Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಾಸಿಕ್ಯೂಷನ್‌ಗೆ ಅನುಮತಿ |...

ಪ್ರಾಸಿಕ್ಯೂಷನ್‌ಗೆ ಅನುಮತಿ | ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸ : ಸಿಎಂ ಸಿದ್ದರಾಮಯ್ಯ

"ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ, ನಾನು ಯಾವುದೇ ತಪ್ಪು ಮಾಡಿಲ್ಲ"

ವಾರ್ತಾಭಾರತಿವಾರ್ತಾಭಾರತಿ19 Aug 2024 2:09 PM IST
share
ಪ್ರಾಸಿಕ್ಯೂಷನ್‌ಗೆ ಅನುಮತಿ | ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ಫೋಟೋ ಜರ್ನಲಿಸ್ಟ್ ರವರ ವತಿಯಿಂದ ಆಯೋಜಿಸಲಾಗಿದ್ದ ಫೋಟೋ ಎಕ್ಸಿಬಿಷನ್ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ನಾನು ಯಾವ ತಪ್ಪನ್ನೂ ಎಸಗಿಲ್ಲ :ರಿಟ್ ಅರ್ಜಿಯಲ್ಲಿ ಮಧ್ಯಂತರ ಪರಿಹಾರವಾಗಿ ಪ್ರಾಸಿಕ್ಯೂಷನ್ ಗೆ ತಡೆಯಾಜ್ಞೆ ನೀಡಬೇಕೆಂದು ಕೋರಲಾಗಿದೆ. ಈ ರಿಟ್ ಅರ್ಜಿಯ ಬಗ್ಗೆ ಖ್ಯಾತ ವಕೀಲರಾದ ಅಭಿಷೇಕ್ ಮನು ಸಿಂಗ್ವಿಯವರು ವಾದ ಮಂಡಿಸಲಿದ್ದಾರೆ. ನನ್ನ ಆತ್ಮಸಾಕ್ಷಿ ಸ್ಪಷ್ಟವಾಗಿದ್ದು, ನಾನು ಯಾವ ತಪ್ಪನ್ನೂ ಎಸಗಿಲ್ಲ. ನಾನು ಮಂತ್ರಿಯಾಗಿ 40 ವರ್ಷಗಳು ಕಳೆದಿದ್ದು, ಈ ಅವಧಿಯಲ್ಲಿ ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ. ಜನರ ಆಶೀರ್ವಾದದಿಂದ ಅವರ ಸೇವೆಯಲ್ಲಿ ನಿರತನಾಗಿದ್ದೇನೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಯಾವುದೇ ತಪ್ಪು ಮಾಡಿಲ್ಲವೆಂದು ರಾಜ್ಯದ ಜನರಿಗೂ ತಿಳಿದಿದೆ ಎಂದರು.

ಪಿತೂರಿಯ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟ: ಬಿಜೆಪಿಯವರು ಸಿಎಂ ರಾಜಿನಾಮೆ ಬೇಡಿಕೆಯಿರಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ರಾಜಭವನವನ್ನು ಬಳಸಿಕೊಂಡು ಬಿಜೆಪಿ, ಜೆಡಿಎಸ್ ಹಾಗೂ ಕೇಂದ್ರ ಸರ್ಕಾರದವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ದುರುದ್ದೇಶದಿಂದ ನನ್ನ ಮೇಲೆ ಬಸಿ ಬಳಿಯಲು ಇಂತಹ ಕೃತ್ಯಕ್ಕೆ ಕೈಹಾಕಿದ್ದಾರೆ. ಬಿಜೆಪಿಯವರು ದುರುದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದು, ರಾಜಕೀಯವಾಗಿ ಇದನ್ನು ಎದುರಿಸುತ್ತೇವೆ. ಈ ಪಿತೂರಿಯ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟವನ್ನು ಕೈಗೊಳ್ಳುತ್ತೇವೆ. ಇಂತಹ ರಾಜಕೀಯ ಹೋರಾಟಗಳನ್ನು ನಿರಂತರವಾಗಿ ಮಾಡಿಕೊಂಡುಬಂದಿದ್ದು, ಇನ್ನೂ ಹೆಚ್ಚಿನ ಸ್ಪೂರ್ತಿಯೊಂದಿಗೆ ಹೋರಾಡುತ್ತೇನೆ ಎಂದರು.

ನನ್ನನ್ನು ರಾಜಕೀಯವಾಗಿ ಮುಗಿಸಬಹುದು ಎಂಬುದು ಭ್ರಮೆ :ನಾನು ಬಡಜನರ ಪರವಾಗಿರುವುದೇ ಪ್ರತಿಪಕ್ಷಗಳ ಭಯಕ್ಕೆ ಕಾರಣವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿರುವುದು ಅವರನ್ನು ಕಾಡುತ್ತಿದೆ. ಸಿದ್ದರಾಮಯ್ಯನನ್ನು ರಾಜಕೀಯವಾಗಿ ಮುಗಿಸಿದರೆ, ಕಾಂಗ್ರೆಸ್ ಪಕ್ಷವನ್ನು ಮುಗಿಸಬಹುದು ಎಂಬ ಭ್ರಮೆಯಲ್ಲಿ ಪ್ರತಿಪಕ್ಷಗಳಿವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X