Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಮ್ಮ ಜನ ಸಂಸ್ಕೃತಿಗಳನ್ನು ಚೆನ್ನಾಗಿ...

ನಮ್ಮ ಜನ ಸಂಸ್ಕೃತಿಗಳನ್ನು ಚೆನ್ನಾಗಿ ಅರಿತರೆ ಮಾತ್ರ ದೇಶದ ಭವಿಷ್ಯ, ಸಂಸ್ಕೃತಿ ರೂಪಿಸಲು ಸಾಧ್ಯ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ2 March 2024 11:31 PM IST
share
ನಮ್ಮ ಜನ ಸಂಸ್ಕೃತಿಗಳನ್ನು ಚೆನ್ನಾಗಿ ಅರಿತರೆ ಮಾತ್ರ ದೇಶದ ಭವಿಷ್ಯ, ಸಂಸ್ಕೃತಿ ರೂಪಿಸಲು ಸಾಧ್ಯ: ಸಿಎಂ ಸಿದ್ದರಾಮಯ್ಯ

ಕನಕಗಿರಿ: ಶ್ರೇಷ್ಠತೆಯ ವ್ಯಸನದಿಂದ 58 ಲಕ್ಷ ಯಹೂದಿಗಳನ್ನು ಹತ್ಯೆ ಮಾಡಿದ ಹಿಟ್ಲರ್ ಕೊನೆಗೆ ಒಬ್ಬ ಹೇಡಿಯಂತೆ ಗುಂಡು ಹಾರಿಸಿಕೊಂಡು ಸತ್ತ. ಇಂತಹ ಪರಿಸ್ಥಿತಿ ನಮ್ಮ ದೇಶದಲ್ಲಿ ಬರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವವನ್ನು ಭವ್ಯವಾದ "ರಾಜಾ ಉಡಚಪ್ಪ ನಾಯಕ" ವೇದಿಕೆಯಲ್ಲಿ‌ ಉದ್ಘಾಟಿಸಿ ಮಾತನಾಡಿದರು.

ಇಲ್ಲಿ ಶ್ರೇಷ್ಠರು, ಕನಿಷ್ಠರು ಇಲ್ಲವೇ ಇಲ್ಲ. ತಮ್ಮನ್ನು ತಾವು ಶ್ರೇಷ್ಠರು ಎನ್ನುವವರು, ಮತ್ತೊಬ್ಬರನ್ನು ಕನಿಷ್ಠರು ಎನ್ನುವವರು ಮನುಷ್ಯರೇ ಅಲ್ಲ. ಈ ರೀತಿಯ ಶ್ರೇಷ್ಠತೆಯ ವ್ಯಸನವನ್ನು ಹೋಗಲಾಡಿಸಲು ಬಸವಣ್ಣ, ಅಂಬೇಡ್ಕರ್ ಹೋರಾಟ ಮಾಡಿದರು ಎಂದು ವಿವರಿಸಿದರು.‌

ಸಮಾಜದಲ್ಲಿ ಅಸಮಾನತೆ ಇದೆ. ಇದನ್ನು ಹೋಗಲಾಡಿಸಲು ಏನಾದ್ರೂ ಪ್ರಯತ್ನ ಮಾಡಿದ್ವಾ ಎನ್ನುವ ಕುರಿತು ಪ್ರತಿಯೊಬ್ಬರೂ ತಮ್ಮನ್ನು ಪ್ರಶ್ನಿಸಿಕೊಳ್ಳಬೇಕು ಎಂದರು.

ಚತುವರ್ಣ ವ್ಯವಸ್ಥೆ ರೂಪಿಸಿ ಒಬ್ಬರನ್ನು ಶ್ರೇಷ್ಠರು ಉಳಿದವರನ್ನು ಕನಿಷ್ಠರು ಎನ್ನುವ ವ್ಯವಸ್ಥೆ ರೂಪಿಸಿದರು. ಇದನ್ನೇ ಹಿಟ್ಲರ್ ಮತ್ತು ಮುಸಲೋನಿ ಜರ್ಮನಿಯಲ್ಲಿ ಮಾಡಿದ್ದು. ಕೊನೆಗೆ ಅವರಿಗೆ ಯಾವ ಗತಿ ಆಯ್ತು ಎಂದು ಇಡೀ ಮನುಕುಲ ನೋಡಿದೆ ಎಂದರು.

ನಾವು ಅಂಬೇಡ್ಕರ್, ಬುದ್ದ, ಬಸವ, ಕುವೆಂಪು ಮುಂತಾದವರ ವಿಚಾರಗಳನ್ನು ಹೆಚ್ಚೆಚ್ಚು ಪಾಲಿಸುತ್ತಾ ತಾರತಮ್ಯದ ಸಮಾಜವನ್ನು ಹೋಗಲಾಡಿಸಬೇಕು. ಶಿಕ್ಷಣದಿಂದ ವಂಚಿತರಾಗಿದ್ದ ಮಹಿಳೆಯರು, ಶೂದ್ರರಿಗೆ ಶಿಕ್ಷಣ ಸಿಕ್ಕಿದ್ದು ಇವರೆಲ್ಲಾ ಮಹನೀಯರ ಹೋರಾಟದಿಂದ.

ಈ ಚರಿತ್ರೆಯನ್ನು ನೆನಪಿಸುವುದಕ್ಕೇ ವಿಶ್ವ ವಿದ್ಯಾಲಯಕ್ಕೆ ಅಕ್ಕಮಹದೇವಿ ಹೆಸರು ಇಟ್ಟೆ. ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದೆ ಎನ್ನುತ್ತಾ ಸಮಾನತೆಯ ಹಾದಿಯಲ್ಲಿ ಸರ್ಕಾರ ಜಾರಿಗೆ ತಂದ ಹಲವು ಭಾಗ್ಯಗಳನ್ನು ವಿವರಿಸಿದರು.

ಮುಂದಿನ ವರ್ಷ ಕನಕಗಿರಿ ಅಭಿವೃದ್ಧಿ ಪ್ರಾಧಿಕಾರ ರಚನೆ: ಸಿಎಂ ಮಹತ್ವದ ಘೋಷಣೆ

ಮುಂದಿನ ವರ್ಷ ಕನಕಗಿರಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು ಎಂದು ಸಿಎಂ ಮಹತ್ವದ ಘೋಷಣೆ ಮಾಡಿದರು. ಕನಕಗಿರಿ ಉತ್ಸವವನ್ನು ನಿರಂತರವಾಗಿ ನಡೆಸಲು, ಕನಕಗಿರಿಯ ಸರ್ವತೋಮುಖ ಅಭಿವೃದ್ಧಿಗೆ ನಾನು ಮತ್ತು ನಮ್ಮ ಸರ್ಕಾರ ಸದಾ ಬದ್ದವಾಗಿದೆ.

ಸರ್ವೋದಯ, ಸರ್ವದರ್ಮ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಈ ದಿಕ್ಕಿನಲ್ಲೇ ನಮ್ಮ ಸರ್ಕಾರ ಮುನ್ನಡೆಯಲಿದೆ. ಕೊಪ್ಪಳ ನನ್ನದೇ ಕ್ಷೇತ್ರ. ಈ ಜಿಲ್ಲೆಯ ಜನರ ಪ್ರೀತಿಗೆ ನಾನು ಸದಾ ಋಣಿ ಎಂದು ಕೃತಜ್ಞತೆ ಸಲ್ಲಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರೂ, ಕೊಪ್ಪಳ ಜಿಲ್ಲಾ ಸಚಿವರಾದ ಶಿವರಾಜ್ ತಂಗಡಗಿ ಸಂಗಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ರಾಯರೆಡ್ಡಿ, ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಜನಾರ್ಧನರೆಡ್ಡಿ, ದೊಡ್ಡನಗೌಡ ಪಾಟೀಲ್, ಇಕ್ಬಾಲ್ ಅನ್ಸಾರಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X