Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಜೆಟ್‌ನಲ್ಲಿ ರಾಜ್ಯದ ಕಡೆಗಣನೆ | ನೀತಿ...

ಬಜೆಟ್‌ನಲ್ಲಿ ರಾಜ್ಯದ ಕಡೆಗಣನೆ | ನೀತಿ ಆಯೋಗದ ಸಭೆ ಬಹಿಷ್ಕರಿಸಲು ನಿರ್ಧಾರ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ23 July 2024 11:10 PM IST
share
ಬಜೆಟ್‌ನಲ್ಲಿ ರಾಜ್ಯದ ಕಡೆಗಣನೆ | ನೀತಿ ಆಯೋಗದ ಸಭೆ ಬಹಿಷ್ಕರಿಸಲು ನಿರ್ಧಾರ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿರುವ ಕೇಂದ್ರ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೂ ಸೇರಿದಂತೆ ರಾಜ್ಯದ ಸಂಸದರೆಲ್ಲರ ಸಭೆ ಕರೆದು ರಾಜ್ಯದ ಅತ್ಯವಶ್ಯಕ ಬೇಡಿಕೆಗಳನ್ನು ಮುಂದಿಟ್ಟು ಮನವರಿಕೆ ಮಾಡಿಕೊಟ್ಟಿದ್ದರೂ ಇಂದು ಮಂಡಿಸಲಾಗಿರುವ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, "ಕೇಂದ್ರ ಸರ್ಕಾರದ ಈ ಉದ್ದೇಶಪೂರ್ವ ನಿರ್ಲಕ್ಷ್ಯ ಮತ್ತು ತಾರತಮ್ಯ ನೀತಿಯನ್ನು ಖಂಡಿಸಿ, ಇದೇ ಜುಲೈ ತಿಂಗಳ 27ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ದಿಲ್ಲಿಯಲ್ಲಿ ಕರೆಯಲಾಗಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ" ಎಂದು ತಿಳಿಸಿದ್ದಾರೆ.

"ಇಂದು ಮಂಡಿಸಲಾದ 2024-25ರ ಸಾಲಿನ ಬಜೆಟ್ ನೋಡಿದ ನಂತರ ನಮಗೆ ಕೇಂದ್ರ ಸರ್ಕಾರದ ಮೇಲಿನ ವಿಶ‍್ವಾಸವೇ ಹೊರಟುಹೋಗಿದೆ. ಬಜೆಟ್ ನಲ್ಲಿ ರೈತರ ಕಲ್ಯಾಣದ ಕಾಳಜಿ ವ್ಯಕ್ತಪಡಿಸಿರುವ ಹಣಕಾಸುವ ಸಚಿವರು ನಮ್ಮ ಬಹುದಿನಗಳ ಬೇಡಿಕೆಯಾಗಿರುವ ಮೇಕೆದಾಟು ಯೋಜನೆಯ ಬಗ್ಗೆ ಪ್ರಸ್ತಾವವನ್ನೇ ಮಾಡಿಲ್ಲ. ಭದ್ರಾ ಮೇಲ್ದಂಡೆಗೆ ವಿಶೇಷ ನೆರವು ನೀಡುವ ತಮ್ಮದೇ ಭರವಸೆಯನ್ನೂ ಉಳಿಸಿಕೊಳ್ಳಲಿಲ್ಲ. ಕಳಸಾ -ಬಂಡೂರಿ ಯೋಜನೆಯನ್ನೂ ನಿರ್ಲಕ್ಷಿಸಲಾಗಿದೆ" ಎಂದು ಅಸಮಾಧಾನ ವ್ಯಕ್ತಪಡಿಸಿದರು.

ʼಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3ನೇ ಹಂತದ ಯೋಜನೆ ಮತ್ತು ಬೆಂಗಳೂರು ನಗರದ ಉದ್ದೇಶಿತ ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ ಅಗತ್ಯ ಅನುಮತಿ ಮತ್ತು ಅನುದಾನವನ್ನೂ ನೀಡಿಲ್ಲ. ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ ಸೂಚನೆ ಕೂಡಾ ಬಜೆಟ್ ನಲ್ಲಿ ಇಲ್ಲ. ಕೇಂದ್ರ ಸರ್ಕಾರದ ತಾರತಮ್ಯ ನೀತಿಯನ್ನು ಸೂಕ್ಷ್ಮವಾಗಿ ಅವಲೋಕಸಿದರೆ ಬಿಜೆಪಿಯನ್ನು ತಿರಸ್ಕರಿಸಿರುವ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳ ವಿರುದ್ಧ ರಾಜಕೀಯ ಸೇಡು ತೀರಿಸಿಕೊಳ್ಳಲು ನರೇಂದ್ರ ಮೋದಿ ಅವರ ಸರ್ಕಾರ ನಿರ್ಧಾರ ಮಾಡಿದಂತಿದೆʼ ಎಂದರು.

"ದೇಶದಲ್ಲಿ 28 ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳಿವೆ ಎನ್ನುವುದನ್ನು ನರೇಂದ್ರ ಮೋದಿ ಸರ್ಕಾರ ಮರೆತಂತಿದೆ. ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಸುರಿದಿರುವ ವಿಶೇಷ ಅನುದಾನದ ಸುರಿಮಳೆಯನ್ನು ನೋಡಿದರೆ ನರೇಂದ್ರ ಮೋದಿಯವರ ಲೆಕ್ಕಾಚಾರದಲ್ಲಿ ಆ ಎರಡು ರಾಜ್ಯಗಳು ಮಾತ್ರ ಅಸ್ತಿತ್ವದಲ್ಲಿರುವ ಹಾಗೆ ಕಾಣುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಿಲುವಾಗಿದೆ" ಎಂದು ಟೀಕಿಸಿದರು.

ʼಈ ಅನ್ಯಾಯವನ್ನು ಸಹಿಸಲಾಗದು. ಈ ರೀತಿ ನಿರ್ಲಕ್ಷ್ಯಕ್ಕೊಳಗಾಗಿರುವ ಬಿಜೆಪಿಯೇತರ ಪಕ್ಷಗಳ ಆಡಳಿತದ ರಾಜ್ಯಗಳ ಜೊತೆ ಸೇರಿ ಕೇಂದ್ರ ಸರ್ಕಾರದ ತಾರತಮ್ಯ ನೀತಿ ಮತ್ತು ಸೇಡಿನ ರಾಜಕಾರಣದ ವಿರುದ್ಧ ಹೋರಾಟ ನಡೆಸಲಾಗುವುದು. ಈ ಹೋರಾಟದಲ್ಲಿ ಕೇಂದ್ರ ಸರ್ಕಾರದ ಕರ್ನಾಟಕ ವಿರೋಧಿ ನಿಲುವಿನ ಬಗ್ಗೆ ಅಸಮಾಧಾನಗೊಂಡಿರುವ ರಾಜ್ಯದ ಜನತೆ ನಮ್ಮ ಜೊತೆ ನಿಲ್ಲಲಿದ್ದಾರೆ ಎಂಬ ಭರವಸೆ ನನಗಿದೆ" ಎಂದು ಪೋಸ್ಟ್‌ನಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X