈತರ ಹೆಸರು" ► ಶಿವರಾಮ ಕಾರಂತ ಬಡಾವಣೆ; ಭೂಮಿ ಮಾಲೀಕರಿಗೆ ಭೂ ಪರಿಹಾರ ವಿತರಣೆ

ವಾರ್ತಾಭಾರತಿವಾರ್ತಾಭಾರತಿ31 Aug 2026 5:46 PM IST
share
ನಾನೂ ರೈತನ ಮಗ; ನಿಮ್ಮ ನೋವನ್ನು ಕಡಿಮೆ ಮಾಡುತ್ತೇನೆ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : "ನಾನೊಬ್ಬ ರೈತರ ಮಗ, ನಮ್ಮದೂ ದೊಡ್ಡ ಚರಿತ್ರೆ ಇದೆ. ರೈತ ಆಸ್ತಿ ಕಳೆದುಕೊಳ್ಳಬೇಕಾದರೆ ಆಗುವ ನೋವಿನ ಅರಿವಿದೆ. ಆ ನೋವನ್ನು ಕಡಿಮೆ ಮಾಡಬೇಕೆನ್ನುವ ಉದ್ದೇಶವೂ ಇದೆ" ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಡಾ ಕೆ ಶಿವರಾಮ ಕಾರಂತ ಬಡಾವಣೆಗೆ ಭೂಮಿ ನೀಡಿದ ಭೂಮಾಲೀಕರು, ರೈತರಿಗೆ ನೆಹರು ತಾರಾಲಯದಲ್ಲಿ ಶಿವಕುಮಾರ್ ಅವರು ಭೂ ಪರಿಹಾರ ವಿತರಣೆ ಮಾಡಿ ಸೋಮವಾರ ಮಾತನಾಡಿದರು.

"ಮೂರು ವರ್ಷಗಳಿಂದಲೇ ಪರಿಹಾರ ನೀಡುವ ಪ್ರಯತ್ನ ಮಾಡಿ ಅರ್ಜಿಗಳನ್ನು ಕರೆಯಲಾಗಿತ್ತು. ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರಿಂದ ಶಿವರಾಮ ಕಾರಂತ ಬಡವಾಣೆಯ ಭೂ ಮಾಲೀಕರಿಗೆ ಪರಿಹಾರ ನೀಡುವುದು ತಡವಾಯಿತು. ನಿವೇಶನ ಹಂಚಿಕೆಗೆ ಅರ್ಜಿ ಹಾಕಲು ಆಹ್ವಾನ ನೀಡಲು ಮುಂದಾದಾಗ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದರಿಂದ ಸರ್ಕಾರಕ್ಕೆ ಪ್ರತಿ ವರ್ಷ 1000 ಕೋಟಿ ನಷ್ಟವಾಗಿದೆ" ಎಂದು ತಿಳಿಸಿದರು.

ಬೆಂಗಳೂರಿನ ಬಡಾವಣೆಗಳ ನಿರ್ಮಾಣಕ್ಕೆ ಎಲ್ಲಾ ಸರ್ಕಾರಗಳು ಕೊಡುಗೆ ನೀಡಿವೆ :

"ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಡದಿ ಕೈಗಾರಿಕಾ ಟೌನ್ ಮಾಡಲು ಮಾಜಿ ಮುಖ್ಯಮಂತ್ರಿ ದೇವೇಗೌಡರು ಹೊರಟರು. ಆಗ ರೈತರ ಬಳಿ ಚರ್ಚಿಸಿ 5-6 ಲಕ್ಷ ರೂ.ಗಳಂತೆ ಪ್ರತಿ ಎಕರೆಯಂತೆ ಜಮೀನು ಪಡೆಯಲಾಗಿತ್ತು. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಬಿಡದಿಯಲ್ಲಿಯೇ ಟೌನ್ ಶಿಪ್ ಮಾಡಲು ಅಧಿಸೂಚನೆ ಹೊರಡಿಸಿದ್ದ ಸ್ಥಳದಲ್ಲಿಯೇ ಜಪಾನ್ ಟೌನ್ ಶಿಪ್ ಮಾಡಲು ಮುಂದಾದ ಸಂದರ್ಭದಲ್ಲಿ ವಿರೋಧ ವ್ಯಕ್ತವಾದ ಕಾರಣಕ್ಕೆ ಅದನ್ನು ಕೈಬಿಡಲಾಯಿತು" ಎಂದರು.

"ಅರ್ಕಾವತಿ, ಕೆಂಪೇಗೌಡ ಬಡಾವಣೆ, ಶಿವರಾಮ ಕಾರಂತ ಬಡಾವಣೆ ಇವೆಲ್ಲ ಈಗ ಆಗಿದೆ. ಬೆಂಗಳೂರು ಸುತ್ತಮುತ್ತ ಬಡಾವಣೆಗಳು ನಿರ್ಮಾಣಗೊಳ್ಳಲು ಎಲ್ಲಾ ಸರ್ಕಾರಗಳು ಕೊಡುಗೆ ನೀಡಿವೆ" ಎಂದರು.

ವಾಲ್ ಆಫ್ ಗ್ರಾಟಿಟ್ಯೂಡ್ :

"ಶಿವರಾಮ ಕಾರಂತ ಬಡಾವಣೆಗೆ ಜಮೀನುಕೊಟ್ಟ 3200 ರೈತರ ಹೆಸರುಗಳನ್ನು ವಾಲ್ ಆಫ್ ಗ್ರಾಟಿಟ್ಯೂಡ್ ಮೇಲೆ ಬರೆಸಲಾಗುವುದು" ಎಂದರು.

ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ 16 ಸಾವಿರ ಕೋಟಿ ಹೂಡಿಕೆ :

"ಅರ್ಕಾವತಿ, ಕೆಂಪೇಗೌಡ ಬಡಾವಣೆಗಳ ವಿಚಾರದಲ್ಲಿ ತಕರಾರು ನಡೆಯಿತು. ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ಪ್ರಕ್ರಿಯೆಯೂ ಹಲವು ವರ್ಷಗಳ ಕಾನೂನು ಮತ್ತು ಆಡಳಿತಾತ್ಮಕ ಸಮಸ್ಯೆಗಳನ್ನು ಒಳಗೊಂಡಿತ್ತು. ಬಡಾವಣೆ ನಿರ್ಮಾಣಕ್ಕೆ 16 ಸಾವಿರ ಕೋಟಿ ಹೂಡಿಕೆಯಾಗಿದೆ.‌ ಭೂಸ್ವಾಧೀನಕ್ಕೆ ಸಂಬಂಧಿಸಿದ ವಿಚಾರಗಳು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಹಾಗೂ ವಿಭಾಗೀಯ ಪೀಠದ ಹಂತಗಳನ್ನು ದಾಟಿ ಸುಪ್ರೀಂ ಕೋರ್ಟ್ ವರೆಗೂ ಸಾಗಿದ್ದವು. ನ್ಯಾಯಾಲಯಗಳ ನಿರ್ದೇಶನಗಳು ಹಾಗೂ ಸರ್ಕಾರದ ಆದೇಶಗಳ ಹಿನ್ನೆಲೆಯಲ್ಲಿ ಬಿಡಿಎ ಭೂಸ್ವಾಧೀನ ಮತ್ತು ಬಡಾವಣೆಯ ಅಭಿವೃದ್ಧಿ ಪ್ರಕ್ರಿಯೆಯನ್ನು ಮುಂದುವರಿಸಿದೆ" ಎಂದರು.

"ಖಾಸಗಿಯವರಿಗೆ 55% ನಿವೇಶನ ನೀಡಲು ಸಾಧ್ಯವಾಗುತ್ತದೆ. ಆದರೆ ನಾವು ಅತ್ಯುತ್ತಮ ರಸ್ತೆಗಳು, ಸಾರ್ವಜನಿಕ ಸೌಲಭ್ಯ ಕಲ್ಪಿಸಿದ್ದು, 42% ಮಾತ್ರ ನಿವೇಶನಗಳನ್ನು ನೀಡಲು ಸಾಧ್ಯವಾಗಿದೆ. ಎಕರೆಗೆ ಶೇ. 40% ಕೊಡಲು ಭೂ ಮಾಲೀಕರಿಗೆ ನಿವೇಶನ ಕೊಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ" ಎಂದರು.

ಎಲ್ಲರನ್ನು ಆಕರ್ಷಿಸುತ್ತಿರುವ ಬೆಂಗಳೂರು

"ಕೆಂಪೇಗೌಡರು ಕಟ್ಟಿದ ಬೆಂಗಳೂರಿನಲ್ಲಿ ಮಲ್ಲೇಶ್ವರ, ಚಾಮರಾಜಪೇಟೆ, ಜಯನಗರ, ಇಂದಿರಾನಗರದ ಸ್ವಲ್ಪ ಭಾಗ ಬಿಟ್ಟರೆ ಬೇರೆ ಪ್ರದೇಶಗಳು ಯೋಜಿತ ಬಡಾವಣೆಗಳಲ್ಲ. ಎಲ್ಲಿಯೂ ನೂರು ಅಡಿ ರಸ್ತೆಗಳಿಲ್ಲ. ಕೆಂಗಲ್ ಹನುಮಂತಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ 8 ಲಕ್ಷ ಇದ್ದ ಬೆಂಗಳೂರು ಜನಸಂಖ್ಯೆ ಈಗ ಒಂದೂವರೆ ಕೋಟಿ ಆಗಿದೆ. 60 ಲಕ್ಷ ಜನ ನಿತ್ಯ ಬೆಂಗಳೂರಿಗೆ ಓಡಾಡುತ್ತಾರೆ. ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಾದ ಕೋಲಾರ, ರಾಮನಗರ, ಚನ್ನಪಟ್ಟಣ, ತುಮಕೂರು, ಮಾಗಡಿ, ಕುಣಿಗಲ್, ಮದ್ದೂರು, ಮಂಡ್ಯ ಕ್ಷೇತ್ರದಿಂದ 30-50 ಸಾವಿರ ಜನ ಬೆಂಗಳೂರು ಸೇರಿದ್ದಾರೆ. ಈಶಾನ್ಯ ರಾಜ್ಯಗಳಿಂದ 11 ಲಕ್ಷ ಜನ ಉದ್ಯೋಗ‌ ಅರಸಿ ಬಂದಿದ್ದಾರೆ. 1.40 ಕೋಟಿ ವಾಹನಗಳಿವೆ. ರಸ್ತೆಗಳು ಮಾತ್ರ ಹಾಗೇ ಇದೆ. ಅಕ್ಕಪಕ್ಕದ ಕಟ್ಟಡಗಳನ್ನು ಒಡೆದು ಈ ರಸ್ತೆಗಳನ್ನು ಅಗಲೀಕರಣ ಮಾಡಲು ಸಾಧ್ಯವಿಲ್ಲ" ಎಂದರು.

“ರೈತರ ಮಕ್ಕಳು” ಎಂದು ಹೇಳಿಕೊಳ್ಳುವವರ ಕಾಲದಲ್ಲಿಯೇ ಅಧಿಸೂಚನೆ

"ನಾನು ಬರುವ ಮೊದಲು ಬಿಡಿಎ ಎಂದರೆ ಬ್ರೋಕರ್ ಅಭಿವೃದ್ಧಿ ಪ್ರಾಧಿಕಾರವಾಗಿತ್ತು. 2008 ರಲ್ಲಿಯೇ ಶಿವರಾಮ ಕಾರಂತ ಬಡಾವಣೆಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದರು. ತಮ್ಮ ಭೂಮಿ ಕಳೆದುಕೊಳ್ಳುವಾಗ ರೈತರು ಲಂಚ ಕೊಡಬೇಕಾದ ಪರಿಸ್ಥಿತಿ ಇತ್ತು. ಆಗ “ರೈತರ ಮಕ್ಕಳು” ಎಂದು ಹೇಳಿಕೊಳ್ಳುವವರ ಕಾಲದಲ್ಲಿಯೇ 2008 ರಲ್ಲಿಯೇ ಅಧಿಸೂಚನೆ ಹೊರಡಿಸಿದ್ದು, ಅವರ ಕಾಲದಲ್ಲಿಯೇ ಇದು ನಡೆದದ್ದು. ಈಗ ಮಾತನಾಡಲು ಅವರಿಗೆ ಧಮ್ ಇಲ್ಲವೇ? ಬೆಂಗಳೂರಿನ ಸುತ್ತಮುತ್ತ ಅವರ ಜಮೀನುಗಳಿವೆ ಅವುಗಳನ್ನು ಯೋಜನೆಗಳ ಸ್ವಾಧೀನಕ್ಕೆ ಕೊಟ್ಟಿದ್ದಾರೆಯೇ? ಅವರ ಜಮೀನನ್ನು ಮಾತ್ರ ಬಿಡಿಸಿಕೊಂಡರು. ಅವರದ್ದು ಎಷ್ಟು ಎಕರೆ ಇದೆ ಎಂಬುದು ನನಗೆ ಅರಿವಿದೆ" ಎಂದು‌ ಪರೋಕ್ಷವಾಗಿ ಕುಟುಕಿದರು.

ನಿವೇಶನಗಳನ್ನು ಮಾರಿಕೊಳ್ಳಬೇಡಿ; ಸಿಎಂ ಸಲಹೆ

"ರೈತರು ಅಲೆಯಬಾರದು, ಲಂಚ ಕೊಡಬಾರದು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಮ್ಮ ಭೂಮಿಯಲ್ಲಿಯೇ ನಿವೇಶನಗಳನ್ನು ಕೋರಿದವರಿಗೆ ನಿವೇಶನಗಳನ್ನು ಅಲ್ಲಿಯೇ ನೀಡಲಾಗುತ್ತಿದೆ. ಆದರೆ ನಿವೇಶನಗಳನ್ನು ಮಾರಿಕೊಳ್ಳಬೇಡಿ. ಕಷ್ಟ ಎಲ್ಲರಿಗೂ ಬರುತ್ತದೆ. ನಂತರದ ದಿನಗಳಲ್ಲಿ ಈ ನಿವೇಶನಗಳ ಬೆಲೆ ನೀವು ಊಹಿಸಲು ಸಾಧ್ಯವಿಲ್ಲ" ಎಂದು ಕಿವಿಮಾತು ಹೇಳಿದರು.

ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣ

"ಬಡಾವಣೆಯು 3,700 ಎಕರೆಯಲ್ಲಿ ನಿರ್ಮಾಣವಾಗಿದೆ. 3 ಕೋಟಿಯಷ್ಟು ಚದರ ಅಡಿ ನಿವೇಶನವನ್ನು ರೈತರಿಗೆ ಹಂಚಿಕೆ ಮಾಡಲಾಗುತ್ತಿದೆ. 2008ರಿಂದೀಚೆಗೆ ಸಮಯ ವ್ಯರ್ಥವಾಗಿದೆ. ಪ್ರತಿಯೊಂದರ ಬೆಲೆಯೂ ಹೆಚ್ಚಳವಾಗಿದೆ. ಹಾಗಾಗಿ ಮೂಲೆ ನಿವೇಶನಗಳ ಹರಾಜು ಪ್ರಕ್ರಿಯೆ ಸಮಯಾವಕಾಶ ಅಗತ್ಯವಿದೆ. 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ" ಎಂದರು.

"ಬಿಡಿಎಗಾಗಿ ಜಮೀನು ಕಳೆದುಕೊಂಡರೆ ಹಳೆ ದರವೇ ಕೊಡಬೇಕೆಂದಿದೆ. ಆದರೆ ರೈತರಿಗೆ ಅನ್ಯಾಯವಾಗಬಾರದೆಂದು ಇದನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಗೈಡೆನ್ಸ್ ವ್ಯಾಲ್ಯೂ ದುಪ್ಪಟ್ಟು ಪರಿಹಾರ, ದುಪ್ಪಟ್ಟು ಟಿಡಿಆರ್, ಇಲ್ಲದಿದ್ದರೆ ಶೇ 35 ರಷ್ಟು ವಾಣಿಜ್ಯ ನಿವೇಶನ, ಎಫ್‌ಎಆರ್ ಅಥವಾ ಶೇ. 40 ರಷ್ಟು ಅಭಿವೃದ್ಧಿಪಡಿಸಿದ ಭೂಮಿ ನೀಡಲು ಮುಂದಾಗಿದ್ದೇವೆ. ದೇಶದಲ್ಲಿಯೇ ಹೆಚ್ಚು ಪರಿಹಾರ ನೀಡಲಾಗಿದೆ. ಪೆರಿಫೆರಲ್ ರಸ್ತೆಗೆ ಟೆಂಡರ್ ಕರೆದಿದ್ದು, ಕೋಗಿಲು ತನಕ ಕಾಮಗಾರಿ ನಡೆಯುತ್ತಿದೆ. ಶೇ 80ರಷ್ಟು ಭೂ ಸ್ವಾಧೀನಕ್ಕೆ ಒಪ್ಪಿಗೆ ನೀಡಲಾಗಿದೆ. ಈ ರಸ್ತೆ ಪೂರ್ಣವಾದ ಬಳಿಕ ನಿಮ್ಮ ಆಸ್ತಿಯ ಬೆಲೆ ದುಪ್ಪಟ್ಟಾಗಲಿದೆ" ಎಂದರು.

"ದೇವರು ಕೊಟ್ಟು ಹೋಗುವುದು ಅಥವಾ ಬಿಟ್ಟುಹೋಗುವುದು ಎಂಬ ಎರಡು ಆಯ್ಕೆಗಳನ್ನು ಮಾತ್ರ ಕೊಟ್ಟಿದ್ದಾನೆ. ದೇವರು ಕೊಟ್ಟ ಅವಕಾಶವನ್ನು ಪ್ರಾಮಾಣಿಕವಾಗಿ ಬಳಸಿಕೊಳ್ಳಬೇಕು. ಮುಂದೆ ಯಾವುದೇ ಸಮಸ್ಯೆಗಳಿಲ್ಲದೇ ನಿಮ್ಮ ದಾಖಲೆಗಳನ್ನು ಪಡೆಯಬಹುದು. ಇದು ಉತ್ತಮ ಬಡಾವಣೆ, ಮುಂದಕ್ಕೆ ಇಂತಹ ಬಡಾವಣೆ ನಿರ್ಮಾಣ ಸಾಧ್ಯವಿಲ್ಲ" ಎಂದರು.

ತೇಗದ ಸಿರಿ

"ಒಂದು ವರ್ಷಕ್ಕೆ ಕನಿಷ್ಠ 1 ಕೋಟಿ ತೇಗದ ಸಸಿ ನೆಡುವ ಕಾರ್ಯಕ್ರಮ ರೂಪಿಸಲಾಗಿದ್ದು, ಸಸಿಯನ್ನು ಸರ್ಕಾರವೇ ನೀಡುತ್ತದೆ. ಗಿಡವನ್ನು ರೈತರೇ ಕಾಪಾಡಿಕೊಳ್ಳಬೇಕು. 25 ವರ್ಷಗಳನ್ನು ಗುರಿಯಾಗಿಟ್ಟುಕೊಂಡು ಈ ಯೋಜನೆ ತರಲಾಗಿದೆ. ಒಂದು ಚದರ ಅಡಿ ತೇಗದ ಬೆಲೆ 7500 ಆಗಿದೆ. ಇದರಿಂದ ಬರುವ ಲಾಭಾಂಶದಲ್ಲಿ 70% ರೈತರಿಗೆ 30% ಸರ್ಕಾರಕ್ಕೆ ಹಂಚಿಕೆಯಾಗುವುದು" ಎಂದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X