Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನ 2,000...

ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನ 2,000 ರೂ. ಹೆಚ್ಚಳ : ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

ತಲ್ಹತ್ ವಳಾಲ್ತಲ್ಹತ್ ವಳಾಲ್28 Nov 2026 6:15 PM IST
share
ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನ 2,000 ರೂ. ಹೆಚ್ಚಳ : ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

ಬೆಂಗಳೂರು: ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು 2,000 ರೂ. ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಆಶಾ ಕಾರ್ಯಕರ್ತೆಯರು ನಮ್ಮ ಆಸ್ತಿ. ಅವರ ಸೇವೆಯನ್ನು ಗೌರವಿಸಿ, ಅವರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರಕಾರ ನಿರ್ಧರಿಸಿದೆ. ಪ್ರಸ್ತುತ ಮಾಸಿಕ ಗೌರವಧನವನ್ನು 2,000 ರೂ. ಹೆಚ್ಚಿಸಲು ತೀರ್ಮಾನಿಸಲಾಗಿದ್ದು, ಈ ಹೆಚ್ಚಳವು ಜನವರಿ 1, 2027ರಿಂದ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ನನ್ನ ಮನವಿಗೆ ಸ್ಪಂದಿಸಿ ಹೋರಾಟವನ್ನು ಕೈಬಿಟ್ಟ ಆಶಾ ಸಹೋದರಿಯರಿಗೆ ಹೃದಯಪೂರ್ವಕ ಅಭಿನಂದನೆಗಳು. ಆಶಾ ಸಹೋದರಿಯರ ಕಷ್ಟಕ್ಕೆ ಸ್ಪಂದಿಸಿ, ಅವರ ಬದುಕಿನಲ್ಲಿ ಭರವಸೆಯ ಬೆಳಕು ಮೂಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

12 ದಿನಗಳ ಆಶಾ ಕಾರ್ಯಕರ್ತೆಯರ ಹೋರಾಟ ಅಂತ್ಯ :

ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 12 ದಿನಗಳಿಂದ ನಡೆಯುತ್ತಿದ್ದ ಆಶಾ ಕಾರ್ಯಕರ್ತೆಯರ ಹೋರಾಟ ಅಂತ್ಯಗೊಂಡಿದೆ. ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ ಗೌರವಧನಕ್ಕೆ ಹೆಚ್ಚುವರಿಯಾಗಿ 2 ಸಾವಿರ ರೂ. ನೀಡಲು ಸರಕಾರ ನಿರ್ಧರಿದೆ.

ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಆಶಾ ಕಾರ್ಯಕರ್ತೆಯರ ನಿಯೋಗದೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರೊಂದಿಗೆ ಆರೋಗ್ಯ ಸಚಿವ ಯು.ಟಿ.ಖಾದರ್ ಮಾತುಕತೆ ನಡೆಸಿದ್ದಾರೆ. ಮೂರು ವರ್ಷಗಳಿಂದ ಗೌರವಧನ ಹೆಚ್ಚಳ ಮಾಡಿಲ್ಲ ಎಂಬುವುದು ಆಶಾ ಕಾರ್ಯಕರ್ತೆಯರ ಅಳಲಾಗಿತ್ತು. ಈ ಹಿನ್ನೆಲೆಯಲ್ಲಿ ಸರಕಾರ ಗೌರವಧನ ಹೆಚ್ಚಳಕ್ಕೆ ಒಪ್ಪಿಕೊಂಡಿದೆ ಎಂದರು.

ಪ್ರಸ್ತುತ ರಾಜ್ಯ ಸರಕಾರ 5 ಸಾವಿರ ರೂ., ಕೆಂದ್ರ ಸರಕಾರ 2 ಸಾವಿರ ರೂ. ಗೌರವಧನ ನೀಡುತ್ತಿದ್ದು, ಕಾರ್ಯನಿರ್ವಹಣೆ ಆಧಾರದಲ್ಲಿ ಸರಾಸರಿ 2 ಸಾವಿರ ರೂ.ಗಳಷ್ಟು ಪ್ರೋತ್ಸಾಹ ಧನವನ್ನು ಪಡೆಯುತ್ತಿದ್ದಾರೆ. ಆಶಾ ಕಾರ್ಯಕರ್ತೆಯರ ಗೌರವಧನ ಕೇಂದ್ರ ಹಾಗೂ ರಾಜ್ಯ ಸರಕಾರ 50:50 ಅನುಪಾತದಲ್ಲಿ ಹಂಚಿಕೆ ಮಾಡಬೇಕಿದ್ದರೂ, ಕೇಂದ್ರ ಸರಕಾರ ತನ್ನ ಪಾಲಿನ ಅನುದಾನದಲ್ಲಿ ಹೆಚ್ಚಳ ಮಾಡಿಲ್ಲ. ಕೇಂದ್ರ ಸರಕಾರ ಸಹ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ನಾವು ಗ್ಯಾರಂಟಿ ಕೊಟ್ಟ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಿಗೂ ನೀಡಿದ್ದೇವೆ. ಈಗ ಬೆಲೆಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗೌರವ ಧನ ಹೆಚ್ಚಿಸಲು ಸರಕಾರ ತೀರ್ಮಾನಿಸಿದೆ. ಈ ನಿರ್ಧಾರವನ್ನು ಎಲ್ಲರೂ ಸಂತೋಷದಿಂದ ಒಪ್ಪಿಕೊಂಡಿದ್ದಾರೆ. ಆಶಾ ಕಾರ್ಯಕರ್ತೆಯರು ನಮ್ಮ ರಾಜ್ಯದ ಆಸ್ತಿ. ಅವರೆಲ್ಲರೂ ಹಳ್ಳಿ ಹಾಗೂ ನಗರಗಳಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದಾರೆ. ರಾಜ್ಯದ ಹಿತಕ್ಕೆ ಅವರ ಸೇವೆ ಮುಂದುವರೆಯಲಿದೆ ಎಂದು ಅವರು ನುಡಿದರು.

ಕೆಲವರು ಆಶಾ ಕಾರ್ಯಕರ್ತೆಯರ ಹೋರಾಟವನ್ನು ರಾಜಕಾರಣಕ್ಕೆ ಬಳಸಿಕೊಳ್ಳಲು ಪ್ರಯತ್ನಿಸಿದರೂ, ಅವರು ಬಗ್ಗಿಲ್ಲ. ಅವರ ಒಗ್ಗಟ್ಟು ಮುರಿಯಲು ಕೆಲವರು ಪ್ರಯತ್ನಿಸಿದರೂ, ಮುರಿಯಲು ಸಾಧ್ಯವಾಗಿಲ್ಲ. ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರೊಂದಿಗೆ ಗೌರವದಿಂದ ವರ್ತಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೆ. ಸರಕಾರ ಅವರಿಗೆ ಗೌರವ ನೀಡಿದೆ. ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎಂದು ಹೇಳಿದ್ದು, ಎಲ್ಲರೂ ಸಂತೋಷದಿಂದ ಒಪ್ಪಿಕೊಂಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಈ ವೇಳೆಯಲ್ಲಿ ಮುಖ್ಯಮಂತ್ರಿ ಪ್ರಧಾನ ಸಲಹೆಗಾರ ಜಿ.ಸಿ.ಚಂದ್ರಶೇಖರ್, ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳಾದ ಸೋಮಶೇಖರ್, ನಾಗಲಕ್ಷ್ಮಿ, ರಮಾ ಸೇರಿದಂತೆ ಹಲವರು ಇದ್ದರು.

Tags

CM D.K. ShivakumarHonorariumASHA Workers
share
ತಲ್ಹತ್ ವಳಾಲ್
ತಲ್ಹತ್ ವಳಾಲ್

ತಲ್ಹತ್ ವಳಾಲ್ ಅವರು ಮಂಗಳೂರು ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, 2023ರಿಂದ ವಾರ್ತಾಭಾರತಿ ಡಿಜಿಟಲ್‌ನಲ್ಲಿ ಉಪಸಂಪಾದಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Next Story
X