Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಧಿವೇಶನಕ್ಕೂ ಮೊದಲೇ ಸಂಪುಟಕ್ಕೆ ಮಹಿಳಾ...

ಅಧಿವೇಶನಕ್ಕೂ ಮೊದಲೇ ಸಂಪುಟಕ್ಕೆ ಮಹಿಳಾ ಸಚಿವರ ನೇಮಕ : ಸಿಎಂ ಡಿ.ಕೆ.ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಕುರಿತು ಫಲಾನುಭವಿಗಳೊಂದಿಗೆ ಸಭೆ

ವಾರ್ತಾಭಾರತಿವಾರ್ತಾಭಾರತಿ6 Nov 2026 8:08 PM IST
share
ಅಧಿವೇಶನಕ್ಕೂ ಮೊದಲೇ ಸಂಪುಟಕ್ಕೆ ಮಹಿಳಾ ಸಚಿವರ ನೇಮಕ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ವಿಧಾನಮಂಡಲ ಅಧಿವೇಶನಕ್ಕೂ ಮೊದಲೇ ಮಹಿಳೆಯೊಬ್ಬರನ್ನು ಸಚಿವ ಸಂಪುಟದಲ್ಲಿ ಸಚಿವರನ್ನಾಗಿ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಫಲಾನುಭವಿಗಳೊಂದಿಗೆ ಸಭೆಯಲ್ಲಿ ಪ್ರಸ್ತಾಪಿಸಿದ ಅವರು, ಮಹಿಳೆಯೊಬ್ಬರು ಖಚಿತವಾಗಿ ಸಚಿವ ಸಂಪುಟ ಸೇರುತ್ತಾರೆ. ಈ ಪ್ರಕ್ರಿಯೆ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ವಿಧಾನಮಂಡಲ ಅಧಿವೇಶನಕ್ಕೂ ಮುಂಚೆಯ ನಡೆಯಲಿದೆ ಎಂದು ತಿಳಿಸಿದರು.

ಗೃಹಲಕ್ಷ್ಮೀ ದುರುಪಯೋಗ ತಡೆ: ಇತ್ತೀಚೆಗೆ ಗೃಹಜ್ಯೋತಿ ಯೋಜನೆಯ ಕುರಿತು ಸಮೀಕ್ಷೆ ನಡೆಸಲಾಯಿತು. ಈ ಸಂದರ್ಭದಲ್ಲಿ ಯೋಜನೆಯಲ್ಲೂ ದುರುಪಯೋಗ ಆಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಒಂದು ಲಕ್ಷಕ್ಕೂ ಹೆಚ್ಚು ಮೃತರ ಖಾತೆಗೆ ಹಣ ಹೋಗುತ್ತಿರುವುದು, ಇತರ ರಾಜ್ಯದ ಮಹಿಳೆಯರು ಈ ಸೌಲಭ್ಯದ ದುರುಪಯೋಗ ಪಡೆದಿರುವುದು ಗೊತ್ತಾಗಿದೆ. ಬಾಗಲಕೋಟೆಯ ಫಲಾನುಭವಿಯ ವಿವರ ಪರಿಶೀಲಿಸಿದಾಗ ಮೊಬೈಲ್ ಸಂಖ್ಯೆ ಒಂದು ಊರಿನದ್ದು, ಹಣ ಬೇರೆಯವರಿಗೆ ತಲುಪುತ್ತಿರುವ ವ್ಯತ್ಯಾಸಗಳು ಗಮನಕ್ಕೆ ಬಂದಿವೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ನಮೂನೆ ಸಿದ್ಧಪಡಿಸಲಾಗಿದೆ. ಆಗ ಮಹಿಳೆಯರು ತಮ್ಮದೇ ದೂರವಾಣಿ ಸಂಖ್ಯೆ ನಮೂದಿಸಬೇಕು ಎಂದು ಮನವಿ ಮಾಡಿದರು.

ಮೀಟರ್ ಬಡ್ಡಿ ಕಡಿವಾಣ: ಕೆಲವರು ಬೆಳಗ್ಗೆ ಮಾರುಕಟ್ಟೆಗೆ ಹೋಗುವಾಗ 2 ಸಾವಿರ ರೂಪಾಯಿ ಸಾಲ ಪಡೆದು, ಸಂಜೆ ಹಣ ಹಿಂದಿರುಗಿಸುವಾಗ ಶೇ.10 ರಷ್ಟು ನೀಡುವಂತಹ ಅತಿಯಾದ ಬಡ್ಡಿ ವ್ಯವಹಾರ ನಡೆಸುತ್ತಿದ್ದಾರೆ. ಶೇ.5-10 ರೂಪಾಯಿಗಳ ಲೆಕ್ಕದಲ್ಲಿ ಬಡ್ಡಿ ವಸೂಲಿ ಮಾಡುವ ಪದ್ಧತಿಯೂ ಇದೆ. ಇಂತಹ ವ್ಯವಹಾರಗಳಿಂದ ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದಲ್ಲದೆ, ಅಪರಾಧ ಪ್ರಕರಣಗಳೂ ಹೆಚ್ಚಾಗುತ್ತಿವೆ. ಆದರೆ, ಸಂತ್ರಸ್ತರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ, ಇಂತಹ ವ್ಯವಹಾರಗಳಿಗೆ ಒಳಗಾಗದಂತೆ ಜನರಿಗೆ ಎಚ್ಚರಿಕೆ ನೀಡುತ್ತಿದ್ದೇನೆ. ಅಗತ್ಯಬಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಚೀಟಿ ವ್ಯವಹಾರದಲ್ಲಿ ಹಲವು ಸಮಸ್ಯೆಗಳಿವೆ. ಕೊನೆಯಲ್ಲಿ ಹಣ ಕಟ್ಟಿದವರಿಗೆ ಹಣ ಸಿಗದೆ ಹೋಗುವ ಸಾಧ್ಯತೆಯಿದ್ದು, ನಂತರ ಕಾನೂನು ಸಮಸ್ಯೆಗಳು ಎದುರಾಗುತ್ತವೆ. ಹೀಗಾಗಿ, ಇಂತಹ ವ್ಯವಹಾರಗಳಿಂದ ದೂರವಿರುವಂತೆ ಜನರಿಗೆ ಎಚ್ಚರಿಕೆ ನೀಡುತ್ತಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಗೃಹಲಕ್ಷ್ಮಿಯರ ಸಂತಸದಲ್ಲಿ ನನ್ನ ಸಂತಸ, ಅವರ ಸಾಧನೆಯಲ್ಲಿ ಹೆಮ್ಮೆ

ಇಂದು ಗೃಹಕಚೇರಿ ಕೃಷ್ಣಾದಲ್ಲಿ ನಮ್ಮ ಸರ್ಕಾರದ ಹೆಮ್ಮೆಯ ಗೃಹಲಕ್ಷ್ಮಿ ಯೋಜನೆಯ ಆತ್ಮೀಯ ಫಲಾನುಭವಿ ತಾಯಂದಿರು ಮತ್ತು ಸಹೋದರಿಯರೊಂದಿಗೆ ಮುಕ್ತವಾಗಿ ಸಂವಾದ ನಡೆಸಿ, ಅವರ ಅನಿಸಿಕೆಗಳನ್ನು ಆಲಿಸಿದೆ.

ಈ ಸಂದರ್ಭದಲ್ಲಿ ನಮ್ಮ ಗೃಹಲಕ್ಷ್ಮಿಯರು ತಾವೇ ಸ್ವತಃ ಕೈಯಿಂದಲೇ ಪ್ರೀತಿಯಿಂದ ತಯಾರಿಸಿದ ಸಣ್ಣ ಆಟಿಕೆಯ ತೊಟ್ಟಿಲು ಹಾಗೂ ದೀಪವನ್ನು ನನಗೆ ಉಡುಗೊರೆಯಾಗಿ ನೀಡಿದಾಗ ಮನ ತುಂಬಿಬಂತು. ಅವರ ಪರಿಶ್ರಮ, ಆತ್ಮವಿಶ್ವಾಸ ಹಾಗೂ ಸ್ವಾವಲಂಬನೆಯ ಹಾದಿಯಲ್ಲಿನ ಪ್ರಯತ್ನಗಳನ್ನು ಕಂಡು ನನ್ನ ಮನಸ್ಸಿಗೆ ಸಂತೋಷವಾಯಿತು. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ, ತಮ್ಮದೇ ಆದ ಗುರುತನ್ನು ರೂಪಿಸಿಕೊಳ್ಳುತ್ತಿರುವುದು ಸಂತಸದ ಸಂಗತಿ.

ಸಂವಾದದ ಬಳಿಕ ದೀಪಾವಳಿ ಹಬ್ಬದ ಈ ಶುಭ ಸಂದರ್ಭದಲ್ಲಿ ಗೃಹಲಕ್ಷ್ಮಿಯರಿಗೆ ಗೌರವಪೂರ್ವಕವಾಗಿ ಬಾಗಿನ ನೀಡಿ, ಅವರೊಂದಿಗೆ ಕುಳಿತು ಭೋಜನ ಸವಿದೆ.

ಈ ವೇಳೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಶ್ರೀ ಎಚ್.ಎಂ. ರೇವಣ್ಣ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷ್ಯೆ ಶ್ರೀಮತಿ ಜಿ. ಪದ್ಮಾವತಿ, ನನ್ನ ಅಪರ ಮುಖ್ಯ ಕಾರ್ಯದರ್ಶಿ ಶ್ರೀ ತುಷಾರ್ ಗಿರಿನಾಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್, ಇಲಾಖೆಯ ನಿರ್ದೇಶಕ ಡಾ. ಮಹೇಶ್ ಬಾಬು ಮತ್ತಿತರರು ಉಪಸ್ಥಿತರಿದ್ದರು.

— DK Shivakumar (@DKShivakumar) November 6, 2026

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X