Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಇಂಜಿನಿಯರ್ ಗಳಿಗೆ ವೃತ್ತಿಗೌರವ; ಹೆಸರಿನ...

ಇಂಜಿನಿಯರ್ ಗಳಿಗೆ ವೃತ್ತಿಗೌರವ; ಹೆಸರಿನ ಮುಂದೆ Er. ಬಳಕೆ ಆದೇಶ : ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ15 Sept 2026 11:10 PM IST
share
ಇಂಜಿನಿಯರ್ ಗಳಿಗೆ ವೃತ್ತಿಗೌರವ; ಹೆಸರಿನ ಮುಂದೆ Er. ಬಳಕೆ ಆದೇಶ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: "ಇಂಜಿನಿಯರ್ ಗಳಿಗೆ ವೃತ್ತಿಗೌರವ ನೀಡುವ ಉದ್ದೇಶದಿಂದ ಅವರ ಹೆಸರಿನ ಮುಂದೆ Er. (ಅಭಿಯಂತರ) ಎಂದು ಬಳಸಲು ಆದೇಶ ಹೊರಡಿಸಲಾಗಿದೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಸರ್ ಎಂ ವಿಶ್ವೇಶ್ವರಯ್ಯ ನವರ ಜನ್ಮದಿನದ ಅಂಗವಾಗಿ ಇನ್ ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ (ಇಂಡಿಯಾ) ಕರ್ನಾಟಕ ವಿಭಾಗ ಮಂಗಳವಾರ ಆಯೋಜಿಸಿದ್ದ 59ನೇ ಇಂಜಿನಿಯರ್ ದಿನಾಚರಣೆಯನ್ನು ಸಿಎಂ ಡಿ ಕೆ ಶಿವಕುಮಾರ್ ಅವರು ಉದ್ಘಾಟಿಸಿ ಮಾತನಾಡಿದರು.

"ದೇಶದ ಅಭಿವೃದ್ಧಿ ಮತ್ತು ಆರ್ಥಿಕ ಪ್ರಗತಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಇಂಜಿನಿಯರ್ ಗಳ ಅತ್ಯಮೌಲ್ಯವಾದ ಕೊಡುಗೆಯನ್ನು ಸ್ಮರಿಸಲು ಹಾಗೂ ಗೌರವ ಸಮರ್ಪಣೆ ಮಾಡುವ ಸಲುವಾಗಿ, ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ರವರ ಜನ್ಮ ದಿನವಾದ ಸೆಪ್ಟೆಂಬರ್ 15 ನ್ನು "ಇಂಜಿನಿಯರ್ ಗಳ ದಿನ" ವನ್ನಾಗಿ ಸರ್ಕಾರದ ವತಿಯಿಂದ ಆಚರಿಸಲು ಸರ್ಕಾರಿ ಆದೇಶವನ್ನು ಹೊರಡಿಸಲಾಗಿದೆ" ಎಂದು ತಿಳಿಸಿದರು.

ಪ್ರತಿ ಪಟ್ಟಣಕ್ಕೂ ವರ್ತುಲ ರಸ್ತೆ ಗ್ರಿಡ್ ನಿರ್ಮಾಣದ ಚಿಂತನೆಯಿದೆ

"ಬೆಂಗಳೂರಿನಲ್ಲಿ ರಸ್ತೆ ಕೇವಲ ಶೇ. 8 ರಷ್ಟಿದ್ದು, ದೇಶದ ಉಳಿದೆಡೆಗಳಲ್ಲಿ ಶೇ. 18 ರಷ್ಟು ರಸ್ತೆಗಳಿವೆ. ಕೆಲವೊಂದು ಬಡಾವಣೆಗಳನ್ನು ಹೊರತುಪಡಿಸಿದರೆ ಬೆಂಗಳೂರು ಯೋಜನಾಬದ್ಧ ನಗರವಲ್ಲ. ಇಲ್ಲಿ ರಸ್ತೆಗಳು ಬಹಳ ಚಿಕ್ಕದಾಗಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಹೊಸ ಕರ್ನಾಟಕ ಮಾಡುವುದು ನನ್ನ ಕಲ್ಪನೆ. ಟೌನ್ ಪ್ಲಾನಿಂಗ್ ಖಾತೆಯನ್ನು ನಾನೇ ನಿರ್ವಹಿಸುತ್ತಿದ್ದು, ಈ ಬಗ್ಗೆ ಸ್ಪಷ್ಠ ಚಿಂತನೆ ಹೊಂದಿದ್ದೇನೆ. ಪ್ರತಿಯೊಂದು ಪಟ್ಟಣಕ್ಕೂ ಒಂದು ವರ್ತುಲ ರಸ್ತೆ ನಿರ್ಮಿಸುವ ಚಿಂತನೆಯಿದ್ದು, ಇದರಿಂದ ವಾಹನ ದಟ್ಟಣೆ ಪರಿಹರಿಸಿದಂತಾಗುತ್ತದೆ" ಎಂದರು.

ಬೆಂಗಳೂರಿನಲ್ಲಿ ಹೊಸ ಟೌನ್ ಪ್ಲಾನಿಂಗ್ ಕಾಲೇಜು ಸ್ಥಾಪಿಸಲು ಚಿಂತನೆ

"ಬೆಂಗಳೂರಿನ ಕೆಂಪೇಗೌಡ ರಸ್ತೆಯಲ್ಲಿ ಹೊಸ ಟೌನ್ ಪ್ಲಾನಿಂಗ್ ಕಾಲೇಜು ಸ್ಥಾಪಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಮೊಬಿಲಿಟಿ ಯೋಜನೆಗೆ ಒತ್ತು ನೀಡಲಾಗುತ್ತಿದೆ. ನವ ಕರ್ನಾಟಕ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಸರ್ ಎಂ ವಿಯವರ ತ್ಯಾಗ, ಚಿಂತನೆಗಳು ನಮಗೆ ಮಾರ್ಗದರ್ಶನವಾಗಿದೆ. ನವ ಕರ್ನಾಟಕ ನಿರ್ಮಾಣದಿಂದ ನವಭಾರತ ನಿರ್ಮಾಣ ಸಾಧ್ಯ. ಕರ್ನಾಟಕದ ಬೆಳವಣಿಗೆಯಲ್ಲಿ ಭಾರತದ ಬೆಳವಣಿಗೆ ಅಡಗಿದೆ. ದಕ್ಷಿಣ ಭಾರತದ ಜ್ಞಾನ ಪ್ರತಿಭೆಗಳು ಭಾರತದ ಅಭಿವೃದ್ಧಿಗೆ ಕಾರಣವಾಗಿದೆ" ಎಂದರು.

ಬೆಂಗಳೂರಿಗೆ 16 ಕಿ.ಮೀ. ಡಬ್ಬಲ್ ಡೆಕ್ಕರ್ ಮೆಟ್ರೋ ಕಾರಿಡಾರ್ ಯೋಜನೆ

"ಬೆಂಗಳೂರಿಗೆ ಮೆಟ್ರೋವನ್ನು 500 ಕಿ.ಮೀ. ವಿಸ್ತರಿಸುವ ಯೋಜನೆ ಬಗ್ಗೆ ಬಿಎಂಆರ್ ಸಿ ಎಲ್ ಪ್ರಗತಿ ಪರಿಶೀಲನಾ ಸಭೆಯನ್ನು ಬುಧವಾರ ನಡೆಸಲಾಗುತ್ತಿದೆ. 45 ಕಿ.ಮಿ. ಡಬ್ಬಲ್ ಡೆಕ್ಕರ್ ಮೆಟ್ರೋ ಕಾರಿಡಾರ್ ಯೋಜನೆಗೆ ಕೇಂದ್ರ ಸರ್ಕಾರ ತಕರಾರು ಎತ್ತಿದೆ. ಆದ್ದರಿಂದ ಕೇವಲ 16 ಕಿ.ಮೀ. ಗೆ ಅನುಮತಿಸಿದ್ದಾರೆ. ರಸ್ತೆಗಳನ್ನು ಒಡೆಯಲು ಆಗದ ಕಾರಣ, 16 ಕಿ.ಮೀ. ಡಬ್ಬಲ್ ಡೆಕ್ಕರ್ ಮೆಟ್ರೋ ಕಾರಿಡಾರ್ ಯೋಜನೆಗೆ ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಪ್ರಧಾನಿಯವರನ್ನು ಒಮ್ಮೆ ಭೇಟಿಯಾಗಿ ಚರ್ಚಿಸುತ್ತೇನೆ" ಎಂದು ತಿಳಿಸಿದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X