ಕೃತಜ್ಞತೆ ಸಮರ್ಪಣಾ ಪ್ರವಾಸ: ಝೀರೋ ಟ್ರಾಫಿಕ್ ತೊರೆದು ಮೆಟ್ರೋದಲ್ಲಿ ಪ್ರಯಾಣಿಸಲಿರುವ ಸಿಎಂ ಡಿ.ಕೆ. ಶಿವಕುಮಾರ್

ವಿಧಾನಸೌಧದಿಂದ ಕನಕಪುರ ರಸ್ತೆಯ ಕೊನೇ ಮೆಟ್ರೋ ಸ್ಟೇಷನ್ ವರೆಗೆ ಪ್ರಯಾಣ
ಬೆಂಗಳೂರು, ಜೂ.7: ಸಿಎಂ ಡಿ ಕೆ ಶಿವಕುಮಾರ್ ಅವರು ಜೂ 07 ರಂದು ಬೆಳಗ್ಗೆ 9.00 ಗಂಟೆಗೆ ವಿಧಾನಸೌಧದ ಎದುರಿನ ಮೆಟ್ರೋ ಸ್ಟೇಷನ್ ನಿಂದ ಕನಕಪುರ ರಸ್ತೆ ಕೊನೇ ಮೆಟ್ರೋ ಸ್ಟೇಷನ್ ವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಬೆಳೆಸಲಿದ್ದಾರೆ.
ಸಿಎಂ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ಮತ್ತು ಕನಕಪುರ ತಾಲೂಕಿನ ನಾನಾ ಕಡೆ ಜನರಿಗೆ ಕೃತಜ್ಞತೆ ಸಲ್ಲಿಸಲು ಭಾನುವಾರ ಬೆಳಗ್ಗೆ 10 ಗಂಟೆಯಿಂದ ರಾತ್ರಿ 9.00 ರವರೆಗೆ ಕೃತಜ್ಞತೆ ಸಮರ್ಪಣಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸದಾಶಿವನಗರ ನಿವಾಸದಿಂದ ಕನಕಪುರ ರಸ್ತೆವರೆಗೂ ಝೀರೋ ಟ್ರಾಫಿಕ್ ಬಳಸುವುದರಿಂದ ಜನರ ವಾಹನ ಸಂಚಾರಕ್ಕೆ ತೊಂದರೆ ಆಗುತ್ತದೆ ಎಂಬುದನ್ನು ಮನಗಂಡು ಸಿಎಂ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ.
Next Story




