Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು...

ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ

►"ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ʼಮೋದಿ ಗ್ಯಾರಂಟಿʼ ಎಂದು ಹೆಸರಿಟ್ಟಿದ್ದಾರೆ" ►"ನಾವು ಬಿಜೆಪಿಯವರಂತೆ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ, ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ"

ವಾರ್ತಾಭಾರತಿವಾರ್ತಾಭಾರತಿ23 March 2024 5:05 PM IST
share
ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ, ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ, ಜಿಲ್ಲೆ, ತಾಲ್ಲೂಕು ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಮಾವೇಶದಲ್ಲಿ ಅವರು ಮಾತನಾಡಿದರು.

"ಅಚ್ಛೆ ದಿನ್ ಬಂತಾ?, ರೈತರ ಆದಾಯ ದುಪ್ಪಟ್ಟು ಮಾಡಿದ್ರಾ?, ಡೀಸೆಲ್-ಪೆಟ್ರೋಲ್-ಗ್ಯಾಸ್ ಬೆಲೆ ಕಡಿಮೆ ಮಾಡ್ತೀವಿ ಅಂದ್ರು ಮಾಡಿದ್ರಾ?, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಅಂದ್ರು ಸೃಷ್ಟಿಸಿದ್ರಾ?, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ್ರು ಹಾಕಿದ್ರಾ?" ಎಂದು ಪ್ರಧಾನಿ ನರೇಂದ್ರ ಮೋದಿಯವರ ಆಶ್ವಾಸನೆಗಳನ್ನು ಸಿದ್ದರಾಮಯ್ಯ ಪ್ರಶ್ನಿಸಿದರು.

"ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು ಪ್ರಧಾನಿ ಮೋದಿ. ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ" ಎಂದು ವ್ಯಂಗ್ಯವಾಡಿದರು.

ʼನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲಾ ಧರ್ಮ, ಜಾತಿ, ಎಲ್ಲಾ ವರ್ಗದವರಿಗೆ ಸೇರಿವೆ. ಸರ್ವರನ್ನೂ ಸಮಾನವಾಗಿ ಕಾಣುವ ಕಾರ್ಯಕ್ರಮಗಳನ್ನು ನಮ್ಮ ಕಾಂಗ್ರೆಸ್ ಸರ್ಕಾರ ರೂಪಿಸುತ್ತಿದೆ. ಇವೆಲ್ಲವನ್ನೂ ನೀವುಗಳು ನಾಡಿನ ಜನರಿಗೆ ಸರಿಯಾಗಿ ಅರ್ಥ ಮಾಡಿಸಿ ಬಿಜೆಪಿಯ ಸುಳ್ಳುಗಳಿಗೆ ತಕ್ಕ ಸತ್ಯದ ದಾಖಲೆಗಳನ್ನು ಮಂಡಿಸಿʼ ಎಂದು ಕರೆ ನೀಡಿದರು.

ನಮ್ಮ ಸರ್ಕಾರದ ಗ್ಯಾರಂಟಿಗಳನ್ನು, ನಮ್ಮ ಸಾಧನೆಗಳನ್ನು ಬಿಜೆಪಿ ಸಾಧನೆ ಎಂದು ಹಳ್ಳಿ ಹಳ್ಳಿಗಳಲ್ಲಿ ಅವರು ನಿರಂತರವಾಗಿ ನಿರ್ಲಜ್ಜದಿಂದ ಸುಳ್ಳು ಹೇಳುತ್ತಿದ್ದಾರೆ. ಹೀಗಾಗಿ ನಾಡಿನ ಜನರ ಜೇಬಿಗೆ, ಮಹಿಳೆಯರ ಖಾತೆಗೆ ಹಣ ಹಾಕುತ್ತಿರುವುದು ನಮ್ಮ‌ ಕಾಂಗ್ರೆಸ್ ಸರ್ಕಾರ. ನಮ್ಮ ನಾಡಿನ ಜನತೆಗೆ, ಮಹಿಳೆಯರಿಗೆ, ಯುವ ಸಮೂಹಕ್ಕೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುತ್ತಿರುವುದು ನಮ್ಮ ಕಾಂಗ್ರೆಸ್ ಸರ್ಕಾರ. ಆದರೆ ಬಿಜೆಪಿಯವರು ಮಾಮೂಲಿಯಂತೆ ಸುಳ್ಳು ಹೇಳುತ್ತಾ ನಮ್ಮ ಕಾರ್ಯಕ್ರಮಗಳನ್ನು ಅವರ ಕಾರ್ಯಕ್ರಮ ಎಂದು ಹೇಳಿಕೊಳ್ಳುವ ಅಪಾಯ ಇದೆ. ಈ ಸುಳ್ಳುಗಳನ್ನು ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಸಮರ್ಥವಾಗಿ ಎದುರಿಸಿ ಜನರಿಗೆ ಸತ್ಯ ತಿಳಿಸಿ ಎಂದು ಕರೆ ನೀಡಿದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಸಿಎಂ ಡಿ.ಕೆ.ಶಿವಕುಮಾರ್, ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಎಚ್.ಎಂ.ರೇವಣ್ಣ, ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ಸೂರಜ್ ಹೆಗ್ಡೆ, ಮೆಹರೋಜ್ ಖಾನ್, ಬಿಬಿಎಂಪಿ ವ್ಯಾಪ್ತಿಯ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜಿ.ಕೃಷ್ಣಪ್ಪ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X