Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದ ಹಿತಕ್ಕಾಗಿ ಕೇಂದ್ರದ ಬಳಿ...

ರಾಜ್ಯದ ಹಿತಕ್ಕಾಗಿ ಕೇಂದ್ರದ ಬಳಿ ಧ್ವನಿಗೂಡಿಸಿ : ನೂತನ ಸಂಸದರಿಗೆ ಸಿಎಂ ಸಿದ್ದರಾಮಯ್ಯ ಕರೆ

ವಾರ್ತಾಭಾರತಿವಾರ್ತಾಭಾರತಿ27 Jun 2024 8:45 PM IST
share
ರಾಜ್ಯದ ಹಿತಕ್ಕಾಗಿ ಕೇಂದ್ರದ ಬಳಿ ಧ್ವನಿಗೂಡಿಸಿ : ನೂತನ ಸಂಸದರಿಗೆ ಸಿಎಂ ಸಿದ್ದರಾಮಯ್ಯ ಕರೆ

ಹೊಸದಿಲ್ಲಿ : ರಾಜ್ಯದ ಹಿತದೃಷ್ಟಿ ಹಾಗೂ ನೆಲ, ಜಲ, ಸಂಪನ್ಮೂಲದ ಅಭಿವೃದ್ಧಿಗಾಗಿ ನೂತನವಾಗಿ ಚುನಾಯಿತರಾಗಿರುವ ಎಲ್ಲ ಸಂಸದರು ಒಕ್ಕೊರಲಿನಿಂದ ಕೇಂದ್ರ ಸರಕಾರದ ಬಳಿ ಧ್ವನಿಗೊಡಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಗುರುವಾರ ಹೊಸದಿಲ್ಲಿಯ ಖಾಸಗಿ ಹೋಟೆಲ್‍ನಲ್ಲಿ ನಡೆದ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, "ರಾಜ್ಯದ ಅಭಿವೃದ್ಧಿ ಒಂದೇ ನಮ್ಮ ಗುರಿ. ಇದರಲ್ಲಿ ರಾಜಕೀಯ, ಟೀಕೆ, ಭಾವನಾತ್ಮಕ ಆರೋಪಗಳ ಅಗತ್ಯವಿಲ್ಲ. ರಾಜ್ಯದ ಅಭಿವೃದ್ಧಿಗೆ ಸೌಹಾರ್ದಯುತವಾಗಿ ಪ್ರಯತ್ನಿಸೋಣ ಎನ್ನುವುದಷ್ಟೇ ನನ್ನ ಮನವಿ" ಎಂದು ನುಡಿದರು.

ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಅಗತ್ಯವಿದೆ. ಭದ್ರಾ ಯೋಜನೆ ಬಗ್ಗೆಯೂ ಪ್ರಯತ್ನ ಮುಂದುವರೆಸಬೇಕಾಗಿದೆ. ಕೇಂದ್ರದ ಹಣಕಾಸು ಮಂತ್ರಿ ತಮ್ಮ ಬಜೆಟ್‍ನಲ್ಲೇ ಘೋಷಣೆ ಮಾಡಿ ಒಂದು ವರ್ಷ ಕಳೆದಿದೆ. ಆ ಹಣ ಕೊಡಿಸಿಲು ಸಭೆಯಲ್ಲಿದ್ದ ಕೇಂದ್ರ ಸಚಿವರಿಗೆ ಮನವಿ ಮಾಡಿದರು.

ಕಲ್ಯಾಣ ಕರ್ನಾಟಕದ ರಾಯಚೂರಿಗೆ ಏಮ್ಸ್ ನೀಡಲು ಮನವಿ ಸಲ್ಲಿಸಿದ್ದೇವೆ. ಅದೇ ರೀತಿ, 18172 ಕೋಟಿ ಬರ ಪರಿಹಾರ ಕೇಳಿದ್ದೆವು. ಪೂರ್ತಿ ಬಂದಿಲ್ಲ. ಇದಕ್ಕಾಗಿ ಪ್ರಯತ್ನಿಸುವ ಅಗತ್ಯವಿದೆ. ರಾಜ್ಯದ ಕರಾವಳಿ ಭಾಗಗಳ ಅಭಿವೃದ್ಧಿಗಾಗಿ ಉಡಾನ್ ಯೋಜನೆಯಲ್ಲಿ ಸಲ್ಲಿಸಿರುವ ಪ್ರಸ್ತಾವನೆ ನಾಗರೀಕ ವಿಮಾನಯಾನ ಇಲಾಖೆಯಲ್ಲಿ ಇದೆ. ಇದರ ಈಡೇರಿಕೆಗೆ ಪ್ರಯತ್ನಿಸಬೇಕಾಗಿದೆ ಎಂದು ಅವರು ಉಲ್ಲೇಖಿಸಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಏರ್ ಕಾರ್ಗೋ ಕಾಂಪೆಕ್ಸ್ ಆಗಿ ಪರಿಗಣಿಸಲು ಪ್ರಸ್ತಾವನೆ ಸಲ್ಲಿಸಿದ್ದೇವೆ. ಇದರಿಂದ ರಫ್ತು ಹೆಚ್ಚಾಗಿ ಆರ್ಥಿಕ ಚಟುವಟಿಕೆ ವೇಗವಾಗುತ್ತದೆ ಎಂದ ಅವರು, ಮೈಸೂರು ಅಥವಾ ಹಾಸನಕ್ಕೆ ಮತ್ತೊಂದು ಐಐಟಿ ಬೇಕು ಎನ್ನುವ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದೇವೆ ಎಂದು ಹೇಳಿದರು.

ಕಸ್ತೂರಿ ರಂಗನ್ ವರದಿ ಸಂಪೂರ್ಣವಾಗಿ ತಿರಸ್ಕರಿಸಲು ಮನವಿ ಮಾಡಿದ್ದೇವೆ. ಇದನ್ನು ಕೂಡಲೇ ಅಂಗೀಕರಿಸಿ ಪಶ್ಚಿಮಘಟ್ಟದ ಜನರಿಗೆ ನೆಮ್ಮದಿ ಒದಗಿಸಬೇಕು. ರಾಜ್ಯ ರೈಲ್ವೇ ಸಂಪರ್ಕದಲ್ಲಿ ಹಿಂದುಳಿದಿದೆ. ಆದ್ದರಿಂದ ರಾಜ್ಯಕ್ಕೆ ಹೆಚ್ಚು ಅನುದಾನ ಒದಗಿಸಿ ರೈಲ್ವೇ ಸಂಪರ್ಕ ಹೆಚ್ಚಿಸಲು ಆದ್ಯತೆ ಮೇಲೆ ಹೆಚ್ಚಿನ ಅನುದಾನ ನೀಡಬೇಕು ಎಂದು ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಗೆ ಸಭೆಯಲ್ಲಿಯೇ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ಸಚಿವರು, ಸಂಸದರು, ರಾಜ್ಯಸಭಾ ಸದಸ್ಯರು ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

ಎಚ್‍ಡಿಕೆ ಬೆನ್ನುತಟ್ಟಿದ ಸಿಎಂ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಭೆಗೆ ಆಗಮಿಸಿದ್ದು, ಅವರನ್ನು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೈ ಕುಲುಕಿ ಬೆನ್ನು ತಟ್ಟಿ ಸ್ವಾಗತ ಕೋರಿದ್ದಾರೆ.

Delete Edit
share
ವಾರ್ತಾಭಾರತಿ
ವಾರ್ತಾಭಾರತಿ
Next Story
X