Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿ ನಾಯಕರು ಕುತಂತ್ರದ ರಾಜಕಾರಣ...

ಬಿಜೆಪಿ ನಾಯಕರು ಕುತಂತ್ರದ ರಾಜಕಾರಣ ಮಾಡಬಾರದು, ಬಡವರ ಮತಗಳನ್ನು ಕಿತ್ತುಹಾಕುವುದು ನಾಚಿಕೆಗೇಡಿನ ಕೆಲಸ : ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ6 Oct 2026 8:30 PM IST
share
ಬಿಜೆಪಿ ನಾಯಕರು ಕುತಂತ್ರದ ರಾಜಕಾರಣ ಮಾಡಬಾರದು, ಬಡವರ ಮತಗಳನ್ನು ಕಿತ್ತುಹಾಕುವುದು ನಾಚಿಕೆಗೇಡಿನ ಕೆಲಸ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ರಾಜ್ಯದ ಬಿಜೆಪಿಯವರು ಕುತಂತ್ರದ ರಾಜಕಾರಣ ಮಾಡಬಾರದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯನ್ನು ಗೆಲ್ಲಬೇಕು. ಈ ರೀತಿ ಚುನಾವಣಾ ಆಯೋಗ ಬಳಸಿಕೊಂಡು ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಹಾಗೂ ಬಡವರ ಮತಗಳನ್ನು ಕಿತ್ತು ಹಾಕುವುದು ನಾಚಿಕೆಗೇಡಿನ ಕೆಲಸ ಎಂದು ಮುಖ್ಯಮಮತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ಮಂಗಳವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು ಅಮಾಯಕರು, ಏಕೆಂದರೆ ಒಂದೇ ಕುಟುಂಬದಿಂದ ಗಂಡ, ಹೆಂಡತಿ, ಮಗಳು, ಮೂರು ಜನರು ಹೋಗಿ ಫಾರಂ 7 ಅರ್ಜಿಯನ್ನು ನೀಡಿರುವುದನ್ನು ಮಾಧ್ಯಮದವರೆ ದಾಖಲೆ ಸಮೇತ ಬಹಿರಂಗಪಡಿಸಿದ್ದಾರೆ. ಈಗ ಅವರು ಪೊಲೀಸ್ ಠಾಣೆಗೆ ಅಲೆಯುವಂತಾಗಿದೆ ಎಂದು ತಿಳಿಸಿದರು.

ಬೆಳಗಾವಿಯ ಬಿಜೆಪಿಯ ರಾಜಕಾರಣಿ ರವಿ ಪಾಟೀಲ್ ಹಾಗೂ ವಿಜಯಪುರದ ಬಬಲೇಶ್ವರ ಕ್ಷೇತ್ರದಲ್ಲಿ ಫಾರಂ 7 ದುರುಪಯೋಗ ಪಡಿಸಿಕೊಂಡಿರುವ ಬಗ್ಗೆ ತಪ್ಪೊಪ್ಪಿ ಕೊಂಡಿದ್ದಾರೆ. ಶೃಂಗೇರಿ ಕ್ಷೇತ್ರದಲ್ಲಿಯೂ 1500 ಫಾರಂ 7 ಅರ್ಜಿಗಳನ್ನು ಮಧ್ಯರಾತ್ರಿ ಸುಟ್ಟಿದ್ದಾರೆ. ಬೆಂಗಳೂರಿನ ಜಯನಗರ, ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಕ್ಷೇತ್ರದಲ್ಲಿ ಫಾರಂ 7 ಅರ್ಜಿಗಳನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಆರ್.ಅಶೋಕ್ ಹಾಗೂ ವಿಜಯೇಂದ್ರ ಅವರೇ ಸುಮಾರು 25 ಸಾವಿರ ಫಾರಂ 7 ಅರ್ಜಿಗಳನ್ನು ನೀಡಿರಬಹುದು. ಆನೆ ಕದ್ದರೂ ಕಳ್ಳ, ಅಡಿಕೆ ಕದ್ದರೂ ಕಳ್ಳ ಎಂಬ ಗಾದೆ ಇದೆ. ಬಿಜೆಪಿಯವರು ಮತಗಳ್ಳತನಕ್ಕೆ ಮುಂದಾಗಿರುವುದು ಸರಿಯಲ್ಲ. ನಾನು ಈ ರಾಜ್ಯದ ಮುಖ್ಯಮಂತ್ರಿಯಾಗಿ ಜನರಿಗೆ ಜಾಗೃತಿ ಮೂಡಿಸುತ್ತಿದ್ದೇನೆ. ರಾಜ್ಯದ ಜನರ ಮತಗಳಿಗೆ ರಕ್ಷಣೆ ನೀಡುವ ಜವಾಬ್ದಾರಿ ನನ್ನದು ಎಂದು ಶಿವಕುಮಾರ್ ಸ್ಪಷ್ಟಪಡಿಸಿದರು.

ಷಡ್ಯಂತ್ರ ನಡೆಸಿ, ಫಾರಂ 7 ದುರುಪಯೋಗಪಡಿಸಿಕೊಂಡಿರುವುದರಿಂದ ಬಿಜೆಪಿ ನಾಯಕರು ಹೆದರಿದ್ದಾರೆ. ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ, ಶೋಭಕ್ಕ, ವಿಜಯೇಂದ್ರ, ಅಶೋಕ್ ಅವರು ಫಾರಂ 7 ಅನ್ನು ನಾವೇ ಕೊಟ್ಟಿದ್ದೇವೆ ಎಂದು ಒಪ್ಪಿಕೊಳ್ಳಲಿ. ನಾನು ಮುಖ್ಯಚುನಾವಣಾಧಿಕಾರಿ ಕಚೇರಿಗೆ ಹೋದ ಬಳಿಕ, ಬಿಎಲ್‍ಒಗಳಿಂದ ತಾವು ಸಲ್ಲಿಸಿದ್ದ ಫಾರಂ 7 ಅನ್ನು ಕೆಲವರು ವಾಪಸ್ ಪಡೆದರೆ ಮತ್ತೆ ಕೆಲವರು ಕಿತ್ತುಕೊಂಡು, ಸುಟ್ಟು ಹಾಕಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಬಿಎಲ್‍ಒಗಳಿಗೆ ಬೆದರಿಕೆ ಹಾಕಿ ಲಕ್ಷಾಂತರ ಅರ್ಜಿ ಪಡೆದಿದ್ದಾರೆ. ಬಿಎಲ್‍ಒಗಳು ಇದರ ಬಗ್ಗೆ ವರದಿ ನೀಡಿದ್ದಾರೆ. ಮತದಾನದ ಹಕ್ಕು ಕಳೆದುಕೊಂಡವರು ದೂರು ನೀಡುವುದು ಸಹಜ. ಬದುಕಿರುವವರನ್ನು ಸತ್ತಿದ್ದಾರೆ ಎಂದು ತೋರಿಸಲಾಗಿದೆ. ಈ ಫಾರಂ 7 ಅನ್ನು ದಿಲ್ಲಿ ಅಥವಾ ಬೇರೆಡೆ ಮುದ್ರಿಸಿ ಕೊಟ್ಟಿದ್ದಾರೆ. ಹೀಗಾಗಿ ನಾವು ಮುಖ್ಯಚುನಾವಣಾಧಿಕಾರಿ ಕಚೇರಿಗೆ ಹೋಗಿ ದೂರು ನೀಡಿದ್ದೇವೆ. ಅವರು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ ಶಿವಕುಮಾರ್ ಹೇಳಿದರು.

ಬಿಜೆಪಿ, ಜೆಡಿಎಸ್ ತಂತ್ರಗಳು ನನಗೆ ಗೊತ್ತಿವೆ: ನಮ್ಮ ಜಾಗದಲ್ಲಿ ಅವರು(ಬಿಜೆಪಿ-ಜೆಡಿಎಸ್) ಇದ್ದಿದ್ದರೆ ಏನು ಮಾಡುತ್ತಿದ್ದರು? ಈ ಹಿಂದೆ ಚಿಲುಮೆ ಸಂಸ್ಥೆ ಹೆಸರಿನಲ್ಲಿ ಅಕ್ರಮ ಎಸಗಿದ್ದರು. ಅವರೇ ಬಿಎಲ್‍ಒ ನೇಮಕ ಮಾಡಿದ್ದರು. ಬಿಜೆಪಿ ಹಾಗೂ ಜೆಡಿಎಸ್ ನಾಯಕರ ತಂತ್ರಗಳೇನು? ಅವರು ಏನೆಲ್ಲಾ ಅಕ್ರಮ ಮಾಡಲು ಹೊರಟಿದ್ದಾರೆ ಎಂದು ನನಗೆ ಗೊತ್ತಿದೆ ಎಂದು ಅವರು ತಿಳಿಸಿದರು.

ನಾವು ದೂರು ಕೊಟ್ಟ ಬಳಿಕ ಚುನಾವಣಾ ಆಯೋಗ ಎಲ್ಲ ಚುನಾವಣಾ ಅಧಿಕಾರಿಗಳಿಗೆ ಪರಿಶೀಲನೆ ನಡೆಸದೆ ಯಾವುದೇ ಫಾರಂ 7 ಅರ್ಜಿಗಳನ್ನು ಅನುಮೋದಿಸುವಂತಿಲ್ಲ ಎಂದು ನಿರ್ದೇಶನ ನೀಡಿದೆ. ಕೆಲವು ಕಾರ್ಯಕರ್ತರು ನ್ಯಾಯಾಲಯದ ಮೊರೆ ಹೋಗಿದ್ದು, ತಮಗೆ ಯಾರು ಆ ಅರ್ಜಿಗಳನ್ನು ನೀಡಿದರು ಎಂದು ಅವರೇ ಹೇಳಬೇಕು. ಇದರ ಬಗ್ಗೆಯೂ ತನಿಖೆ ಆಗಬೇಕು ಎಂದು ಶಿವಕುಮಾರ್ ತಿಳಿಸಿದರು. ಎಲ್ಲ ಪೊಲೀಸ್ ಠಾಣೆಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂಬ ವಿರೋಧ ಪಕ್ಷಗಳ ನಾಯಕರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಸಭೆ ಮಾಡಿ ಶಾಸಕರಿಗೆ ಮಾಹಿತಿ ನೀಡಿದ್ದೇನೆ. ನಮ್ಮ ದೂರಿನ ಬಳಿಕ ಚುನಾವಣಾ ಆಯೋಗ, ಮತಪಟ್ಟಿಯಿಂದ ಹೊರಗುಳಿದವರು ತಮ್ಮ ಹಕ್ಕು ಪಡೆಯಲು ಫಾರಂ 6 ಅರ್ಜಿ ಸಲ್ಲಿಸುವ ಅವಕಾಶ ನೀಡಿದೆ. ವಿಶೇಷ ಅಭಿಯಾನ ನಡೆಸಲು ಮುಂದಾಗಿದೆ. ಇದು ಕರ್ನಾಟಕದ ಜಯ ಎಂದು ತಿಳಿಸಿದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X