Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶೀಘ್ರವೇ ಬರ ಪೀಡಿತ ತಾಲ್ಲೂಕುಗಳ ಎರಡನೇ...

ಶೀಘ್ರವೇ ಬರ ಪೀಡಿತ ತಾಲ್ಲೂಕುಗಳ ಎರಡನೇ ಪಟ್ಟಿ ಪ್ರಕಟ : ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ1 Sept 2026 7:32 PM IST
share
ಶೀಘ್ರವೇ ಬರ ಪೀಡಿತ ತಾಲ್ಲೂಕುಗಳ ಎರಡನೇ ಪಟ್ಟಿ ಪ್ರಕಟ : ಸಿಎಂ ಡಿ.ಕೆ.ಶಿವಕುಮಾರ್

ಗದಗ : "ನಾವು ಮಾರ್ಗಸೂಚಿ ಅನುಸಾರ ಬರ ಪ್ರದೇಶ ಘೋಷಣೆ ಮಾಡಬೇಕು. ಅದರನ್ವಯ ಅಧ್ಯಯನ ಮಾಡಿ ಎರಡನೇ ಪಟ್ಟಿಯನ್ನು ಶೀಘ್ರವೇ ಘೋಷಣೆ ಮಾಡುತ್ತೇವೆ" ಎಂದು ಸಿಎಂ ಡಿ.ಕೆ.ವಕುಮಾರ್ ಅವರು ತಿಳಿಸಿದರು.

ಬರ ಪರಿಸ್ಥಿತಿ ಕುರಿತು ಸಿಎಂ ಡಿ ಕೆ ಶಿವಕುಮಾರ್ ಅವರು ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

"ಜಿಲ್ಲಾ ಸಚಿವರು ಪ್ರತಿ ತಾಲ್ಲೂಕಿಗೆ ಭೇಟಿ ನೀಡಿ, ವಾಸ್ತವಾಂಶದ ವರದಿ ನೀಡಿದ್ದಾರೆ. ಅದರ ಜೊತೆಗೆ ಅಧಿಕಾರಿಗಳು ಅಧ್ಯಯನ ಮಾಡುತ್ತಿದ್ದಾರೆ. ಎರಡೂ ವರದಿ ಪರಿಶೀಲಿಸಿ ಕೇಂದ್ರಕ್ಕೆ ವರದಿ ಸಲ್ಲಿಸಬೇಕಿದೆ" ಎಂದು ವಿವರಿಸಿದರು.

"ರೈತರ ಬದುಕು ಅಪಾಯದಲ್ಲಿದೆ. ಜಿಲ್ಲೆಯ ಜನ ಆತಂಕಕ್ಕೆ ಒಳಗಾಗಿದ್ದಾರೆ. 50 ವರ್ಷಗಳಲ್ಲಿ ಭೀಕರ ಬರ ಪರಿಸ್ಥಿತಿಗೆ ಜಿಲ್ಲೆ ಒಳಗಾಗಿದೆ. ಈ ವರ್ಷ ಶೇ. 40 ರಷ್ಟು ಮಳೆ ಕಡಿಮೆಯಾಗಿದೆ. ನಾನು ಹೆಲಿಕಾಪ್ಟರ್ ನಲ್ಲಿ ಬರುವಾಗ ನೋಡಿದೆ. ಹಲವು ಕಡೆ ಬಿತ್ತನೆಯೇ ಆಗಿಲ್ಲ. ಬಿತ್ತನೆ ಆಗಿರುವ ಕಡೆಗಳಲ್ಲಿ 10-15% ಬೆಳೆ ಕೂಡ ರೈತರ ಕೈ ಸೇರುವುದಿಲ್ಲ" ಎಂದರು.

"ರೈತರ ಜಮೀನಿಗೆ ಹೋಗಿ ಹತ್ತಿ, ಕಡಲೆಕಾಯಿ, ಜೋಳ, ಸೂರ್ಯಕಾಂತಿ ಬೆಳೆ ವೀಕ್ಷಣೆ ಮಾಡಿದ್ದೇನೆ. ರೈತರಿಗೆ ಯಾವ ಪ್ರಮಾಣದಲ್ಲಿ ತೊಂದರೆ ಆಗುತ್ತಿದೆ ಎಂದು ಮನವರಿಕೆ ಆಗಿದೆ. ರೈತರೊಂದಿಗೆ ಚರ್ಚೆ ಮಾಡಿದ್ದು, ಅವರ ನೋವು ತಿಳಿಸಿದ್ದಾರೆ. ಜನ ವಲಸೆ ಹೋಗುವುದನ್ನು ತಪ್ಪಿಸಲು ವಿಬಿಜಿ ರಾಮ್ ಜಿ ಯೋಜನೆ ಹೇಗೆ ಸಹಾಯ ಆಗಬೇಕು ಎಂದು ತಿಳಿಸಿದ್ದಾರೆ" ಎಂದರು.

"ಈ ಜಿಲ್ಲೆಯಲ್ಲಿ ಗಜೇಂದ್ರಗಡ ಮಾತ್ರ ಬರ ಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಜಿಲ್ಲಾ ಮಂತ್ರಿಗಳ ನೇತೃತ್ವದಲ್ಲಿ ಎಲ್ಲಾ ಶಾಸಕರು, ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಬೇಕು ಎಂದು ಮನವಿ ಸಲ್ಲಿಸಿದ್ದಾರೆ" ಎಂದು ಹೇಳಿದರು.

"ಹೆಚ್ ಕೆ ಪಾಟೀಲ ಅವರು ಮೋಡ ಬಿತ್ತನೆ ವಿಚಾರವಾಗಿ ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ. ಅದೇ ರೀತಿ ಬೇರೆ ಶಾಸಕರು ಬೇರೆ ಬೇರೆ ವಿಚಾರವಾಗಿ ಗಮನ ಸೆಳೆದಿದ್ದಾರೆ. ನೀರಾವರಿ, ಬೆಣ್ಣೆ ಹಳ್ಳ ಸೇರಿದಂತೆ ಬೇರೆ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ. ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಈ ಯೋಜನೆಗಳ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ" ಎಂದು ತಿಳಿಸಿದರು.

ನಮ್ಮ ವರದಿ ಕೇಂದ್ರದ ವರದಿ ಹೊಂದಾಣಿಕೆ ಆಗಬೇಕು

"ನಮ್ಮ ವರದಿ ಕೇಂದ್ರದ ವರದಿ ಜತೆ ಹೊಂದಾಣಿಕೆ ಆಗಬೇಕು. ದೆಹಲಿಯಿಂದ ಬರುವ ಬರ ಅಧ್ಯಯನ ತಂಡಕ್ಕೆ ನಮ್ಮ ವರದಿ ಒಪ್ಪಿಗೆ ಆಗಬೇಕು. ಆಗ ಮಾತ್ರ ಕೇಂದ್ರ ಸರ್ಕಾರ ನೆರವು ನೀಡಲಿದೆ. ನಾವು ನಮ್ಮ ಕೈಲಾದ ಕ್ರಮ ಕೈಗೊಂಡಿದ್ದೇವೆ. ಕುಡಿಯುವ ನೀರಿನ ಪೂರೈಕೆ ಬಗ್ಗೆ ಸೂಚನೆ ನೀಡಲಾಗಿದೆ. ಕುಡಿಯುವ ನೀರಿಗೆ ಪ್ರತಿ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂ. ಅನುದಾನ ನೀಡಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಹೆಚ್ಚುವರಿ ಹಣ ಇಡಲಾಗಿದೆ" ಎಂದು ವಿವರಿಸಿದರು.

"ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಚುರುಕಾಗಬೇಕು, ಜನ ತಮ್ಮ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಅಲೆದಾಡುವುದನ್ನು ತಪ್ಪಿಸಲು ಪ್ರಜಾಸೇವಾ ಆಂದೋಲನ ಸೆ. 5ರಿಂದ ಆರಂಭವಾಗುತ್ತಿದೆ. ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸರಿಯಾದ ರೀತಿಯಲ್ಲಿ ತಲುಪಬೇಕು. ದುರ್ಬಳಕೆ ಆಗಬಾರದು. ಅದಕ್ಕಾಗಿ ಮರುಪರಿಶೀಲನೆ ಹಾಗೂ ಪಂಚಾಯಿತಿ ಮಟ್ಟದ ಗ್ಯಾರಂಟಿ ಸಮಿತಿ ರಚಿಸುತ್ತಿದ್ದೇವೆ" ಎಂದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X