Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಭ್ರಷ್ಟಾಚಾರ, ಡ್ರಗ್ಸ್, ಆರ್ಥಿಕ...

ಭ್ರಷ್ಟಾಚಾರ, ಡ್ರಗ್ಸ್, ಆರ್ಥಿಕ ಅಪರಾಧ-ದ್ವೇಷ ಭಾಷಣದ ವಿರುದ್ಧ ಶೂನ್ಯ ಸಹಿಷ್ಣುತೆ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ

ಅಮ್ಜದ್ ಖಾನ್ ಎಂ./ವಾರ್ತಾಭಾರತಿಅಮ್ಜದ್ ಖಾನ್ ಎಂ./ವಾರ್ತಾಭಾರತಿ20 Nov 2026 9:37 PM IST
share
ಭ್ರಷ್ಟಾಚಾರ, ಡ್ರಗ್ಸ್, ಆರ್ಥಿಕ ಅಪರಾಧ-ದ್ವೇಷ ಭಾಷಣದ ವಿರುದ್ಧ ಶೂನ್ಯ ಸಹಿಷ್ಣುತೆ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು : ಭ್ರಷ್ಟಾಚಾರ, ಡ್ರಗ್ಸ್, ಆರ್ಥಿಕ ಅಪರಾಧ ಹಾಗೂ ದ್ವೇಷ ಭಾಷಣದ ವಿರುದ್ಧ ಶೂನ್ಯ ಸಹಿಷ್ಣುತೆ ಇರಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು.

ಶುಕ್ರವಾರ ವಿಧಾನಸೌಧದಲ್ಲಿ ನವೀಕೃತ ಸಂಗಮ ಸಭಾಂಗಣವನ್ನು ಉದ್ಘಾಟಿಸಿದ ಬಳಿಕ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಭ್ರಷ್ಟಾಚಾರ , ಡ್ರಗ್ಸ್ ಮುಕ್ತ ಕರ್ನಾಟಕ ಹಾಗೂ ಜನಸ್ನೇಹಿ ಪೊಲೀಸ್ ವ್ಯವಸ್ಥೆ ನಿರ್ಮಿಸುವುದು ಸರಕಾರದ ಪ್ರಮುಖ ಗುರಿಗಳಾಗಿವೆ ಎಂದು ಹೇಳಿದರು.

ಬೆಂಗಳೂರಿನ ಆಡಳಿತ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ ಐದು ನಗರ ಪಾಲಿಕೆಗಳನ್ನು ರಚಿಸಿದ ಮಾದರಿಯಲ್ಲೇ, ಪೊಲೀಸ್ ಆಡಳಿತವನ್ನೂ ಐದು ಪೊಲೀಸ್ ಕಮಿಷನರೇಟ್‍ಗಳಾಗಿ ವಿಭಜಿಸಿ, ಐವರು ಪೆಪೊಲೀಸ್ ಆಯುಕ್ತರನ್ನು ನೇಮಕ ಮಾಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಬೆಂಗಳೂರಿನ ಜನಸಂಖ್ಯೆ ಸುಮಾರು ಒಂದೂವರೆ ಕೋಟಿಗೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸುವ ಅಗತ್ಯವಿದೆ. ಈ ಉದ್ದೇಶದಿಂದ ಕೆಲವು ಹೊಸ ಪ್ರದೇಶಗಳು ಹಾಗೂ ಪೊಲೀಸ್ ಠಾಣೆಗಳನ್ನು ಸೇರ್ಪಡೆಗೊಳಿಸಿ, ನೂರಾರು ಹೊಸ ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಇದರಿಂದ ಸಾರ್ವಜನಿಕರಿಗೆ ಉತ್ತಮ ಪೊಲೀಸ್ ಸೇವೆ ಮತ್ತು ತ್ವರಿತ ರಕ್ಷಣೆ ಒದಗಿಸಲು ಸಾಧ್ಯವಾಗಲಿದೆ ಎಂದು ಅವರು ಹೇಳಿದರು.

ಸಂಚಾರ ದಟ್ಟಣೆ, ಅಪರಾಧ ಚಟುವಟಿಕೆಗಳು, ಆರ್ಥಿಕ ಅಪರಾಧಗಳು, ಸಾಮಾಜಿಕ ಜಾಲತಾಣಗಳಲ್ಲಿನ ದ್ವೇಷ ಭಾಷಣ ಸೇರಿದಂತೆ ಎಲ್ಲ ರೀತಿಯ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದರು.

ಸಾರ್ವಜನಿಕರಿಗೆ ಪೊಲೀಸರ ಬಗ್ಗೆ ಗೌರವ ಮತ್ತು ವಿಶ್ವಾಸ ಮೂಡಬೇಕು. ಅಪರಾಧ ಎಸಗುವವರಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆಯಾಗಬೇಕು.ಪೊಲೀಸ್ ಠಾಣೆಗಳು ರಿಯಲ್ ಎಸ್ಟೇಟ್ ವ್ಯವಹಾರ ಅಥವಾ ಇತರ ಅಕ್ರಮ ಚಟುವಟಿಕೆಗಳ ಕೇಂದ್ರಗಳಾಗಲು ಅವಕಾಶ ನೀಡಬಾರದು. ಭ್ರಷ್ಟಾ ಚಾರಕ್ಕೆ ಯಾವುದೇ ಹಂತದಲ್ಲೂ ಅವಕಾಶವಿರಬಾರದು. ವಿಶೇಷವಾಗಿ ಸಂಚಾರ ವಿಭಾಗದಲ್ಲಿಯೂ ಶೂನ್ಯ ಸಹಿಷ್ಣುತೆಯ ನೀತಿ ಅನುಸರಿಸಬೇಕು ಎಂದು ಮುಖ್ಯಮಂತ್ರಿ ನಿರ್ದೇಶನ ನೀಡಿದರು.

ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿಸುವ ಸರಕಾರದ ಸಂಕಲ್ಪವನ್ನು ಪೊಲೀಸ್ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಪೊಲೀಸ್ ಇಲಾಖೆಯ ವಿವಿಧ ಹಂತಗಳಲ್ಲಿ ಶಿಸ್ತು, ಸಮನ್ವಯ ಮತ್ತು ಜವಾಬ್ದಾರಿಯುತ ಕಾರ್ಯನಿರ್ವಹಣೆ ಇರಬೇಕು. ಅಧಿಕಾರಿಗಳ ನಡುವೆ ಆಂತರಿಕ ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡದೆ, ತಂಡವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಮಾರ್ಗದರ್ಶನ ನೀಡಿದರು.

ಇತ್ತೀಚೆಗೆ ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಬರೆದಿದ್ದು, ಪೊಲೀಸ್ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಶಾಂತಿ ಕಾಪಾಡುವುದು ಆದ್ಯತೆ: ರಾಜ್ಯದಲ್ಲಿ ಜಾತಿ-ಜಾತಿಗಳ ನಡುವೆ ಹಾಗೂ ಧಾರ್ಮಿಕ ವಿಚಾರಗಳಲ್ಲಿ ಸಂಘರ್ಷ ಸೃಷ್ಟಿಸುವ ಪ್ರಯತ್ನಗಳನ್ನು ಸರಕಾರ ಸಹಿಸುವುದಿಲ್ಲ. ಬಸವಣ್ಣನವರ ವಿಚಾರ ಸೇರಿದಂತೆ ಸೂಕ್ಷ್ಮ ವಿಷಯಗಳನ್ನು ಬಳಸಿಕೊಂಡು ಸಮಾಜದಲ್ಲಿ ಅಶಾಂತಿ ಉಂಟುಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ಸರಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ಸಭೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್, ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಾರಿಗೆ ಸಚಿವ ಭೈರತಿ ಸುರೇಶ್, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಬೆಂಗಳೂರು ನಗರ ಮುಖ್ಯ ಪೊಲೀಸ್ ಆಯುಕ್ತ ಆರ್.ಹಿತೇಂದ್ರ, ಐವರು ಪೊಲೀಸ್ ಆಯುಕ್ತರಾದ ಡಾ.ಪಿ.ಎಸ್.ಹರ್ಷ, ವಿಕಾಶ್ ಕುಮಾರ್ ವಿಕಾಶ್, ಡಾ.ಎಂ.ಬಿ. ಬೋರಲಿಂಗಯ್ಯ, ಸಿ.ವಂಶಿಕೃಷ್ಣ, ಲಾಬೂ ರಾಮ್, ರೌಡಿ ನಿಗ್ರಹ ಪಡೆಯ ಆಯುಕ್ತ ಹೇಮಂತ್ ಎಂ.ನಿಂಬಾಳ್ಕರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.

Tags

police officers
share
ಅಮ್ಜದ್ ಖಾನ್ ಎಂ./ವಾರ್ತಾಭಾರತಿ
ಅಮ್ಜದ್ ಖಾನ್ ಎಂ./ವಾರ್ತಾಭಾರತಿ

ಅಮ್ಜದ್ ಖಾನ್ ಎಂ. ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದು, 2007ರಿಂದ ವಾರ್ತಾಭಾರತಿ ಕನ್ನಡ ದೈನಿಕ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವಾಸಿ ಅನುಭವದ ವಿಶೇಷ ಲೇಖನಗಳನ್ನು ಬರೆಯುವುದು, ಪುಸ್ತಕ ಓದುವುದು‌, ಸಾಮಾಜಿಕ ಸೇವಾ ಕಾರ್ಯಗಳು ಇವರ ಹವ್ಯಾಸವಾಗಿವೆ.

Next Story
X