ವಾರ್ತಾಭಾರತಿ ಪ್ರಕಟಿಸಿದ 'ಸ್ವಾವಲಂಬಿ ಬದುಕು ಕೊಟ್ಟ ಗ್ಯಾರಂಟಿ ಸರಕಾರ' ಪುಸ್ತಕ ಲೋಕಾರ್ಪಣೆಗೊಳಿಸಿದ ಸಿಎಂ
ಪತ್ರಿಕಾ ತಂಡದ ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಬೆಂಗಳೂರು: ವಾರ್ತಾಭಾರತಿ ಪತ್ರಿಕೆಯ 'ಸ್ವಾವಲಂಬಿ ಬದುಕು ಕೊಟ್ಟ ಗ್ಯಾರಂಟಿ ಸರಕಾರ' ಎಂಬ ಕಿರು ಪುಸ್ತಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಕಾವೇರಿ ನಿವಾಸದಲ್ಲಿ ಲೋಕಾರ್ಪಣೆಗೊಳಿಸಿದರು.
ವಾರ್ತಾಭಾರತಿ ಪತ್ರಿಕೆ ರಾಜ್ಯದ ಉದ್ದಗಲಗಳಿಂದ, ಸರಕಾರದ ಗ್ಯಾರಂಟಿ ಯೋಜನೆಗಳ ಕುರಿತಾಗಿ ರಾಜ್ಯದ ಬಡವರು, ಮಧ್ಯಮ ವರ್ಗದವರು ಹಾಗೂ ಶ್ರಮಿಕ ಸಮುದಾಯದ ಅಭಿಪ್ರಾಯಗಳನ್ನು ಸಂಗ್ರಹಿಸಿ ಅದರ ಮಾಹಿತಿಗಳನ್ನು ಈ ಪುಸ್ತಕದಲ್ಲಿ ದಾಖಲಿಸಿದೆ.
ಈ ಸಂದರ್ಭದಲ್ಲಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಝಮೀರ್ ಅಹ್ಮದ್ ಖಾನ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾಭಾರತಿ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ, ನಿರ್ದೇಶಕ ಅಲಿ, ಬೆಂಗಳೂರು ಬ್ಯೂರೋ ಮುಖ್ಯಸ್ಥ ಸಿ.ಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Next Story





