Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ...

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಿನ ಬಜೆಟ್‌ನಲ್ಲಿ ಅನುದಾನ : ಸಿಎಂ ಡಿ.ಕೆ.ಶಿವಕುಮಾರ್

ಕೆಆರ್‌ಎಸ್‌ನ ಬೃಂದಾವನ ಉದ್ಯಾನದಲ್ಲಿ ʼಕಾವೇರಿ ಆರತಿʼ ಕಾರ್ಯಕ್ರಮಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ16 Oct 2026 11:13 PM IST
share
ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಿನ ಬಜೆಟ್‌ನಲ್ಲಿ ಅನುದಾನ : ಸಿಎಂ ಡಿ.ಕೆ.ಶಿವಕುಮಾರ್

ಶ್ರೀರಂಗಪಟ್ಟಣ(ಮಂಡ್ಯ): "ಮುಂದಿನ ಬಜೆಟ್ ನಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಗೆ ಸೂಕ್ತ ಅನುದಾನ ಮೀಸಲಿಡಲಾಗುವುದು. ಅರಣ್ಯ ಇಲಾಖೆಗೆ ಸೇರಿದ 5000 ಹೆಕ್ಟೇರ್ ಭೂಮಿಗೆ ಪರ್ಯಾಯ ಭೂಮಿಯನ್ನು ಒದಗಿಸಲು ಈಗಾಗಲೇ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ಭೂಮಿ ಪೂಜೆಗೆ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಕೆಆರ್‌ಎಸ್‌ನ ಬೃಂದಾವನ ಉದ್ಯಾನದಲ್ಲಿ ನಡೆದ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಶಿವಕುಮಾರ್ ಅವರು ಶುಕ್ರವಾರ ಚಾಲನೆ ನೀಡಿದರು.

"ಕಾವೇರಿ ಆರತಿಯು ಎರಡನೇ ವರ್ಷಕ್ಕೆ ಕಾಲಿಟ್ಟಿದ್ದು, ಉಪಕಾರ ಸ್ಮರಣೆ ಮಾಡಲು ಕಾವೇರಿ ಆರತಿ ಕಾರ್ಯಕ್ರಮವನ್ನು ಪ್ರಾರಂಭ ಮಾಡಲಾಯಿತು. ತಾಯಿ ಜನ್ಮ ನೀಡಿದರೆ ಕಾವೇರಿ ತಾಯಿ ಅನ್ನ ನೀಡುತ್ತಿದ್ದಾಳೆ. ಕಾವೇರಿ ತಾಯಿಯ ಮಡಿಲಲ್ಲಿ ಮಗು ಬೆಳೆದರೆ, ಇಡೀ ಕರುನಾಡು ಬೆಳೆಯುತ್ತದೆ. ನಾವು ಕಾವೇರಿಯ ಅಭಿವೃದ್ಧಿಗೆ, ಪ್ರತಿ ಹನಿ ಉಳಿಸಲು ಹೋರಾಟ ಮಾಡಿಕೊಂಡು ಬಂದಿದ್ದೇವೆ" ಎಂದರು.

"ಕಾವೇರಿ ನಮ್ಮ ಸಂಸ್ಕೃತಿ, ಪ್ರಕೃತಿ ಹಾಗೂ ನಮ್ಮ ಬದುಕಿನ ದೊಡ್ಡ ಶಕ್ತಿ. ಇದನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ. ನೀರು ಉಳಿದರೆ ನಾಡು ಉಳಿಯುತ್ತದೆ. ಕಾವೇರಿ ಉಳಿದರೆ ಕರುನಾಡು ಉಳಿಯುತ್ತದೆ ಎಂದು ನಾವೆಲ್ಲ ಒಪ್ಪಿಕೊಂಡಿದ್ದೇವೆ" ಎಂದು ಹೇಳಿದರು.

ಕಾವೇರಿ ಸಮೃದ್ಧಿಯ ಸಂಕೇತ

"ಚಾಮುಂಡೇಶ್ವರಿ ಶಕ್ತಿಯ ಸಂಕೇತವಾದರೆ ಕಾವೇರಿ ಸಮೃದ್ಧಿಯ ಸಂಕೇತ. ನಮ್ಮ ನಾಡಿನ ಸಂಸ್ಕೃತಿಗೆ ನಮನ ಸಲ್ಲಿಸಲು ಕಾವೇರಿ ಆರತಿ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಮುಂದಿನ ದಿನಗಳಲ್ಲಿಯೂ ಎಲ್ಲಾ ಸರ್ಕಾರಗಳು, ಸಾರ್ವಜನಿಕರು, ಇಲಾಖೆಗಳು ಇದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು" ಎಂದರು.

ಅಣೆಕಟ್ಟಿನ ಹೂಳು ತೆಗೆಸಲಾಗುವುದು

"ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಆಂಧ್ರಪ್ರದೇಶ ತೆಲಂಗಾಣ ಹಾಗೂ ನಾನು ಸೇರಿ ಭೇಟಿ ಮಾಡಿದ ಸಂದರ್ಭದಲ್ಲಿ ಕಾವೇರಿ ಮತ್ತು ತುಂಗಭದ್ರ ಜಲಾಶಯಗಳಿಂದ ಹೂಳು ತೆಗೆಯಲು ಟೆಂಡರ್ ಕರೆಯಲು ಸೂಚಿಸಿದ್ದಾರೆ.ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಈಗಾಗಲೇ ಹೂಳು ತೆಗೆಯುವ ಕಾರ್ಯಕ್ರಮ ಪ್ರಾರಂಭವಾಗಿದ್ದು, ಡ್ರಜ್ಜಿಂಗ್ ಮೆಶೀನ್ ತರಿಸಿ ಹೂಳು ತೆಗೆಸಿ, ಮರಳು ಹಾಗೂ ಮಣ್ಣನ್ನು ರೈತರಿಗೆ ಒದಗಿಸುವ ಕೆಲಸ ಮಾಡಲಾಗುತ್ತಿದೆ. ಸದ್ಯದಲ್ಲಿಯೇ ನಾನು ಹಾಗೂ ನೀರಾವರಿ ಸಚಿವರು ತೆಲಂಗಾಣಕ್ಕೆ ಭೇಟಿ ನೀಡಿ ಈ ಯೋಜನೆಯನ್ನು ವೀಕ್ಷಿಸಿ ನೀರು ವ್ಯರ್ಥವಾಗದಂತೆ ಪ್ರಯತ್ನ ಮಾಡಲಾಗುವುದು" ಎಂದರು.

ಟೀಕೆಗಳನ್ನು ಸಂತೋಷದಿಂದ ಸ್ವೀಕರಿಸುತ್ತೇನೆ

"ನಾನು ಟೀಕೆಗಳನ್ನು ಸ್ವಾಗತಿಸುವವನು. ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ ಎಂದು ನಂಬಿರುವವನು . ರಾಜಕಾರಣ ಮಾಡುವವರಿಗೆ ವೈರಿಗಳು ಇರಬೇಕು, ಟೀಕೆ ಮಾಡುವವರೂ ಇರಬೇಕು. ವೈರಿಗಳು ಇಲ್ಲದಿದ್ದರೆ ಎಚ್ಚರಿಕೆಯಿಂದ ಬದುಕು ಮತ್ತು ಆಳ್ವಿಕೆಯನ್ನು ನಡೆಸಲು ಸಾಧ್ಯವಿಲ್ಲ. ಟೀಕೆ, ಅವಹೇಳನಗಳನ್ನು ಸಂತೋಷದಿಂದ ಸ್ವೀಕರಿಸುತ್ತೇನೆ. ಬದುಕಿನಲ್ಲಿ ನನಗೆ ಕಷ್ಟವೂ, ಗೊತ್ತು ಸುಖವು ಗೊತ್ತು. ರಾಜ್ಯದ ಜನತೆಗೆ ಸೇವೆ ಮಾಡಲು ರಾಜ್ಯದ ಜನತೆ ನನ್ನ ಹಾಗೂ ಸಿದ್ದರಾಮಯ್ಯನವರ ನಾಯಕತ್ವದಲ್ಲಿ 136 ಸ್ಥಾನಗಳನ್ನು ಕೊಟ್ಟು ಸೇವೆ ಮಾಡುವ ಅವಕಾಶವನ್ನು ಕಲ್ಪಿಸಿದ್ದಾರೆ" ಎಂದರು.

ಕಾವೇರಿಗೆ ಭಕ್ತಿಯ ಆರತಿ, ಭಾವದ ನಮನ

ಕೆ.ಆರ್.ಎಸ್. ಅಣೆಕಟ್ಟಿನ ಬೃಂದಾವನ ಉದ್ಯಾನವನದಲ್ಲಿ ಇಂದು ಧರ್ಮಪತ್ನಿ ಉಷಾ ಅವರ ಸಮೇತ ಕಾವೇರಿ ಮಾತೆಗೆ ಪೂಜೆ ಸಲ್ಲಿಸುವ ಮೂಲಕ 'ಕಾವೇರಿ ಆರತಿ' ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ.

ಕಾವೇರಿ ಆರತಿ ಕಾರ್ಯಕ್ರಮವು ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಪ್ರಕೃತಿಯೊಂದಿಗಿನ ಅವಿನಾಭಾವ ಸಂಬಂಧದ ಪ್ರತೀಕವಾಗಿದೆ. ತಾಯಿ ಕಾವೇರಿಯ ಜಲಧಾರೆ ಸದಾ ನಾಡಿನ ನೆಲವನ್ನು ಹಸಿರಾಗಿಸಲಿ, ಜನಜೀವನವನ್ನು ಸಮೃದ್ಧಗೊಳಿಸಲಿ, ರೈತರ ಬದುಕಿನಲ್ಲಿ ಸುಖ-ಸಂತೋಷದ ಬೆಳಕು ಮೂಡಿಸಲಿ.

ಮೈಸೂರಿನ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿಶ್ಚಲಾನಂದನಾಥ ಸ್ವಾಮೀಜಿ, ಶ್ರೀ ಕಾಗಿನೆಲೆ ಮಹಾಸಂಸ್ಥಾನದ ಮೈಸೂರು ವಿಭಾಗದ ಕನಕ ಗುರುಪೀಠದ ಶ್ರೀ ಶಿವಾನಂದಪುರಿ ಸ್ವಾಮೀಜಿ, ಕಲಬುರಗಿಯ ಉರಿಲಿಂಗ ಪೆದ್ದೀಶ್ವರ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಸಚಿವರಾದ ಶ್ರೀ ಎನ್. ಚಲುವರಾಯಸ್ವಾಮಿ,‌ ಶ್ರೀ ಶಿವಲಿಂಗೇಗೌಡ, ಶ್ರೀ ನರೇಂದ್ರಸ್ವಾಮಿ, ಸಂಸದರು ಹಾಗೂ ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರರಾದ ಶ್ರೀ ಜಿ.ಸಿ. ಚಂದ್ರಶೇಖರ್, ಶಾಸಕರು ಹಾಗೂ ಚೆಸ್ಕಾಂ ಅಧ್ಯಕ್ಷರಾದ ಶ್ರೀ ರಮೇಶ್ ಬಂಡಿಸಿದ್ದೇಗೌಡ, ಶಾಸಕರಾದ ಶ್ರೀ ಕದಲೂರು ಉದಯ್, ಶ್ರೀ ದರ್ಶನ್ ಪುಟ್ಟಣ್ಣಯ್ಯ, ಎಂಎಲ್‌ಸಿ ಶ್ರೀ ದಿನೇಶ್ ಗೂಳಿಗೌಡ, ಶ್ರೀ ಮಳವಳ್ಳಿ ಶಿವಣ್ಣ ಮತ್ತಿತರರು ಉಪಸ್ಥಿತರಿದ್ದರು.

— DK Shivakumar (@DKShivakumar) October 16, 2026

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X