Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರಾವಳಿ ನಿಯಂತ್ರಣ ವಲಯ, ಪಶ್ಚಿಮ ಘಟ್ಟದ...

ಕರಾವಳಿ ನಿಯಂತ್ರಣ ವಲಯ, ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ವಲಯ ನೀತಿ ಮರುಪರಿಶೀಲಿಸಿ : ಸಿಎಂ ಡಿ.ಕೆ.ಶಿವಕುಮಾರ್

ಕೇಂದ್ರ ಸಚಿವರಿಗೆ ಮುಖ್ಯಮಂತ್ರಿ ಪತ್ರ

ವಾರ್ತಾಭಾರತಿವಾರ್ತಾಭಾರತಿ28 Sept 2026 8:01 PM IST
share
ಕರಾವಳಿ ನಿಯಂತ್ರಣ ವಲಯ, ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ವಲಯ ನೀತಿ ಮರುಪರಿಶೀಲಿಸಿ : ಸಿಎಂ ಡಿ.ಕೆ.ಶಿವಕುಮಾರ್

ಹೊಸದಿಲ್ಲಿ : ರಾಜ್ಯದ ಕರಾವಳಿ ವಲಯ ನಿರ್ವಹಣಾ ಯೋಜನೆ (CZMP) ಮತ್ತು ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ(ESA) ಅಧಿಸೂಚನೆ ಜಾರಿಗೆ ಸಂಬಂಧಿಸಿದಂತೆ ರಾಜ್ಯದ ವಾಸ್ತವ ಸ್ಥಿತಿಗತಿಗಳನ್ನು ಅರಿತು, ಅದಕ್ಕೆ ತಕ್ಕಂತೆ ಸೂಕ್ತ ತಿದ್ದುಪಡಿ ಹಾಗೂ ನಿಯಮಗಳನ್ನು ಸಡಿಲಿಸುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸರಕಾರಕ್ಕೆ ಮನವಿ ಮಾಡಿದರು.

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಅವರಿಗೆ ಶಿವಕುಮಾರ್ ಸೋಮವಾರ ಪತ್ರ ಬರೆದು ಮನವಿ ಮಾಡಿದ್ದಾರೆ.

ಸಿಆರ್‌ ಝೆಡ್ ನಕ್ಷೆಗಳ ದೋಷ ತಿದ್ದುಪಡಿ ಮಾಡಿ: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸಾಂಪ್ರದಾಯಿಕ ಮೀನುಗಾರರ ಜೀವನೋಪಾಯ ಹಾಗೂ ಕರಾವಳಿ ವಸತಿ ಪ್ರದೇಶಗಳ ರಕ್ಷಣೆಗಾಗಿ ಕೇಂದ್ರ ಸರಕಾರ ತಕ್ಷಣವೇ ಮಧ್ಯಪ್ರವೇಶಿಸಬೇಕು ಎಂದು ಅವರು ಕೋರಿದ್ದಾರೆ.

ಪ್ರಸ್ತುತ ಅನುಮೋದಿತ ಕರಾವಳಿ ವಲಯ ನಿರ್ವಹಣಾ ಯೋಜನೆಯ ನಕ್ಷೆಯಲ್ಲಿ ಹಲವು ದೋಷಗಳಿವೆ. ಕಂದಾಯ ದಾಖಲೆಗಳು, ನವೀಕೃತ ಉಪಗ್ರಹ ಚಿತ್ರಣಗಳು ಮತ್ತು ನೈಜ ಸ್ಥಳ ಪರಿಶೀಲನೆ ನಡೆಸಿ ಸರ್ವೆ ಸಂಖ್ಯೆ-ವಾರು ತಿದ್ದುಪಡಿ ಮಾಡಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.

ಗೋವಾ ಮಾದರಿಯಲ್ಲಿ ಕರ್ನಾಟಕ ಕರಾವಳಿ ಭಾಗಕ್ಕೂ ನಿಯಮ ಸಡಿಲಿಕೆ ಮಾಡಿ: ಕರಾವಳಿ ಜನರ ಸಾಂಪ್ರದಾಯಿಕ ಮೀನುಗಾರಿಕೆ, ದೋಣಿ ದುರಸ್ತಿ, ಬಲೆ ಹೆಣೆಯುವುದು, ಮೀನು ಸಂಸ್ಕರಣೆ ಮತ್ತು ಸಾಂಪ್ರದಾಯಿಕ ಮನೆಗಳ ದುರಸ್ತಿ/ಪುನರ್ ನಿರ್ಮಾಣಕ್ಕೆ ಸಿಆರ್‍ಝೆಡ್ ಚೌಕಟ್ಟಿನೊಳಗೆ ಅಗತ್ಯ ಸಡಿಲಿಕೆ ಹಾಗೂ ಮಾನ್ಯತೆ ನೀಡಬೇಕು ಎಂದು ಈ ಭಾಗದ ಮೀನುಗಾರ ಸಮುದಾಯ, ಕರಾವಳಿ ಪ್ರದೇಶದ ನಿವಾಸಿಗಳು, ಸ್ಥಳೀಯ ಆಡಳಿತ ಸಂಸ್ಥೆಗಳು, ಜನ ಪ್ರತಿನಿಧಿಗಳು ಮತ್ತು ಇತರ ಭಾಗೀದಾರರು ವಿನಂತಿಸಿದ್ದಾರೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪರಿಸರ ಸಂರಕ್ಷಣೆಗೆ ಧಕ್ಕೆಯಾಗದಂತೆ ಗೋವಾ ರಾಜ್ಯಕ್ಕೆ ಸಿಆರ್‍ಝೆಡ್ ನಿಯಮಾವಳಿಗಳಲ್ಲಿ ನೀಡಲಾಗಿರುವ ಸಡಿಲಿಕೆಗಳನ್ನು ಕರ್ನಾಟಕಕ್ಕೂ ವಿಸ್ತರಿಸಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.

ಪಶ್ಚಿಮ ಘಟ್ಟಗಳ ಇಎಸ್‍ಝೆಡ್ ಅಧಿಸೂಚನೆ ಮರುಪರಿಶೀಲನೆ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಕೃಷಿ ಭೂಮಿ, ತೋಟಗಳು ಮತ್ತು ಮಾನವ ವಸತಿ ಪ್ರದೇಶಗಳನ್ನು ಸೇರಿಸಿರುವುದು ಕಳವಳಕಾರಿ. ಈ ಕುರಿತು ಪ್ರಧಾನಮಂತ್ರಿಗೂ ಪತ್ರ ಬರೆಯಲಾಗಿದ್ದು, ರಾಜ್ಯ ಸರಕಾರ ಪ್ರಸ್ತಾಪಿಸಿರುವ ವೈಜ್ಞಾನಿಕ ಸರ್ವೆ, ಭೌತಿಕ ಪರಿಶೀಲನೆ ನಡೆಸಬೇಕು. ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಆಧರಿಸಿ, ರಾಜ್ಯದೊಂದಿಗೆ ಚರ್ಚಿಸಿದ ನಂತರವೇ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಶಿವಕುಮಾರ್ ಕೋರಿದ್ದಾರೆ.

‘ಮ್ಯಾಂಗ್ರೋವ್ ಗಳು (ಕಾಂಡ್ಲಾ ವನಗಳು), ಮರಳಿನ ದಿಬ್ಬಗಳು ಹಾಗೂ ಆಮೆಗಳ ಸಂತಾನೋತ್ಪತ್ತಿ ಪ್ರದೇಶಗಳಂತಹ CRZ-I ರಕ್ಷಣೆಯಲ್ಲಿ ಯಾವುದೇ ರಾಜಿಯಲ್ಲ. ಆದರೆ, ವೈಜ್ಞಾನಿಕ ಹಾಗೂ ಸತ್ಯಾಸತ್ಯತೆಯ ಆಧಾರದ ಮೇಲೆ ನಿಯಮಗಳನ್ನು ಜಾರಿಗೊಳಿಸುವುದರಿಂದ ಪರಿಸರ ಸಂರಕ್ಷಣೆ ಮತ್ತು ಸ್ಥಳೀಯರ ಜೀವನೋಪಾಯ ಎರಡನ್ನೂ ಕಾಯ್ದುಕೊಳ್ಳಬಹುದು’ ಎಂದು ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X