Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರೈತರ ಸಮಸ್ಯೆ ಕುರಿತು ನ.13ರಂದು ಪ್ರಧಾನಿ...

ರೈತರ ಸಮಸ್ಯೆ ಕುರಿತು ನ.13ರಂದು ಪ್ರಧಾನಿ ಮೋದಿ ಜತೆ ಚರ್ಚೆ : ಸಿಎಂ ಡಿ.ಕೆ.ಶಿವಕುಮಾರ್

"ಗೃಹಲಕ್ಷ್ಮಿಯ ಮೂರು ಕಂತುಗಳಿಗೆ 7,400 ಕೋಟಿ ರೂ. ಬಿಡುಗಡೆ"

ವಾರ್ತಾಭಾರತಿವಾರ್ತಾಭಾರತಿ5 Nov 2026 11:21 PM IST
share
ರೈತರ ಸಮಸ್ಯೆ ಕುರಿತು ನ.13ರಂದು ಪ್ರಧಾನಿ ಮೋದಿ ಜತೆ ಚರ್ಚೆ : ಸಿಎಂ ಡಿ.ಕೆ.ಶಿವಕುಮಾರ್

ರಾಮನಗರ: "ಬಿಜೆಪಿ ರೈತ ವಿರೋಧಿ ಪಕ್ಷ. ಬಿಜೆಪಿಯವರು ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾದಾಗ ಏಕೆ ಪ್ರತಿಭಟನೆ ಮಾಡಲಿಲ್ಲ? ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರವನ್ನ ಮೊದಲು ಕಡಿಮೆ ಮಾಡಲಿ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ರಾಮನಗರದ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಕಚೇರಿ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

"ಹಾಲಿನ ಬೆಲೆ ಹೆಚ್ಚಳ ಮಾಡಿದ್ದಕ್ಕಾಗಿ ಹಸಿರು ಸೇನೆಯವರು ಅಭಿನಂದನಾ ಪತ್ರ ನೀಡಿಸಿದ್ದಾರೆ. ಕೇಂದ್ರ ಸರ್ಕಾರ ಇಂಧನ ದರ ಇಳಿಸಿದರೆ ನಾವು ಕೆಎಸ್ ಆರ್ ಟಿಸಿ ಬಸ್ ಪ್ರಯಾಣ ದರ ಕಡಿಮೆ ಮಾಡುತ್ತೇವೆ" ಎಂದು ಹೇಳಿದರು.

ಮೋದಿ ಭೇಟಿಗೆ ಪತ್ರ ಬರೆದಿದ್ದೇನೆ

ರೈತರ ಸಮಸ್ಯೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವಿರಾ ಎಂಬ ಪ್ರಶ್ನೆಗೆ, "ಖಂಡಿತವಾಗಿಯೂ ಭೇಟಿ ಮಾಡುತ್ತೇನೆ. ಈಗಾಗಲೇ ಪತ್ರ ಬರೆದಿದ್ದೇನೆ. ನವೆಂಬರ್ 13ರಂದು ಪ್ರಧಾನಿ ಬೆಂಗಳೂರಿಗೆ ಬರುತ್ತಿದ್ದಾರೆ. ಅಂದು ಮಾತನಾಡುತ್ತೇನೆ. ಇಲ್ಲವಾದರೆ ಬೇರೆ ಸಮಯ ಕೇಳುತ್ತೇನೆ" ಎಂದು ತಿಳಿಸಿದರು.

"ಕಬ್ಬು ಬೆಲೆ ವಿಚಾರದಲ್ಲಿ ಕಾರ್ಖಾನೆಗಳು ಮತ್ತು ರೈತರೊಂದಿಗೆ ಚರ್ಚಿಸಲಾಗಿದೆ. ರೈತರಿಗೆ ನ್ಯಾಯ ಸಿಗುವಂತೆ ಕಾರ್ಖಾನೆಗಳು ಬೆಲೆ ನಿಗದಿಪಡಿಸಬೇಕು ಎಂದು ತಿಳಿಸಿದ್ದೇವೆ. ಹಾವೇರಿ ಜಿಲ್ಲೆಯಲ್ಲಿ ಕಬ್ಬು ಕಟಾವು ಮತ್ತು ಸಾಗಣೆಗೆ ಪೊಲೀಸ್ ರಕ್ಷಣೆ ನೀಡುವಂತೆ ರೈತರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಕಬ್ಬು ಒಣಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಪೊಲೀಸ್ ರಕ್ಷಣೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ" ಎಂದರು.

ಗೃಹಲಕ್ಷ್ಮಿಗೆ ₹7,400 ಕೋಟಿ ಬಿಡುಗಡೆ

"ಬುಧವಾರದಂದು 7,400 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದೇವೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಹಿಳೆಯರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಹಣ ಬಿಡುಗಡೆ ಮಾಡಲಾಗಿದೆ. ನಾಳೆ ಕೆಲವು ಮಹಿಳೆಯರು ನನ್ನನ್ನು ಭೇಟಿ ಮಾಡಲು ಬರುತ್ತಿದ್ದಾರೆ. ಅವರನ್ನು ಭೇಟಿ ಮಾಡುತ್ತೇನೆ" ಎಂದರು.

"ರಾಮನಗರಕ್ಕೆ ನಾನು ಪ್ರವಾಸ ಮಾಡಲು ಬಂದಿಲ್ಲ. ಇದು ನನ್ನೂರು, ನನ್ನ ಮನೆ, ನನ್ನ ಜನ. ನಮ್ಮವರನ್ನು ಭೇಟಿ ಮಾಡಲು ಬಂದಿದ್ದೇನೆ. ನಮ್ಮ ಮನೆಗೆ ಬಂದಂತೆ ಸಹಜವಾಗಿ ಇಲ್ಲಿಗೆ ಬಂದಿದ್ದೇನೆ" ಎಂದು ಹೇಳಿದರು.

"ರಾಮನಗರ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ಶಾಸಕರು ಹಾಗೂ ಸಚಿವರನ್ನು ಪ್ರತ್ಯೇಕವಾಗಿ ಕರೆದು ಪ್ರಗತಿ ಪರಿಶೀಲನೆ ನಡೆಸುತ್ತಿದ್ದೇನೆ. ಯಾವ ಕ್ಷೇತ್ರದಲ್ಲಿ ಏನೇನು ಕೆಲಸ ಆಗಬೇಕು ಎಂಬುದರ ಕುರಿತು ಶಾಸಕರಿಂದ ಪಟ್ಟಿ ಪಡೆದುಕೊಳ್ಳುತ್ತಿದ್ದೇನೆ. ಹಿಂದೆ ನೀಡಿರುವ ಪಟ್ಟಿಯಲ್ಲಿನ ಕಾಮಗಾರಿಗಳನ್ನೂ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಕನಕಪುರ ಮತ್ತು ರಾಮನಗರದಲ್ಲಿ ಆಸ್ಪತ್ರೆಗಳ ಕಾಮಗಾರಿ ನಡೆಯುತ್ತಿದೆ. ಮಾಗಡಿಯಲ್ಲಿಯೂ ಹಲವು ಯೋಜನೆಗಳಿವೆ. ನೀರಾವರಿ ಕ್ಷೇತ್ರದಲ್ಲಿ ಈಗಾಗಲೇ ₹1,000 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗಳಾಗಿವೆ. ಎಲ್ಲವನ್ನೂ ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು" ಎಂದರು.

ನಾಲ್ಕು ಕಡೆ ಮೆಡಿಕಲ್ ಕಾಲೇಜು ಕೆಲಸ

ಮೆಡಿಕಲ್ ಕಾಲೇಜು ಸ್ಥಾಪನೆ ಕುರಿತು ಕೇಳಿದಾಗ, "ನಾವು ಅಧಿಕಾರಕ್ಕೆ ಬಂದ ಬಳಿಕ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಅನುಮತಿ ನೀಡಿದ್ದೇವೆ. ಚನ್ನಪಟ್ಟಣದಲ್ಲಿ ದಯಾನಂದ ಸಾಗರ ಸಂಸ್ಥೆಗೆ ಹಿಂದೆಯೇ ಅವಕಾಶ ನೀಡಲಾಗಿದ್ದು, ಅಲ್ಲಿ ಕಾಮಗಾರಿ ನಡೆಯುತ್ತಿದೆ. ರಾಮನಗರ ಮತ್ತು ಕನಕಪುರ ಕ್ಷೇತ್ರಗಳಲ್ಲಿಯೂ ಮೆಡಿಕಲ್ ಕಾಲೇಜುಗಳ ಕಾಮಗಾರಿಗಳು ನಡೆಯುತ್ತಿವೆ. ಈಗಾಗಲೇ ನಾಲ್ಕು ಕಡೆ ಕೆಲಸಗಳು ನಡೆಯುತ್ತಿವೆ" ಎಂದು ಹೇಳಿದರು.

ಮೆಡಿಕಲ್ ಕಾಲೇಜು ಉದ್ಘಾಟನೆ ಯಾವಾಗ ಎಂಬ ಪ್ರಶ್ನೆಗೆ, "ಖಂಡಿತ ಶೀಘ್ರ ಉದ್ಘಾಟನೆಯಾಗಲಿದೆ. ವಿಶ್ವವಿದ್ಯಾಲಯದ ಉಪಕುಲಪತಿಯನ್ನು ಪ್ರತ್ಯೇಕವಾಗಿ ನೇಮಿಸಿ ಇಲ್ಲಿಗೆ ಸ್ಥಳಾಂತರಿಸುವ ಬಗ್ಗೆಯೂ ಕ್ರಮ ಕೈಗೊಳ್ಳುವುದಾಗಿ" ತಿಳಿಸಿದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X