Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ನೇಗಿಲ ಯೋಗಿ ಯೋಜನೆ' ಅನುಷ್ಠಾನಕ್ಕೆ...

‘ನೇಗಿಲ ಯೋಗಿ ಯೋಜನೆ' ಅನುಷ್ಠಾನಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ5 Oct 2026 11:37 PM IST
share
‘ನೇಗಿಲ ಯೋಗಿ ಯೋಜನೆ ಅನುಷ್ಠಾನಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

ಬೆಂಗಳೂರು : ಸಣ್ಣ ಮತ್ತು ಅತಿಸಣ್ಣ ರೈತರ ನೆರವಿಗೆ ಧಾವಿಸಲು ರಾಜ್ಯ ಸರಕಾರ ಆರಂಭಿಸಿರುವ ಮಹತ್ವಾಕಾಂಕ್ಷೆಯ ‘ಮುಖ್ಯಮಂತ್ರಿ ನೇಗಿಲ ಯೋಗಿ' ಯೋಜನೆಯನ್ನು ಅಕ್ಟೋಬರ್ ಅಂತ್ಯದೊಳಗೆ ಅನುಷ್ಠಾನಗೊಳಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸೋಮವಾರ ಇಲ್ಲಿನ ಸಿಎಂ ಗೃಹ ಕಚೇರಿ ಕೃಷ್ಣಾ ದಲ್ಲಿ ನಡೆದ ಸಿಎಂ 100 ದಿನಗಳ ಕಾರ್ಯ, ನೇಮಕಾತಿಗಳು ಹಾಗೂ ಆದ್ಯತೆ ಯೋಜನೆಗಳ ಪರಿಶೀಲನೆ ಸಭೆ'ಯಲ್ಲಿ ಕೃಷಿ ಇಲಾಖೆಯ ಪ್ರಗತಿ ಪರಿಶೀಲಿಸಿದ ಅವರು, ಸಿಎಂ ನೇಗಿಲ ಯೋಗಿ ಯೋಜನೆಯನ್ನು ಪ್ರಾಯೋಗಿಕವಾಗಿ ಪ್ರತಿ ಜಿಲ್ಲೆಯ ಒಂದು ತಾಲೂಕಿನಲ್ಲಿ ಅನುಷ್ಠಾನಗೊಳಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಆದರೆ, ಈಗ ಯೋಜನೆಯನ್ನು ಎರಡು ತಾಲೂಕುಗಳಿಗೆ ವಿಸ್ತರಿಸಿ, ಇದೇ ತಿಂಗಳಾಂತ್ಯಕ್ಕೆ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಸಿಎಂ ಸೂಚನೆ ನೀಡಿದರು.

ಆ್ಯಪ್ ಅಭಿವೃದ್ಧಿ: ಪ್ರಸ್ತುತ, 11 ಜಿಲ್ಲಾ ಉಸ್ತುವಾರಿ ಸಚಿವರಿಂದ ಮಾಹಿತಿ ಬಂದಿದೆ. ಇನ್ನೊಂದು ವಾರದಲ್ಲಿ ಎಲ್ಲ ಜಿಲ್ಲೆಗಳ ಮಾಹಿತಿ ತಲುಪಿಸಬೇಕು. ಪ್ರಸ್ತುತ, ರೈತರ ಬಳಿ ಲಭ್ಯವಿರುವ ಟ್ರ್ಯಾಕ್ಟರ್ ಹಾಗೂ ಇತರೆ ಯಂತ್ರೋಪಕರಣಗಳ ಮಾಹಿತಿ ಪಡೆಯಲು ಪ್ರತ್ಯೇಕ ಆ್ಯಪ್ ಅಭಿವೃದ್ಧಿಪಡಿಸಲು ಸೂಚಿಸಲಾಗಿದೆ.

ಸರಕಾರಿ ಏಜೆನ್ಸಿಯಿಂದಲೇ ಆ್ಯಪ್ ತಯಾರಿಸಿ, ಅದಕ್ಕೆ ಕೃಷಿ ಹಾಗೂ ತೋಟಗಾರಿಕಾ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡಿರುವ ಫ್ರೂಟ್ ಐಡಿಯನ್ನು ಸಂಯೋಜಿಸಲಾಗುವುದು. ಆಗ ರೈತರು ತಾವಿರುವಲ್ಲೇ ಆ್ಯಪ್ ಮೂಲಕ ಟ್ರ್ಯಾಕ್ಟರ್ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಟ್ರ್ಯಾಕ್ಟರ್ ವೆಚ್ಚದ ಶೇ.50ರಷ್ಟು ಹಣವನ್ನು ಸರಕಾರ ಪಾವತಿಸುವುದರಿಂದ ಸಣ್ಣ ರೈತರಿಗೆ ಅನುಕೂಲವಾಗಲಿದೆ. ಹಾಗಾಗಿ ಅಕ್ಟೋಬರ್ ತಿಂಗಳೊಳಗೆ ಸಿಎಂ ನೇಗಿಲ ಯೋಗಿ ಯೋಜನೆಯನ್ನು ಅನುಷ್ಠಾನ ಮಾಡಬೇಕು ಎಂದು ಸಿಎಂ ಸೂಚನೆ ನೀಡಿದರು.

ಏನಿದು ಯೋಜನೆ?: ಮೂರು ಎಕರೆ ಹಾಗೂ ಅದಕ್ಕಿಂತ ಕಡಿಮೆ ಭೂಮಿ ಹೊಂದಿರುವ ಬಡ ಮತ್ತು ಸಣ್ಣ ರೈತರ ಜಮೀನುಗಳ ಉಳುಮೆಗೆ ನೆರವಾಗುವ ಸಲುವಾಗಿ ರಾಜ್ಯ ಸರಕಾರ ಓಲಾ, ಉಬರ್ ಮಾದರಿಯಲ್ಲಿ ‘ಸಿಎಂ ನೇಗಿಲ ಯೋಗಿ' ಅನುಷ್ಠಾನಗೊಳಿಸಲು ಮುಂದಾಗಿದೆ. ಸರಕಾರ ಅಭಿವೃದ್ಧಿಪಡಿಸುವ ಆ್ಯಪ್ ಮೂಲಕವೇ ಅಗತ್ಯವಿರುವ ರೈತರು ಉಳುಮೆಗೆ ಟ್ರ್ಯಾಕ್ಟರ್ ಬುಕ್ಕಿಂಗ್ ಮಾಡಬಹುದಾಗಿದೆ. ಈ ರೀತಿ ಬುಕ್ಕಿಂಗ್ ಮಾಡಲಾದ ಟ್ರ್ಯಾಕ್ಟರ್‍ಗೆ ಶೇ.50ರಷ್ಟು ಬಾಡಿಗೆ ಹಣವನ್ನು ರೈತರು ಪಾವರಿಸಿದರೆ, ಉಳಿದ ಶೇ.50ರಷ್ಟು ಹಣವನ್ನು ಸರಕಾರ ಟ್ರ್ಯಾಕ್ಟರ್ ಮಾಲಕರಿಗೆ ಪಾವತಿಸಲಿದೆ.

ಈ ಯೋಜನೆಯಿಂದ ರಾಜ್ಯದ ಸುಮಾರು 59ಲಕ್ಷ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಅನುಕೂಲವಾಗಲಿದೆ. ಪ್ರಸ್ತುತ, ಈ ಯೋಜನೆಯನ್ನು ಪ್ರಾಯೋಗಿಕವಾಗಿ ಪ್ರತಿ ಜಿಲ್ಲೆಯ ಎರಡೆರಡು ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಆರ್ಥಿಕ ಮುಗ್ಗಟ್ಟಿನ ಹಿನ್ನೆಲೆಯಲ್ಲಿ ಕೃಷಿಯಿಂದ ವಿಮುಖರಾಗುತ್ತಿರುವ ಸಣ್ಣ ರೈತರಿಗೆ ಕೃಷಿ ವೆಚ್ಚ ತಗ್ಗಿಸಲು ಹಾಗೂ ಭೂಮಿಯನ್ನು ಹದಗೊಳಿಸಲು ನೆರವಾಗುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X