Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರತಿಯೊಬ್ಬರೂ ಎನ್ಯುಮರೇಶನ್ ಅರ್ಜಿ...

ಪ್ರತಿಯೊಬ್ಬರೂ ಎನ್ಯುಮರೇಶನ್ ಅರ್ಜಿ ತುಂಬಿ, ಮತದಾನದ ಹಕ್ಕು ಉಳಿಸಿಕೊಳ್ಳಿ : ಸಿಎಂ ಡಿ.ಕೆ.ಶಿವಕುಮಾರ್ ಕರೆ

ವಾರ್ತಾಭಾರತಿವಾರ್ತಾಭಾರತಿ29 Jun 2026 10:59 PM IST
share
ಪ್ರತಿಯೊಬ್ಬರೂ ಎನ್ಯುಮರೇಶನ್ ಅರ್ಜಿ ತುಂಬಿ, ಮತದಾನದ ಹಕ್ಕು ಉಳಿಸಿಕೊಳ್ಳಿ : ಸಿಎಂ ಡಿ.ಕೆ.ಶಿವಕುಮಾರ್ ಕರೆ

ಬೆಂಗಳೂರು : ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ನಾಳೆಯಿಂದ ಆರಂಭವಾಗಲಿದ್ದು, ಪ್ರತಿಯೊಬ್ಬ ಮತದಾರರೂ ಬಿಎಲ್ಓಗಳು ನೀಡುವ ಎನ್ಯುಮರೇಶನ್ ಅರ್ಜಿ (ಗಣತಿ ನಮೂನೆ) ತುಂಬಿ, ಮತದಾನದ ಹಕ್ಕು ಉಳಿಸಿಕೊಳ್ಳಿ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು.

ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲ ಮತದಾರರು ತಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ನೋಂದಣಿ ಮಾಡಿಕೊಳ್ಳಬೇಕು. ಜೂ. 30ರಿಂದ ಜುಲೈ 29ರ ವರೆಗೆ ಚುನಾವಣಾ ಆಯೋಗದಿಂದ ನೇಮಕಗೊಂಡಿರುವ, ಬಿಎಲ್ಓಗಳು ನಿಮ್ಮ ಮನೆಗಳಿಗೆ ಬಂದು ಅರ್ಜಿ ನೀಡಲಿದ್ದಾರೆ. 30 ದಿನಗಳ ಅವಧಿಯಲ್ಲಿ ಕಡ್ಡಾಯವಾಗಿ ಈ ಎನ್ಯುಮರೇಷನ್ ಅರ್ಜಿ ತುಂಬಿ ಅಗತ್ಯ ದಾಖಲೆಗಳು ಹಾಗೂ ಹೊಸ ಫೋಟೋಗಳೊಂದಿಗೆ ಸಲ್ಲಿಕೆ ಮಾಡಬೇಕು. ಇದು ಮತದಾರರ ಕರ್ತವ್ಯವಾಗಿದೆ. ಈ ಅರ್ಜಿ ಸಲ್ಲಿಕೆ ಮಾಡದಿದ್ದರೆ, ಮತದಾನದ ಹಕ್ಕು ಕಳೆದುಕೊಳ್ಳುತ್ತೀರಿ ಎಂದು ಹೇಳಿದರು.

ಆಗಸ್ಟ್ 5ರಂದು ಕರಡು ಮತಪಟ್ಟಿ ಪ್ರಕಟಿಸಲಾಗುವುದು. ಬಿಎಲ್ಓಗಳು ಮೂರು ಬಾರಿ ನಿಮ್ಮ ಮನೆಗೆ ಬಂದು ಅರ್ಜಿ ನೀಡುತ್ತಾರೆ. ನೀವು ಅರ್ಜಿ ಸ್ವೀಕರಿಸಿ ಸಲ್ಲಿಸದಿದ್ದರೆ ಹಕ್ಕು ಕಳೆದುಕೊಳ್ಳುತ್ತೀರಿ ಎಂದು ಅವರು ಎಚ್ಚರಿಸಿದರು.

"ರಾಜಕೀಯ ಪಕ್ಷಗಳಿಂದ ನೇಮಕಗೊಂಡಿರುವ ಬಿಎಲ್ಎಗಳು ಕೂಡ ನಿಮಗೆ ಈ ಅರ್ಜಿ ಸಲ್ಲಿಕೆಯಲ್ಲಿ ನೆರವು ನೀಡಬಹುದು. ಸರ್ಕಾರ ಈಗಾಗಲೇ 5.50 ಕೋಟಿ ಜನರಿಗೆ ಈಗಾಗಲೇ ಜಾತಿ ಪ್ರಮಾಣಪತ್ರ ಅಧಿಕೃತವಾಗಿ ನೀಡಿರುವ ದಾಖಲೆ ನಮ್ಮ ಬಳಿ ಇದೆ. ಇದರಲ್ಲಿ 2,54,95,767 ಹಿಂದುಳಿದ ವರ್ಗದ ಪ್ರಮಾಣಪತ್ರ, 2,94,51,027 ಎಸ್ ಸಿ ಹಾಗೂ ಎಸ್ ಟಿ ಪ್ರಮಾಣಪತ್ರ ವಿತರಿಸಲಾಗಿದೆ. ಇವುಗಳನ್ನು ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶವಿದೆ ಎಂದು ವಿವರಿಸಿದರು.

ನಿಮ್ಮ ಎಪಿಕ್ ಕಾರ್ಡ್ ಸಂಖ್ಯೆ ಬಳಸಿ ಮಾಹಿತಿ ನೀಡಬಹುದು. ಈ ಸಂದರ್ಭದಲ್ಲಿ ಜನರು 11 ಮಾದರಿಯ ದಾಖಲೆಗಳನ್ನು ಸಲ್ಲಿಕೆ ಮಾಡಲು ಅವಕಾಶವಿದೆ. ಜನನ ಪ್ರಮಾಣಪತ್ರ, ಪಾಸ್ ಪೋರ್ಟ್, ಜಾತಿ ಪ್ರಮಾಣ ಪತ್ರ, ಅರಣ್ಯ ಹಕ್ಕು ಪತ್ರ, ಸರಕಾರದಿಂದ ವಸತಿ ಅಥವಾ ನಿವೇಶನ ಪಡೆದಿರುವ ದಾಖಲೆ, ಕೇಂದ್ರ ಸರ್ಕಾರದ ಪಿಂಚಣಿ ದಾಖಲೆಗಳನ್ನು ಗುರುತಿನ ಚೀಟಿಯಾಗಿ ಸಲ್ಲಿಕೆ ಮಾಡಬಹುದು ಎಂದು ಮಾಹಿತಿ ನೀಡಿದರು.

ಸಾರ್ವಜನಿಕರಿಗೆ ಕಂದಾಯ ಇಲಾಖೆ ವತಿಯಿಂದ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಉಪ ತಹಶೀಲ್ದಾರ್ ಅವರಿಗೆ ಅಧಿಕಾರ ನೀಡಿ ಆದೇಶ ಹೊರಡಿಸಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ಹಾಗೂ ವಾರ್ಡ್ ಗಳಲ್ಲಿ, ಸಹಾಯ ಕೇಂದ್ರ ವ್ಯವಸ್ಥೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಒಟ್ಟು 49,320 ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಅಗತ್ಯ ದಾಖಲೆ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗುತ್ತಿದೆ. ಯಾರೆಲ್ಲಾ ಜಾತಿ ಪ್ರಮಾಣ ಪತ್ರದಲ್ಲಿ ದೂರವಾಣಿ ಸಂಖ್ಯೆ ಸರಿಯಾಗಿ ನೀಡಿದ್ದೀರಿ ಅವರು ವಾಟ್ಸ್ ಅಪ್ ಮೂಲಕ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಅವರು ವಿವರಿಸಿದರು.

"5.50 ಕೋಟಿ ಜನರಿಗೆ ಮನೆ ಮನೆಗೆ ಹೋಗಿ ಸಹಾಯ ಮಾಡಲು ಸರಕಾರ ತೀರ್ಮಾನಿಸಿದೆ. ಪ್ರತಿಯೊಬ್ಬರಿಗೂ ಮತದಾನದ ಹಕ್ಕು ರಕ್ಷಿಸಿಕೊಳ್ಳಿ ಎಂದು ಜನರಲ್ಲಿ ಮನವಿ ಮಾಡುತ್ತೇನೆ. ಚುನಾವಣಾ ಆಯೋಗ ಈ ಬಗ್ಗೆ ಜಾಹೀರಾತು ನೀಡುತ್ತಿದೆ. ಸರ್ಕಾರ ಕೂಡ ಜನರಿಗೆ ಅಗತ್ಯ ಮಾಹಿತಿ ನೀಡಲು ತೀರ್ಮಾನಿಸಿದೆ" ಎಂದರು.

ಹಕ್ಕು ಕಳೆದುಕೊಂಡರೆ ಸೌಲಭ್ಯ ಪಡೆಯುವುದು ಕಷ್ಟ

ಮತದಾನದ ಹಕ್ಕು ಕಳೆದುಕೊಳ್ಳುವವರು ಮುಂದೆ ಸರ್ಕಾರದ ಸೌಲಭ್ಯ ಸಿಗುವುದಿಲ್ಲ. ಪಶ್ಚಿಮ ಬಂಗಾಳದಲ್ಲಿ ಪಡಿತರ ಹಂಚಿಕೆಯಲ್ಲಿ ಮತದಾರರಿಗೆ ಮಾತ್ರ ನೀಡಲಾಗುತ್ತಿದೆ. ಇದೇ ರೀತಿ ಬೇರೆ ರಾಜ್ಯಗಳಲ್ಲೂ ಆದೇಶ ಹೊರಡಿಸಲಾಗಿದೆ. ನೀವು ಮುಂದಿನ ದಿನಗಳಲ್ಲಿ ಮತದಾನದ ಹಕ್ಕು ಉಳಿಸಿಕೊಳ್ಳದಿದ್ದರೆ ಗ್ಯಾರಂಟಿ ಯೋಜನೆಗಳು ಸೇರಿದಂತೆ ಪಿಂಚಣಿ ಹಾಗೂ ರಾಜ್ಯ ಸರಕಾರದ ಇತರೆ ಯೋಜನೆಗಳು ಪಡೆಯಲು ತೊಂದರೆ ಆಗಲಿದೆ ಎಂದರು.

ಬದುಕಿನ ಹಕ್ಕು ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಎಲ್ಲ ಯೋಜನೆಗಳ ಫಲಾನುಭವಿಗಳ ಮಾಹಿತಿ ಪಡೆಯುವ ಪ್ರಕ್ರಿಯೆ ಸಧ್ಯದಲ್ಲೇ ಆರಂಭಿಸುತ್ತೇವೆ. ನಾವು ತಕ್ಷಣವೇ ಈ ಯೋಜನೆ ನಿಲ್ಲಿಸುವುದಿಲ್ಲ. ಮತದಾನದ ಹಕ್ಕು ನಿಮ್ಮ ಬದುಕಿನ ಹಕ್ಕು. ಹೀಗಾಗಿ ಅದನ್ನು ಉಳಿಸುವುದು ನಮ್ಮ ಗುರಿ. ಈಗ 18 ವರ್ಷ ತುಂಬಿರುವವರು ಚುನಾವಣಾ ಆಯೋಗದ ನಮೂನೆ 6 ಅನ್ನು ವಯೋಮಿತಿ ದೃಢೀಕರಣ ಪತ್ರ ಜೊತೆಗೆ ತುಂಬುವ ಮೂಲಕ ತಮ್ಮ ಮತದಾನದ ಹಕ್ಕು ಪಡೆಯಬಹುದು" ಎಂದರು.

Tags

CM D.K.Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X