Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೇಂದ್ರ ಸರಕಾರ ರೈತರನ್ನು ಲೇವಾದೇವಿದಾರರ...

ಕೇಂದ್ರ ಸರಕಾರ ರೈತರನ್ನು ಲೇವಾದೇವಿದಾರರ ಕಪಿಮುಷ್ಠಿಗೆ ಒಪ್ಪಿಸಿದೆ : ಸಿಎಂ ಸಿದ್ದರಾಮಯ್ಯ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ29 Nov 2024 7:01 PM IST
share
ಕೇಂದ್ರ ಸರಕಾರ ರೈತರನ್ನು ಲೇವಾದೇವಿದಾರರ ಕಪಿಮುಷ್ಠಿಗೆ ಒಪ್ಪಿಸಿದೆ : ಸಿಎಂ ಸಿದ್ದರಾಮಯ್ಯ ಆಕ್ರೋಶ

ಹೊಸದಿಲ್ಲಿ: ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ.58ರಷ್ಟು ಕೇಂದ್ರ ಸರಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲಕೊಡುವ ಲೇವಾದೇವಿದಾರರ ಕಪಿಮುಷ್ಠಿಗೆ ಸಿಲುಕಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಶುಕ್ರವಾರ ಹೊಸದಿಲ್ಲಿರುವ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ನೀಡುತ್ತಿದ್ದ ಸಬ್ಸಡಿ ಸಾಲ ಕಡಿತಗೊಳಿಸಿದ್ದರಿಂದ ರಾಜ್ಯದಲ್ಲಿ ಮತ್ತು ದೇಶದಲ್ಲಿ ಆಹಾರ ಉತ್ಪಾದನೆಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದರು.

ರಾಜ್ಯದ ರೈತರಿಗೆ ಮಾತ್ರ ನಬಾರ್ಡ್ ಸಾಲದ ಪ್ರಮಾಣ ಕಡಿಮೆ ಮಾಡಿಲ್ಲ. ಇಡೀ ದೇಶದಲ್ಲಿ ಕಡಿತಗೊಳಿಸಲಾಗಿದೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಇದರಿಂದ ಇಡೀ ದೇಶದ ರೈತರನ್ನು ಸಂಕಷ್ಟಕ್ಕೆ ದೂಡಿದಂತಾಗಿದೆ. ಇಡೀ ದೇಶದ ಕೃಷಿ ಉತ್ಪಾದನೆ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದರು.

ನಬಾರ್ಡ್ ಶೇ.4.5ರಷ್ಟು ಬಡ್ಡಿಗೆ ರೈತರಿಗೆ ಸಾಲದ ಹಣ ನೀಡುತ್ತಿತ್ತು. ನಾವು ರೈತರಿಗೆ ಬಡ್ಡಿ ರಹಿತವಾಗಿ ಸಾಲ ನೀಡಿ ಈ ಶೇ.4.5ರಷ್ಟು ಬಡ್ಡಿಯನ್ನು ಸರಕಾರವೇ ಭರಿಸುತ್ತಿತ್ತು. ಈಗ ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕ್ ಗಳಿಂದ ಸಾಲ ಪಡೆಯುವಂತೆ ಕೇಂದ್ರ ಸರಕಾರ ಹೇಳುತ್ತಿದೆ. ಶೇ.10ರಷ್ಟು ಬಡ್ಡಿ ದರದಲ್ಲಿ ವಾಣಿಜ್ಯ ಬ್ಯಾಂಕ್ ಗಳು ಸಾಲ ನೀಡುತ್ತವೆ. ಇದರಿಂದ ಬ್ಯಾಂಕ್ ಗಳಿಗೆ ಲಾಭ ಆಗುತ್ತದೆಯೇ ಹೊರತು ರೈತರಿಗೆ ಅನುಕೂಲ ಇಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು.

15ನೇ ಹಣಕಾಸು ಆಯೋಗದಲ್ಲೂ ರಾಜ್ಯಕ್ಕೆ ಅನ್ಯಾಯ ಆಯಿತು. ಭದ್ರಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ರೂ. ಘೋಷಿಸಿ ಒಂದು ಪೈಸೆಯನ್ನೂ ಕೊಡಲಿಲ್ಲ. ಫೆರಿಫೆರಲ್ ರಿಂಗ್ ರಸ್ತೆಗೂ ಕೊಡಲಿಲ್ಲ. ಇವೆಲ್ಲದರಿಂದ 11 ಸಾವಿರ ಕೋಟಿ ರೂ. ರಾಜ್ಯಕ್ಕೆ ನಷ್ಟವಾಗಿದ್ದನ್ನೂ ಪ್ರಧಾನಮಂತ್ರಿಗೆ ನೆನಪಿಸಿದ್ದೇವೆ. ಹೀಗಾಗಿ ಈ ಬಾರಿ ಮತ್ತೆ ನಬಾರ್ಡ್ ಮೂಲಕ ಆಗಿರುವ ಅನ್ಯಾಯವನ್ನು ಸರಿಪಡಿಸಲು ಮನವಿ ಮಾಡಿದ್ದೇವೆ ಎಂದು ಅವರು ತಿಳಿಸಿದರು.

ರಾಜ್ಯದ ಸಂಸದರು ಬಾಯಿ ಬಿಡಲ್ಲ: ರಾಜ್ಯಕ್ಕೆ ನಿರಂತರ ಅನ್ಯಾಯ ಆಗುತ್ತಿದೆ. ಮಹಾದಾಯಿ, ಮೇಕೆದಾಟು ಯೋಜನೆಗೆ ಅನುಮತಿ ನೀಡುತ್ತಿಲ್ಲ. ಇಷ್ಟಾದರೂ ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ. ಮಣ್ಣಿನ ಮಗ ಅಂದುಕೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಏನು ಮಾಡುತ್ತಿದ್ದಾರೆ. ರಾಜ್ಯಸಭಾ ಸದಸ್ಯ, ಮಾಜಿ ಪ್ರಧಾನಿ ದೇವೇಗೌಡರೂ ರಾಜ್ಯಕ್ಕೆ ಆಗುತ್ತಲೇ ಇರುವ ಅನ್ಯಾಯಗಳ ವಿರುದ್ಧ ಬಾಯಿ ಬಿಡುತ್ತಿಲ್ಲ ಏಕೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X