Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿತ್ತನೆ ಬೀಜದ ದರ ಹೆಚ್ಚಳಕ್ಕೆ...

ಬಿತ್ತನೆ ಬೀಜದ ದರ ಹೆಚ್ಚಳಕ್ಕೆ ಬರಗಾಲದಿಂದ ಕುಂಠಿತವಾದ ಬೀಜೋತ್ಪಾದನೆಯೇ ಕಾರಣ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ28 May 2024 8:44 PM IST
share
ಬಿತ್ತನೆ ಬೀಜದ ದರ ಹೆಚ್ಚಳಕ್ಕೆ ಬರಗಾಲದಿಂದ ಕುಂಠಿತವಾದ ಬೀಜೋತ್ಪಾದನೆಯೇ ಕಾರಣ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2023-24ನೆ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದ್ದು, ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಏರಿಕೆಯಾಗಿವೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ ಮಾರಾಟದ ದರ ಏರಿಕೆಯಾಗಿದೆ. ಈ ದರ ಏರಿಕೆ ಮುಂಗಾರು ಬೆಳೆ ಬೆಳೆಯುವ ಎಲ್ಲ ರಾಜ್ಯಗಳಲ್ಲಿಯೂ ಆಗಿದ್ದು, ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಣೆ ನೀಡಿದ್ದಾರೆ.

ಮಂಗಳವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿತ್ತನೆ ಬೀಜಗಳ ಮಾರಾಟ ದರಗಳನ್ನು ನಿಗದಿಪಡಿಸುವ ಸಂದರ್ಭಗಳಲ್ಲಿ ಬಿತ್ತನೆ ಬೀಜ ಖರೀದಿ ದರಗಳು ಹಾಗೂ ಗರಿಷ್ಠ ಎಪಿಎಂಸಿ ಮಾರಾಟ ದರಗಳನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ. 2022-23ನೇ ಸಾಲಿಗೆ ಹೋಲಿಸಿದಾಗ 2023-24ನೇ ಸಾಲಿನಲ್ಲಿ ವಿವಿಧ ಬೆಳೆಗಳ ಖರೀದಿ ದರಗಳಲ್ಲಿ ಗರಿಷ್ಠ ಶೇ.59.58ರಷ್ಟು ವ್ಯತ್ಯಾಸವಾಗಿದೆ ಎಂದು ತಿಳಿಸಿದ್ದಾರೆ.

ರೈತರು ತಮ್ಮ ಜಮೀನಿನಲ್ಲಿಯೇ ಬೀಜಗಳನ್ನು ಉತ್ಪಾದನೆ ಮಾಡುತ್ತಾರೆ. ಇದನ್ನು ರಾಜ್ಯ ಬೀಜ ನಿಗಮ, ರಾಷ್ಟ್ರೀಯ ರಾಜ್ಯ ಬೀಜ ನಿಯಮಿತ, ಕರ್ನಾಟಕ ಎಣ್ಣೆಬೀಜ ಬೆಳೆಗಾರರ ಮಹಾ ಮಂಡಳಿ ಹಾಗೂ ಖಾಸಗಿ ಸಂಸ್ಥೆಗಳು ಕೈಗೊಂಡು ಸರಬರಾಜು ಮಾಡುತ್ತವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಾರಿ ಹೆಸರು ಬೆಳೆಯ ಬಿತ್ತನೆ ಬೀಜಗಳ ಎಲ್-1 ದರವು ಶೇ.48.5, ಉದ್ದು ಬೆಳೆಯ ದರವು ಶೇ.37.72, ತೊಗರಿ ಬೆಳೆಯ ವಿವಿಧ ತಳಿಗಳ ಬಿತ್ತನೆ ಬೀಜಗಳ ದರದಲ್ಲಿ ಶೇ.28.29 ರಿಂದ 37.69ರಷ್ಟು ಮತ್ತು ಜೋಳದ ಬೆಳೆಯ ಎಲ್-1 ದರವು ಶೇ.7.66 ರಿಂದ ಶೇ.33.33ರಷ್ಟು ಹೆಚ್ಚಾಗಿದೆ. ಬೀಜಗಳ ಖರೀದಿ ದರದಲ್ಲಿನ ಹೆಚ್ಚಳದ ಮೊತ್ತವು ಬೀಜೋತ್ಪಾದನೆಯಲ್ಲಿ ತೊಡಗಿರುವ ರೈತರಿಗೆ ವರ್ಗಾವಣೆಯಾಗಿರುತ್ತದೆ ಎನ್ನುವುದು ಗಮನಾರ್ಹ ಅಂಶವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಇದಲ್ಲದೆ ಕೆಲ ಬಿತ್ತನೆ ಬೀಜದ ದರದಲ್ಲಿ ಇಳಿಕೆ ಹಾಗೂ ಯಥಾಸ್ಥಿತಿ ಕೂಡ ಕಂಡುಬಂದಿದೆ. 2024ರ ಮುಂಗಾರು ಹಂಗಾಮಿನ ಸೋಯಾಅವರೆ ಬಿತ್ತನೆ ಬೀಜದ ದರವು 2023ರ ಮುಂಗಾರು ಹಂಗಾಮಿನ ಎಲ್-1 ದರಗಳ ಹೋಲಿಕೆಯಲ್ಲಿ ಶೇ.8ರಷ್ಟು ಕಡಿತಗೊಂಡಿದೆ. ಸೂರ್ಯಕಾಂತಿ ಬಿತ್ತನೆ ಬೀಜದ ದರ ಕಳೆದ ಸಾಲಿನಷ್ಟೇ ಇದ್ದು ಯಾವುದೇ ಬದಲಾವಣೆ ಇಲ್ಲ ಎಂದು ಸಿದ್ದರಾಮಯ್ಯ ವಿವರಿಸಿದ್ದಾರೆ.

ಬಿ.ಟಿ. ಹತ್ತಿ ಬಿತ್ತನೆ ಬೀಜಗಳನ್ನು ರಾಜ್ಯ ಸರಕಾರದ ಇಲಾಖಾ ವತಿಯಿಂದ ರಿಯಾಯತಿ ದರದಲ್ಲಿ ವಿತರಣೆ ಮಾಡುತ್ತಿಲ್ಲ. ಬಿ.ಟಿ. ಹತ್ತಿ ಬಿತ್ತನೆ ಬೀಜಗಳ ಗರಿಷ್ಠ ದರಗಳನ್ನು ಕೇಂದ್ರ ಸರಕಾರದ ವತಿಯಿಂದಲೇ ನಿಗದಿಪಡಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿನ ವಿವಿಧ ಬೆಳೆಗಳ ಬಿತ್ತನೆ ಬೀಜಗಳಲ್ಲಿನ ದರ ವ್ಯತ್ಯಾಸವು 2023ರ ಹೋಲಿಕೆಯಲ್ಲಿ ಈ ಬಾರಿ ಗರಿಷ್ಠ ಶೇ.48.50ರಷ್ಟಿದೆ. ಆದಾಗ್ಯೂ, ನೆರೆಯ ರಾಜ್ಯಗಳಲ್ಲಿನ ಪ್ರಸಕ್ತ ಸಾಲಿನ ಬಿತ್ತನೆ ಬೀಜಗಳ ದರಗಳ ಏರಿಕೆಯ ಹೋಲಿಕೆಯಲ್ಲಿ ರಾಜ್ಯದಲ್ಲಿನ ಬಿತ್ತನೆ ಬೀಜಗಳ ದರದ ಏರಿಕೆಯು ಕಡಿಮೆಯಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಉದಾಹರಣೆಗೆ ಮಹಾರಾಷ್ಟ್ರದಲ್ಲಿ ಸೋಯಾಅವರೆ ಬೆಳೆಗೆ ಪ್ರತಿ ಕ್ವಿಂಟಾಲ್‍ಗೆ ಎಲ್-1 ದರವು 8500 ರೂ.ನಿಗದಿಯಾಗಿದ್ದು ಕರ್ನಾಟಕದಲ್ಲಿ ಇದು 7270 ರೂ. ನಿಗದಿಯಾಗಿದೆ. ಅದೇ ರೀತಿ, ತೊಗರಿ ಬೆಳೆಗೆ ಮಹಾರಾಷ್ಟ್ರದಲ್ಲಿ ಪ್ರತಿ ಕ್ವಿಂಟಾಲ್‍ಗೆ 25 ಸಾವಿರ ರೂ.ಇದ್ದು ಕರ್ನಾಟಕದಲ್ಲಿ 17,900 ರೂ.ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಹೆಸರು ಮತ್ತು ಜೋಳದ ಬೆಳೆಗೆ ಪ್ರತಿ ಕ್ವಿಂಟಾಲ್‍ಗೆ ಮಹಾರಾಷ್ಟ್ರದಲ್ಲಿ ಕ್ರಮವಾಗಿ 23,500 ರೂ. ಹಾಗೂ 14 ಸಾವಿರ ರೂ. ಇದ್ದು ಕರ್ನಾಟಕದಲ್ಲಿ ಕ್ರಮವಾಗಿ 18,600 ರೂ. ಹಾಗೂ 12,500 ರೂ. ನಿಗದಿಪಡಿಸಲಾಗಿದೆ. ಈ ಹೋಲಿಕೆಯಲ್ಲಿ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ವಿವಿಧ ಬೆಳೆಗಳ ಬಿತ್ತನೆ ಬೀಜಗಳ ದರಗಳು ಗಣನೀಯವಾಗಿ ಕಡಿಮೆ ಇರುವುದು ಕಂಡುಬರುತ್ತದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X