Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೇಂದ್ರ ಸರಕಾರ ರೈತರ ಸಾಲ ಮನ್ನಾ...

ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ : ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ24 Sept 2026 11:11 PM IST
share
ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: "ಬರಗಾಲದ ಪರಿಸ್ಥಿತಿಯಲ್ಲಿ ನಾವು ರೈತರನ್ನು ಬದುಕಿಸಬೇಕು. ಕೇಂದ್ರ ಸರಕಾರ ಕೈಗಾರಿಕೋದ್ಯಮಿಗಳಿಗೆ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದಂತೆ ರೈತರ ಸಾಲವನ್ನು ಮನ್ನಾ ಮಾಡಲಿ. ನಮ್ಮ ರಾಜ್ಯದ ಪಾಲನ್ನು ಭರಿಸಲು ಸಿದ್ಧರಿದ್ದೇವೆ” ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ಘೋಷಿಸಿದರು.

ವಿಧಾನಮಂಡಲದ ಉಭಯ ಸದನಗಳಲ್ಲಿ ಬರದ ವಿಚಾರವಾಗಿ ನಡೆದ ವಿಶೇಷ ಚರ್ಚೆ ಬಳಿಕ ಸಿಎಂ ಡಿ ಕೆ ಶಿವಕುಮಾರ್ ಅವರು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಮಾತುಗಳಿಗೆ ಉತ್ತರ ನೀಡಿದರು.

“ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ರೈತರ ಸಾಲಮನ್ನಾ ಬಗ್ಗೆ ಸದನದಲ್ಲಿ ಚರ್ಚೆ ನಡೆದಿದೆ. ಈ ಹಿಂದೆ ಸಿದ್ದರಾಮಯ್ಯ ಅವರು ಸಾಲ ಮನ್ನಾ ಮಾಡಿದ್ದಾರೆ. ನಮ್ಮ ಬೆಂಬಲಿತ ಸರಕಾರದಲ್ಲಿ ಕುಮಾರಸ್ವಾಮಿ ಅವರು ಸಾಲ ಮನ್ನಾ ಮಾಡಿದ್ದಾರೆ. 80 ಶಾಸಕರ ಸಂಖ್ಯಾಬಲವಿದ್ದ ನಾವು ಬೆಂಬಲ ನೀಡದೇ ಇದ್ದಿದ್ದರೆ 38 ಶಾಸಕರ ಬೆಂಬಲವಿದ್ದ ಕುಮಾರಸ್ವಾಮಿ ಅವರು ಸಾಲ ಮನ್ನಾ ಮಾಡಲು ಆಗುತ್ತಿತ್ತೇ?” ಎಂದು ಪ್ರಶ್ನಿಸಿದರು.

ರೈತರಿಗಾಗಿ ಎಲ್ಲಾ ಕಾರ್ಯಕ್ರಮ ನಿಲ್ಲಿಸೋಣ

“ಕೇಂದ್ರದಲ್ಲಿ ಮನಮೋಹನ್ ಸಿಂಗ್ ಅವರು ಸಾಲ ಮನ್ನಾ ಮಾಡಿದರು. ನೀವೆಲ್ಲರೂ ಸರ್ವಪಕ್ಷ ನಿಯೋಗದಲ್ಲಿ ಬರುವುದಾಗಿ ತಿಳಿಸಿದ್ದೀರಿ. ನಾವೆಲ್ಲರೂ ಒಟ್ಟಾಗಿ ಹೋಗೋಣ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಅವರನ್ನು ಬೇಡಿಕೊಳ್ಳೋಣ. ಕೇಂದ್ರ ಕೈಗಾರಿಕೋದ್ಯಮಿಗಳಿಗೆ ಲಕ್ಷಾಂತರ ಕೋಟಿ ಸಾಲ ಮಾಡಿದ್ದು, ರೈತರ ಸಾಲವನ್ನು ಮನ್ನಾ ಮಾಡಲಿ. ಬೇಕಿದ್ದರೆ ಎಲ್ಲಾ ಕಾರ್ಯಕ್ರಮ ನಿಲ್ಲಿಸಿ ರೈತರಿಗಾಗಿ ಈ ತೀರ್ಮಾನ ಮಾಡುತ್ತೇನೆ. 50:50, 60:40, 70:30 ಯಾವ ಸೂತ್ರಕ್ಕಾದರೂ ಸರಿ ನಮಗೆ ಕೇಂದ್ರ ಸರ್ಕಾರದಿಂದ ಏನಾದರೂ ಕೊಡಿಸಿ” ಎಂದು ವಿರೋಧ ಪಕ್ಷದ ನಾಯಕರಿಗೆ ಆಗ್ರಹಿಸಿದರು.

ಒಕ್ಕೂಟ ವ್ಯವಸ್ಥೆಯಲ್ಲಿ ಕೋರ್ಟ್ ಮೂಲಕ ಪರಿಹಾರ ಪಡೆದ ಇತಿಹಾಸ ಕರ್ನಾಟಕದ್ದು

“ಕಳೆದ ಬಾರಿ ನಾವು ಕೋರ್ಟ್ ಮೆಟ್ಟಿಲೇರಿ 3 ಸಾವಿರ ಕೋಟಿ ಪರಿಹಾರ ಪಡೆದಿದ್ದೇವೆ. ಒಕ್ಕೂಟ ವ್ಯವಸ್ಥೆಯಲ್ಲಿ ಒಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಪರಿಹಾರ ಪಡೆದಿರುವುದು ಕೂಡ ಇತಿಹಾಸ. ಆ ಸಂದರ್ಭದಲ್ಲಿ ಒಬ್ಬ ಸಂಸದ ಪ್ರಧಾನಮಂತ್ರಿಗಳ ಮುಂದೆ ಹೋಗಿ ಬಾಯಿ ಬಿಡಲಿಲ್ಲ. ಈಗ ನಮ್ಮ ವಿರೋಧ ಪಕ್ಷದ ನಾಯಕರು ಪ್ರಧಾನಮಂತ್ರಿಗಳ ಭೇಟಿಗೆ ನಾನು ಬರುತ್ತೇನೆ ಎಂದು ಹೇಳಿದ್ದು, ಅವರಿಗೆ ಅಭಿನಂದನೆ, ನಮನ ಸಲ್ಲಿಸುತ್ತೇನೆ. ಅವರು ಈ ಮಾತು ಹೇಳಿದ ಕೂಡಲೇ ನಾನು ಪ್ರಧಾನಮಂತ್ರಿಗಳಿಗೆ ಸಮಯಾವಕಾಶ ಕೋರಿ ಪತ್ರ ಬರೆಯಲಿದ್ದೇನೆ. ನಾನು ಅವರನ್ನು ಸಂಪರ್ಕಿಸುವ ಪ್ರಯತ್ನ ಮಾಡುವೆ, ಅವರು ಅವರ ಸಂಬಂಧದಲ್ಲಿ ಕಾಲಾವಕಾಶ ಕೋರಲಿ. ಈ ವಿಚಾರದಲ್ಲಿ ನಾನು ರಾಜಕಾರಣ ಮಾಡುವುದಿಲ್ಲ. ಅವರಿಗೆ ಕೊಡಬೇಕಾದ ಗೌರವ ಕೊಡುತ್ತೇನೆ” ಎಂದು ಭರವಸೆ ನೀಡಿದರು.

ಪ್ರತಿ ಯುನಿಟ್ ಗೆ 22 ರೂ. ನೀಡಿ ವಿದ್ಯುತ್ ಖರೀದಿಸುವ ಸಂಕಷ್ಟದ ಸ್ಥಿತಿ

“ರೈತರಿಗೆ ಕರೆಂಟ್ ಇಲ್ಲ ಎಂದು ಚರ್ಚೆ ಮಾಡಿದ್ದಾರೆ. ಕಲ್ಲಿದ್ದಲು ವಿದ್ಯುತ್ ಗೆ ನಮಗೆ ಅವಕಾಶ ನೀಡಲಿಲ್ಲ. ಹೀಗಾಗಿ ನಾನು ನವೀಕರಿಸಬಹುದಾದ ಇಂಧನದತ್ತ ಗಮನಹರಿಸಿದೆ. ಪಾವಗಡದಲ್ಲಿ ಒಬ್ಬ ರೈತನ ಜಮೀನು ಖರೀದಿ ಮಾಡದೇ, ಸೋಲಾರ್ ಪವರ್ ಪ್ಲಾಂಟ್ ಮಾಡಿದೆ. ಅದನ್ನು ನೋಡಿ ಕೇಂದ್ರ ಸರ್ಕಾರ ಕುಸುಮ್ ಯೋಜನೆ ಜಾರಿಗೆ ತಂದಿದೆ. ನಮ್ಮ ಸಚಿವರಾದ ಕೆ.ಜೆ ಜಾರ್ಜ್ ಅವರು ಪ್ರತಿ ಯುನಿಟ್ ಗೆ 22 ರೂ. ನೀಡಿ ವಿದ್ಯುತ್ ಖರೀದಿಸುವ ಸಂಕಷ್ಟದ ಸ್ಥಿತಿಗೆ ಸಿಲುಕಿದ್ದಾರೆ. ತಮಿಳುನಾಡು, 22, ಕೇರಳ 24 ರೂ.ಗೆ ವಿದ್ಯುತ್ ಖರೀದಿ ಮಾಡುತ್ತಿದ್ದಾರೆ. ಪ್ರತಿ ವರ್ಷ ನಮ್ಮಲ್ಲಿ 10% ವಿದ್ಯುತ್ ಬೇಡಿಕೆ ಹೆಚ್ಚುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಅದಾನಿ ಜತೆ ನೀನು ಕೆಲಸ ಮಾಡಿಲ್ಲವೇ ಸುನೀಲ್?

“ರಾಮಕೃಷ್ಣ ಹೆಗಡೆ ಅವರು ಸಿಎಂ ಆಗಿದ್ದಾಗ ರಾಜ್ಯದ ಬಜೆಟ್ ಸುಮಾರು 18 ಸಾವಿರ ಕೋಟಿ ಇತ್ತು, ಕೃಷ್ಣಾ ಅವರ ಕಾಲದಲ್ಲಿ ಅದು ಸುಮಾರು 25 ಸಾವಿರ ಕೋಟಿಗೆ ಮುಟ್ಟಿತು. ನಂತರ ಹೆಚ್ಚಿನ ಆದಾಯ ಬಂದು ವರ್ಷಕ್ಕೆ ನಾಲ್ಕುವರೆ ಲಕ್ಷ ಕೋಟಿ ಬಜೆಟ್ ಮಂಡಿಸುತ್ತಿದ್ದೇವೆ. ಕರ್ನಾಟಕ ಆರ್ಥಿಕ ಶಿಸ್ತಿನ ರಾಜ್ಯ. ನಾನು ಇವತ್ತೂ ಸಾಲ ಮಾಡಬಹುದು. ನಾನು ಈಗಷ್ಟೇ ಹಣಕಾಸು ಸಚಿವನಾಗಿದ್ದೇನೆ. ನನಗೆ ಈ ವಿಚಾರದಲ್ಲಿ ಪರಿಣಿತಿ ಇದೆ ಎಂದು ಹೇಳುವುದಿಲ್ಲ. ನಮ್ಮ ಸುನೀಲ್ ಅವರು ಅದಾನಿ ಅವರನ್ನಾದರೂ ಕರೆಯಲಿ, ಬೇರೆಯವರನ್ನಾದರೂ ಕರೆಯಲಿ. ಅದಾನಿ ನಮ್ಮ ಮನೆಗೆ ಬಂದರೋ ಅಥವಾ ನಾನು ಅದಾನಿ ಅವರನ್ನು ಹುಡುಕಿಕೊಂಡು ಹೋಗಿದ್ದೀನಾ? ಅದಾನಿ ಜತೆ ನೀನು ಕೆಲಸ ಮಾಡಿದ್ದೆಯಲ್ಲಪ್ಪಾ. ನಿಮ್ಮ ಕಾಲಲ್ಲೇ ಅನೇಕ ಕಾಮಗಾರಿ ಮಾಡಿದ್ದೀರಿ. ನನಗೆ ಟೀಕೆ ಮಾಡಲು ಇಷ್ಟವಿಲ್ಲ. ಗುತ್ತಿಗೆದಾರರು, ಉದ್ಯಮಿಗಳು ಬರುತ್ತಾರೆ ಹೋಗುತ್ತಾರೆ. ನಮ್ಮ ಯೋಜನೆಗೆ ಜಾಗತಿಕ ಹೂಡಿಕೆದಾರರು ಬರಲಿ ಎಂದು ಅದಕ್ಕೆ ಪ್ರತ್ಯೇಕ ಇಲಾಖೆ ರಚಿಸಲಾಗುತ್ತಿದೆ” ಎಂದು ಹೇಳಿದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X