Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಸೌದಿ ಅರೇಬಿಯಾದಲ್ಲಿ ಸಿಲುಕಿರುವ ರಾಜ್ಯದ...

‘ಸೌದಿ ಅರೇಬಿಯಾದಲ್ಲಿ ಸಿಲುಕಿರುವ ರಾಜ್ಯದ 600ಕ್ಕೂ ಹೆಚ್ಚು ಉಮ್ರಾ ಯಾತ್ರಿಕರು’ : ಕೇಂದ್ರದ ನೆರವು ಕೋರಿ ವಿದೇಶಾಂಗ ಸಚಿವರಿಗೆ ಸಿಎಂ ಡಿ.ಕೆ.ಶಿವಕುಮಾರ್ ಪತ್ರ

ವಾರ್ತಾಭಾರತಿವಾರ್ತಾಭಾರತಿ23 Oct 2026 10:54 PM IST
share
‘ಸೌದಿ ಅರೇಬಿಯಾದಲ್ಲಿ ಸಿಲುಕಿರುವ ರಾಜ್ಯದ 600ಕ್ಕೂ ಹೆಚ್ಚು ಉಮ್ರಾ ಯಾತ್ರಿಕರು’ : ಕೇಂದ್ರದ ನೆರವು ಕೋರಿ ವಿದೇಶಾಂಗ ಸಚಿವರಿಗೆ ಸಿಎಂ ಡಿ.ಕೆ.ಶಿವಕುಮಾರ್ ಪತ್ರ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭದ್ರತಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದ ಪವಿತ್ರ ನಗರಗಳಾದ ಮಕ್ಕಾ ಮತ್ತು ಮದೀನಾದಲ್ಲಿ ಸಿಲುಕಿರುವ ರಾಜ್ಯದ 600ಕ್ಕೂ ಹೆಚ್ಚು ಉಮ್ರಾ ಯಾತ್ರಿಕರನ್ನು ಸುರಕ್ಷಿತವಾಗಿ ಹಾಗೂ ಶೀಘ್ರವಾಗಿ ಸ್ವದೇಶಕ್ಕೆ ಕರೆತರಲು ತಕ್ಷಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.

ಈ ಸಂಬಂಧ ಶುಕ್ರವಾರ ಕೇಂದ್ರ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರಿಗೆ ಪತ್ರ ಬರೆದಿರುವ ಅವರು, ಸೌದಿ ಅರೇಬಿಯಾದಿಂದ ಬೆಂಗಳೂರಿಗೆ ಹಾಗೂ ಭಾರತದ ಇತರ ಭಾಗಗಳಿಗೆ ಮರಳುವ ವಿಮಾನಗಳ ಸಂಚಾರ ಸ್ಥಗಿತಗೊಂಡಿರುವುದರಿಂದ ಯಾತ್ರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಮಾನವೀಯ ದೃಷ್ಟಿಯಿಂದ ಕೇಂದ್ರ ಸರಕಾರ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯ ಹಜ್ ಸಮಿತಿಯ ಅಧ್ಯಕ್ಷರು ಹಾಗೂ ಅವರ ತಂಡ ಇತ್ತೀಚೆಗೆ ಪವಿತ್ರ ನಗರಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ, ವಿಮಾನ ಸೇವೆಗಳ ವ್ಯತ್ಯಯದಿಂದ ಹಲವು ಯಾತ್ರಿಕರು ತೀವ್ರ ಸಂಕಷ್ಟ ಎದುರಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಹಲವು ಯಾತ್ರಿಕರ ಬಳಿ ಇದ್ದ ಹಣ ಖಾಲಿಯಾಗಿದ್ದು, ಆಹಾರ ಮತ್ತು ವಸತಿ ಸೇರಿದಂತೆ ಮೂಲಭೂತ ಅಗತ್ಯಗಳನ್ನು ಪೂರೈಸಿಕೊಳ್ಳಲು ಕಷ್ಟಪಡುತ್ತಿದ್ದಾರೆ. ಹೋಟೆಲ್‍ಗಳು ಕೊಠಡಿಗಳನ್ನು ಖಾಲಿ ಮಾಡುವಂತೆ ಯಾತ್ರಿಕರಿಗೆ ಸೂಚಿಸುತ್ತಿವೆ ಎಂಬ ವರದಿಗಳೂ ಬಂದಿವೆ. ಇದರಿಂದ ವೃದ್ಧರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಅನೇಕರು ತೀವ್ರ ಅಸಹಾಯಕ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ವಿವರಿಸಿದ್ದಾರೆ.

ಸೌದಿ ಅರೇಬಿಯಾದಲ್ಲಿರುವ ಭಾರತೀಯ ಮತ್ತು ಕರ್ನಾಟಕದ ಸ್ವಯಂಸೇವಾ ಸಂಘಟನೆಗಳು ತಾತ್ಕಾಲಿಕ ನೆರವು ನೀಡುತ್ತಿದ್ದರೂ, ಸಂಕಷ್ಟದಲ್ಲಿರುವ ಎಲ್ಲ ಯಾತ್ರಿಕರ ಅಗತ್ಯಗಳನ್ನು ಪೂರೈಸಲು ಈ ನೆರವು ಸಾಕಾಗುತ್ತಿಲ್ಲ ಎಂದು ಶಿವಕುಮಾರ್ ಪತ್ರದಲ್ಲಿ ಗಮನ ಸೆಳೆದಿದ್ದಾರೆ.

ವಿಶೇಷ ವಿಮಾನಗಳ ವ್ಯವಸ್ಥೆಗೆ ಮನವಿ: ಸೌದಿ ಅರೇಬಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಜಿದ್ದಾದಲ್ಲಿನ ಭಾರತೀಯ ಕಾನ್ಸುಲೇಟ್ ಜನರಲ್ ಕಚೇರಿಗಳು ಸೌದಿ ಅಧಿಕಾರಿಗಳು, ವಿಮಾನಯಾನ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇತರ ಏಜೆನ್ಸಿಗಳೊಂದಿಗೆ ಸಮನ್ವಯ ಸಾಧಿಸಿ, ಯಾತ್ರಿಕರ ಪರಿಸ್ಥಿತಿಯನ್ನು ಪರಿಶೀಲಿಸಿ ಸುರಕ್ಷಿತ ವಾಪಸಾತಿಗೆ ತುರ್ತು ವ್ಯವಸ್ಥೆ ಮಾಡಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.

ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಶೇಷ ವಿಮಾನಗಳ ವ್ಯವಸ್ಥೆ ಮಾಡಬೇಕು. ಯಾತ್ರಿಕರು ಸ್ವದೇಶಕ್ಕೆ ಮರಳುವವರೆಗೆ ಅವರಿಗೆ ಅಗತ್ಯವಾದ ಮಧ್ಯಂತರ ನೆರವು ಒದಗಿಸಬೇಕು ಎಂದು ಅವರು ಕೇಂದ್ರ ವಿದೇಶಾಂಗ ಸಚಿವರನ್ನು ಕೋರಿದ್ದಾರೆ.

ಯಾತ್ರಿಕರ ಸುರಕ್ಷಿತ ಹಾಗೂ ಶೀಘ್ರ ವಾಪಸಾತಿಗೆ ರಾಜ್ಯ ಸರಕಾರದಿಂದ ಅಗತ್ಯವಿರುವ ಎಲ್ಲ ಸಹಕಾರವನ್ನು ನೀಡಲು ಸಿದ್ಧವಿದ್ದೇವೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X