Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಫರ್ಧೆ...

ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಫರ್ಧೆ ನಡೆಸುವಂತೆ ಶಿಕ್ಷಣ ಸಚಿವರಿಗೆ ಸಿಎಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ23 Jan 2024 12:23 PM IST
share
ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಫರ್ಧೆ ನಡೆಸುವಂತೆ ಶಿಕ್ಷಣ ಸಚಿವರಿಗೆ ಸಿಎಂ ಸೂಚನೆ

ಬೆಂಗಳೂರು: ಆರನೇ ತರಗತಿಯಿಂದ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ "21ನೇ ಶತಮಾನದ ಆತಂಕಗಳು ಮತ್ತು ಗಾಂಧೀಜಿಯವರ ವಿಚಾರಗಳು ಪ್ರತಿಪಾದಿಸುವ ಪರಿಹಾರಗಳು" ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆ ನಡೆಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಸೆಸೆಲ್ಸಿ ಮತ್ತು ಪಿ.ಯು.ಸಿ ಮಕ್ಕಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳು ಸೇರಿದಂತೆ ಕಾಲೇಜು- ವಿಶ್ವವಿದ್ಯಾಲಯಗಳ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳಿಗೆ ಈ ತಿಂಗಳ ಅಂತ್ಯದೊಳಗೆ ಸ್ಪರ್ಧೆಗಳನ್ನು ನಡೆಸಲು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಪತ್ರದಲ್ಲಿ ತಿಳಿಸಿದ್ದಾರೆ.

ಗಾಂಧೀಜಿಯವರು ತಮ್ಮ ಜೀವಿತಾವಧಿಯುದ್ದಕ್ಕೂ ಶಾಂತಿ, ಅಹಿಂಸೆ, ಸತ್ಯ, ವಿಕೇಂದ್ರೀಕರಣ, ಸಾಮಾಜಿಕ ನ್ಯಾಯ ಮುಂತಾದ ಜೀವಪರ ನಿಲುವುಗಳನ್ನು ಆಚರಿಸಿ ಪ್ರತಿಪಾದಿಸಿದ್ದರು. ಅದೇ ಸಂದರ್ಭದಲ್ಲಿ ದೇಶದ ವೈವಿಧ್ಯತೆ ಹಾಗೂ ಎಲ್ಲರನ್ನೂ ಒಳಗೊಂಡು ಬಾಳುವ ಅನಿವಾರ್ಯತೆಯನ್ನು ಪ್ರತಿಪಾದಿಸಿದ್ದರು. ಇಂಥ ಮಹಾನ್ ವ್ಯಕ್ತಿಯನ್ನು ಕೆಲವು ದುರುಳರು ಪಿತೂರಿ ಮಾಡಿ ಹತ್ಯೆ ಮಾಡಿದರು.

ಗಾಂಧೀಜಿಯವರ ಹತ್ಯೆಯ ನಂತರವೂ ದೇಶ ನಿರಂತರವಾಗಿ ಅವರ ಆದರ್ಶಗಳನ್ನು ಸಾಧ್ಯವಾದ ಮಟ್ಟಿಗೆ ಅನುಷ್ಠಾನ ಮಾಡಿಕೊಂಡೇ ಬಂದಿದೆ. ಆದರೆ ಇತ್ತೀಚಿಗೆ ದ್ವೇಷ-ಹಿಂಸೆಯನ್ನು ಪ್ರತಿಪಾದಿಸುವ. ವಿಕೇಂದ್ರೀಕರಣವನ್ನು ದಮನಿಸಿ ಕೇಂದ್ರೀಕರಣಕ್ಕೆ ಒತ್ತು ನೀಡುವ, ದೀನ-ದಲಿತ, ಮಹಿಳೆ, ಆದಿವಾಸಿ, ರೈತ, ಕಾರ್ಮಿಕ ಮತ್ತು ಯುವಜನರ ಹಕ್ಕುಗಳನ್ನು ಕಿತ್ತುಕೊಳ್ಳುವ ಪ್ರವೃತ್ತಿಯುಳ್ಳ ಶಕ್ತಿಗಳು ಕ್ರಿಯಾಶೀಲವಾಗುತ್ತಿವೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿಯವರ ವಿರುದ್ಧ, ಸ್ವಾತಂತ್ರ್ಯ ಹೋರಾಟದಲ್ಲಿ ಎಂದೂ ಭಾಗವಹಿಸದ ಶಕ್ತಿಗಳು ಪ್ರವರ್ಧಮಾನಕ್ಕೆ ಬರಲು ಪ್ರಯತ್ನಿಸುತ್ತಿವೆ.

ಇಂದು ಜಾಗತಿಕ ಪರಿಸರದ ಬಿಕ್ಕಟ್ಟುಗಳು, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಹಿಂಸಾ ವಿನೋದ ಮುಂತಾದವುಗಳಿಂದಾಗಿ ಮನುಷ್ಯರು ಈ ಭೂಮಿಯ ಮೇಲಿಂದಲೆ ಅಳಿಸಿ ಹೋಗುವ ದುಸ್ಥಿತಿಗೆ ತಲುಪಿಯಾಗಿದೆ ಎಂದು ಸ್ಟೀಫನ್ ಹಾಕಿಂಗ್ ಮುಂತಾದ ವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ ದೊಡ್ಡ ಭಾಷೆಗಳು ಸಣ್ಣ ಸಣ್ಣ ಭಾಷೆಗಳನ್ನು ನುಂಗಿ ಹಾಕುತ್ತಿವೆ. ಯಾವುದೇ ಸಮಾಜ ಅಥವಾ ಸಮುದಾಯಗಳು ತಮ್ಮ ಭಾಷೆಗಳನ್ನು ಕಳೆದುಕೊಳ್ಳುವುದೆಂದರೆ ತಮ್ಮ ಅಸ್ತಿತ್ವವನ್ನೇ ಕಳೆದುಕೊಳ್ಳುವುದು ಎಂದರ್ಥ ಎಂಬುದು ಈಗಾಗಲೇ ಸಾಬೀತಾದ ವಿಚಾರವಾಗಿದೆ.

ಆದರೆ ಗಾಂಧೀಜಿಯವರ ಚಿಂತನೆಗಳಲ್ಲಿ ಬಹುತೇಕ ಸಮಸ್ಯೆಗಳಿಗೆ ಪರಿಹಾರವಿದೆ. ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಗಾಂಧೀಜಿಯವರನ್ನು ಅರಿತುಕೊಳ್ಳಲು ಅವಕಾಶ ಒದಗಿಸಿದಂತಾಗುತ್ತದೆ. ಸ್ಪರ್ಧೆಯಲ್ಲಿ ವಿಜೇತರಾದ ಪ್ರತಿ ತರಗತಿಯ ಮಕ್ಕಳಿಗೆ ಸೂಕ್ತ ಬಹುಮಾನವನ್ನು ನೀಡುವುದು, ಉಳಿದವರ ಭಾಗವಹಿಸುವಿಕೆಗಾಗಿ ಪ್ರಶಂಸನಾ ಪತ್ರಗಳನ್ನು ನೀಡಲು ಕ್ರಮವಹಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ಸಚಿವರಿಗೆ ಬರೆದ ಪತ್ರದಲ್ಲಿ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X