Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ...

ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು : ಅಧಿಕಾರಿಗಳಿಗೆ ಸಿಎಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ10 May 2025 8:10 PM IST
share
ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು : ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು : ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು. ಅನಿವಾರ್ಯವಾದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಸೂಚನೆ ನೀಡಿದ್ದಾರೆ.

ಶನಿವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ನಾಗರಿಕರ ರಕ್ಷಣಾ ಕಾರ್ಯ ಚಟುವಟಿಕೆಗಳ ಕುರಿತು ಪರಾಮರ್ಶಿಸಲು ಹಿರಿಯ ಪೊಲೀಸ್ ಅಧಿಕಾರಿಗಳು, ಎಲ್ಲ ಮಹಾನಗರಗಳ ಪೊಲೀಸ್ ಆಯುಕ್ತರು, ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಅವರು ವಿಡಿಯೋ ಸಂವಾದ ನಡೆಸಿದರು.

ರಾಜ್ಯದ ಕಾನೂನು ಸುವ್ಯವಸ್ಥೆಗಿಂತ ಯಾವುದೂ ದೊಡ್ಡದಲ್ಲ. ರಾಜ್ಯದ ಜನರ ರಕ್ಷಣೆಗೆ ಮೊದಲ ಆದ್ಯತೆ ನೀಡಿ. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ವರದಿ ನೀಡುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಪ್ರಮುಖ ಸ್ಥಳಗಳಲ್ಲಿ ಮಾಕ್ ಡ್ರಿಲ್ ಮಾಡಲು ಸೂಚನೆ ನೀಡಿದ ಮುಖ್ಯಮಂತ್ರಿ, ಅಕ್ರಮ ದಾಸ್ತಾನು ಮತ್ತು ಕಾಳಸಂತೆಯ ಮೇಲೆ ನಿರಂತರ ನಿಗಾವಹಿಸಿ, ಅನಗತ್ಯವಾಗಿ ಸಾಮಾಗ್ರಿಗಳ ಬೆಲೆ ಹೆಚ್ಚು ಮಾಡುವ ಪ್ರಯತ್ನಗಳನ್ನು ತಡೆಯುವಂತೆಯೂ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಿಳಿಸಿದರು.

ಕಾನೂನು ಸುವ್ಯವಸ್ಥೆಯೊಂದಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿರಬೇಕು. ಈ ಕುರಿತು ರಾಜ್ಯ ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಮಾರ್ಗಸೂಚಿಯನ್ನು ಸಿದ್ಧಪಡಿಸಬೇಕು. ರಾಷ್ಟ್ರೀಯ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆಯನ್ನು ಕಾಪಾಡಲು ಮುಖ್ಯಮಂತ್ರಿ ಸೂಚನೆ ನೀಡಿದರು.

ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು. ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ ವಹಿಸಬೇಕು. ವದಂತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಫ್ಯಾಕ್ಟ್ ಚೆಕ್ ನಿರಂತರವಾಗಿ ಮಾಡಬೇಕು. ಸುಳ್ಳು ಸುದ್ದಿ ಬಗ್ಗೆ ಮೂಲದಲ್ಲೇ ಅಧಿಕೃತ ಸ್ಪಷ್ಟೀಕರಣ ನೀಡಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಗುಪ್ತಚರ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು. ಸಾರ್ವಜನಿಕ ಸೇವೆ ಒದಗಿಸುವ ತಾಣಗಳಲ್ಲಿ ಹೆಚ್ಚಿನ ಸುರಕ್ಷತೆಯನ್ನು ಖಾತ್ರಿಪಡಿಸಬೇಕು. ಅಗ್ನಿಶಾಮಕ ದಳದ ಕೇಂದ್ರಗಳು ದಿನದ 24 ಗಂಟೆ ಸನ್ನದ್ಧ ಸ್ಥಿತಿಯಲ್ಲಿರಬೇಕು. ಎಲ್ಲ ಜಿಲ್ಲೆಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆದು, ಸಹಾಯವಾಣಿ ಆರಂಭಿಸಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

ಪೌರ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಿ, ಅವರಿಗೆ ಸೂಕ್ತ ತರಬೇತಿಯನ್ನು ಒದಗಿಸಬೇಕು. ಎಲ್ಲ ಜಿಲ್ಲೆಗಳಲ್ಲಿ ಪೌರ ರಕ್ಷಣಾ ವ್ಯವಸ್ಥೆಗೆ ಸ್ವಯಂಸೇವಕರನ್ನು ನೇಮಕ ಮಾಡುವ ಕಾರ್ಯ ಆರಂಭಿಸಬೇಕು. ಆನ್‍ಲೈನ್‍ನಲ್ಲಿ ಹೆಸರು ನೋಂದಾಯಿಸಲು ವ್ಯವಸ್ಥೆ ಕಲ್ಪಿಸಬೇಕು. ಸುರಕ್ಷತೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಚ್.ಎಂ.ರೇವಣ್ಣ, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕರಾವಳಿಯಲ್ಲಿ ಭದ್ರತೆ ಬಿಗಿಗೊಳಿಸಿ : ಪೊಲೀಸ್ ಅಧಿಕಾರಿಗಳಿಗೆ ಸೂಚನೆ

‘ಕರಾವಳಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಬೇಕು. ಎಲ್ಲ ಪ್ರಮುಖ ಸ್ಥಳಗಳಲ್ಲಿ ನಿರಂತರ ಗಸ್ತು ವ್ಯವಸ್ಥೆ ಮಾಡಬೇಕು. ದೇಶದ, ರಾಜ್ಯದ ಸಹಭಾಳ್ವೆಗೆ ಧಕ್ಕೆ ತರುವ, ಕೋಮುಭಾವನೆ ಕೆರಳಿಸಿ, ಕೋಮು ವಿಭಜನೆ ತರಲು ಷಡ್ಯಂತ್ರ ನಡೆಸುವವರ ಪಟ್ಟಿ ಸಿದ್ದಪಡಿಸಿ ಕಾನೂನು ಕ್ರಮಕ್ಕೆ ಒಳಪಡಿಸಲು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕ್ರಮ ವಹಿಸಬೇಕು. ಕೋಮು ಸಾಮರಸ್ಯ ಕದಡುವ ಪ್ರಯತ್ನಗಳ ಮೇಲೆ ನಿಗಾ ಇರಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕೋಮು ಗೂಂಡಾಗಳ ಪಟ್ಟಿಯನ್ನು ಅಪ್‍ಡೇಟ್ ಮಾಡಿ, ಅವರ ಮೇಲೆ ನಿಗಾ ಇಡಬೇಕು’

-ಸಿದ್ದರಾಮಯ್ಯ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X